ETV Bharat / state

ಶಾಲೆ-ಕಾಲೇಜುಗಳಲ್ಲಿ ಅಲ್ಪ ಹಣಕ್ಕೆ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗೂ ಪರಿಹಾರ ಘೋಷಿಸಿ: ಸಿದ್ದರಾಮಯ್ಯ - ಸಿದ್ದರಾಮಯ್ಯ ಯಡಿಯೂರಪ್ಪಗೆ ಪತ್ರ

ಸರ್ಕಾರ ಪ್ಯಾಕೇಜ್​ ಘೋಷಿಸುವಾಗ ಸರ್ಕಾರ ಖಾಸಗಿ ಅನುದಾನಿತ ಶಾಲೆಗಳ ಖಾಯಂ ಅಲ್ಲದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕೈಬಿಟ್ಟಿದೆ. ಹೀಗಾಗಿ ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಸಂಬಳ ಪಡೆಯದೆ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗೂ ಪರಿಹಾರ ಘೋಷಿಸಬೇಕು ಎಂದು ಪ್ರತಿನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

siddaramaiah
siddaramaiah
author img

By

Published : Jun 16, 2021, 4:50 PM IST

ಬೆಂಗಳೂರು: ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಸಂಬಳ ಪಡೆಯದೆ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗೂ ಪರಿಹಾರ ಘೋಷಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಕೊರೊನಾ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ರಾಜ್ಯದ ಜನರಿಗೆ ಸರ್ಕಾರ ಬಿಡಿಗಾಸಿನ ಪರಿಹಾರದ ಪ್ಯಾಕೇಜ್ ಘೋಷಿಸಿದೆ. ಅದರಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ಸೇರಿಸಿದ್ದಾರೆ. ಈ ಪ್ಯಾಕೇಜ್‍ನ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ ಎಂದು ತಿಳಿಸಲಾಗಿದೆ. ಆದರೆ ಈ ಪ್ಯಾಕೇಜ್ ಘೋಷಿಸುವಾಗ ಸರ್ಕಾರ ಖಾಸಗಿ ಅನುದಾನಿತ ಶಾಲೆಗಳ ಖಾಯಂ ಅಲ್ಲದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕೈ ಬಿಟ್ಟಿದೆ ಎಂದಿದ್ದಾರೆ.

ಅನುದಾನಿತ ಶಾಲೆ-ಕಾಲೇಜುಗಳಲ್ಲೂ 3-5 ಸಾವಿರ ರೂಪಾಯಿ ಮಾತ್ರ ಪಡೆದು ಕೆಲಸ ಮಾಡುವ ಸಾಕಷ್ಟು ಮಂದಿ ಅತಿಥಿ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಇದ್ದಾರೆ. ಬಹು ದೊಡ್ಡ ಸಂಖ್ಯೆಯಲ್ಲಿರುವ ಇವರನ್ನು ಸರ್ಕಾರದ ಪ್ಯಾಕೇಜ್‍ನಲ್ಲಿ ಸೇರಿಸದಿರುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ.

ಮೊದಲ ಅಲೆಯಲ್ಲೂ ಅನುದಾನಿತ ಶಾಲೆ ಕಾಲೇಜುಗಳ ಸಿಬ್ಬಂದಿ ಹೈರಾಣಾಗಿದ್ದರು. ಆಗಲೂ ಸರ್ಕಾರ ಇವರ ನೆರವಿಗೆ ಬರಲಿಲ್ಲ. ಒಂದೂವರೆ ವರ್ಷದಿಂದ ಸಂಬಳ ಇಲ್ಲದೆ ಈ ಕುಟುಂಬಗಳು ವಿಪರೀತ ಸಂಕಷ್ಟದಲ್ಲಿವೆ. ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ಅತಿಥಿ ಶಿಕ್ಷಕರು ಬೀದಿ ಬದಿ ತರಕಾರಿ, ಹೂ, ಹಣ್ಣು ಮಾರಾಟ ಮಾಡುತ್ತಿರುವುದು, ನರೇಗಾ ಕೂಲಿ ಕೆಲಸಕ್ಕೆ ಹೋಗಿರುವ ಅಸಂಖ್ಯಾತ ಪ್ರಕರಣಗಳನ್ನು ಹಾಗೂ ಸಂಕಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇವರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಇಷ್ಟಾದರೂ ಸರ್ಕಾರ ಇವರ ಕಡೆಗೆ ಗಮನ ಹರಿಸದಿರುವುದು ಅಕ್ಷಮ್ಯ ಸಂಗತಿ. ಮಕ್ಕಳಿಗೆ ಪಾಠ ಮಾಡುವ ಈ ಸಿಬ್ಬಂದಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲಾಗದ ಸ್ಥಿತಿಯಲ್ಲಿ ಇದ್ದಾರೆ. ಸರ್ಕಾರದ ಪ್ಯಾಕೇಜ್‍ನಲ್ಲಿ ಖಾಸಗಿ ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗೆ ಪರಿಹಾರ ಘೋಷಿಸಿಲ್ಲ. ಅವರಿಗೂ ಪರಿಹಾರ ಘೋಷಿಸಬೇಕು. ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು. ಅಥವಾ ಅರ್ಜಿ ಕರೆದು ಭಿಕ್ಷೆಯಂತೆ ಒಂದೆರಡು ಸಾವಿರ ರೂಪಾಯಿ ನೀಡುವ ಬದಲಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಈ ಸಿಬ್ಬಂದಿ ವಿವರಗಳನ್ನು ಪಡೆದು ನೇರವಾಗಿ ಅವರ ಖಾತೆಗಳಿಗೆ ಪರಿಹಾರದ ಹಣವನ್ನು ವರ್ಗಾಯಿಸಬೇಕೆಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.