ETV Bharat / state

ಜನವಿರೋಧಿ ಕಾಯ್ದೆಗಳ ಕಿರು ಹೊತ್ತಿಗೆ ಬಿಡುಗಡೆ.. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ- ಸಿದ್ದರಾಮಯ್ಯ - ದೆಹಲಿ ಪ್ರತಿಭಟನೆ

ಗೋಹತ್ಯೆ ನಿಷೇಧ ಕಾಯ್ದೆ ಸಹ ಜವಾಹರ್​ಲಾಲ್ ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿಯೇ ಜಾರಿಗೆ ಬಂದಿದೆ. ಇದೀಗ ಅದಕ್ಕೆ ತಿದ್ದುಪಡಿ ತರುವ ಮೂಲಕ ಇನ್ನಷ್ಟು ಸಮಸ್ಯೆಯನ್ನು ಹೆಚ್ಚಿಸುವ ಕಾರ್ಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಯ ಬದಲು ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದೆ..

Siddaramiah warns to Central government
ಕೇಂದ್ರ ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ
author img

By

Published : Jan 10, 2021, 3:23 PM IST

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರ ಹಾಗೂ ಜನವಿರೋಧಿ ಐದು ಕಾಯ್ದೆಯನ್ನು ವಾಪಸ್ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ 4 ತಿದ್ದುಪಡಿ ಕಾಯ್ದೆಗಳ ವಿವರ ನೀಡುವ ಕಿರು ಹೊತ್ತಿಗೆಯನ್ನು ಶಿವಾನಂದ ವೃತ್ತ ಸಮೀಪದ ತಮ್ಮ ಸರ್ಕಾರಿ ನಿವಾಸದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, "ಕೇಂದ್ರ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ, ಕೃಷಿ ಬೆಲೆ ಕಾತ್ರಿ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿಯನ್ನು ಜಾರಿಗೆ ತರುವ ಮೂಲಕ ರೈತರಿಗೆ, ಜನಸಾಮಾನ್ಯರಿಗೆ ಸಾಕಷ್ಟು ಸಮಸ್ಯೆ ತಂದಿಟ್ಟಿದೆ.

ದೇಶಾದ್ಯಂತ ಇದರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಜನವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ರಾಜ್ಯದಲ್ಲಿ ನಾವು ಈಗಾಗಲೇ ಇದರ ಜನಾಭಿಪ್ರಾಯ ಸಂಗ್ರಹಿಸುತ್ತಿದ್ದೇವೆ.

ಮೈಸೂರು ವಿಭಾಗ ಹಾಗೂ ಬೆಂಗಳೂರು ವಿಭಾಗದ ಸಭೆ ನಡೆಸಿದ್ದು, ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗದ ಸಭೆ ನಡೆಸಿದ ನಂತರ ನಮ್ಮ ನಾಯಕರ ಜತೆ ಚರ್ಚಿಸಿ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತೇವೆ. ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತೇವೆ" ಎಂದು ತಿಳಿಸಿದರು.

ಕೇಂದ್ರ ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ

'ಬಿಜೆಪಿ ಸರ್ಕಾರದ ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು' ಎಂಬ ಕಿರು ಹೊತ್ತಿಗೆ ಬಿಡುಗಡೆ ಮಾಡಿದ ಅವರು, ಬಿಜೆಪಿ ಸರ್ಕಾರ ಐದು ಕಾಯ್ದೆ ತಂದಿದೆ. ಇದರಲ್ಲಿ ಸುಳ್ಳು ಯಾವುದು, ಸತ್ಯ ಯಾವುದು ಎಂಬ ಅಂಶಗಳನ್ನು ಸೇರಿಸಿ ಒಂದು ಕಿರು ಹೊತ್ತಿಗೆ ತಂದಿದ್ದೇವೆ.

ಪ್ರತಿ ಕಾಯ್ದೆಯಲ್ಲಿ ಸಾಕಷ್ಟು ನ್ಯೂನತೆಗಳಿವೆ. ಎಪಿಎಂಸಿ ತಿದ್ದುಪಡಿ ಕಾಯ್ದೆಯ ಮೂಲಕ ಬಹುರಾಷ್ಟ್ರೀಯ ಕಂಪನಿಗಳ ವಹಿವಾಟು ನಡೆಸಲು ಸಹಕಾರ ಮಾಡಿ ಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ಕೃಷಿಕರು ಹಾಗೂ ರೈತರ ಸಂಕಷ್ಟಕ್ಕೆ ಮಾಡಲು ಸರ್ಕಾರ ಮುಂದಾಗಿದೆ. ಅಂಬಾನಿ ಹಾಗೂ ಆ ದಾನಿಗಳ ಅನುಕೂಲಕ್ಕೆ ಸರ್ಕಾರ ಇಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದರು.

ಗೋಹತ್ಯೆ ನಿಷೇಧ ಕಾಯ್ದೆ ಸಹ ಜವಾಹರ್​ಲಾಲ್ ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿಯೇ ಜಾರಿಗೆ ಬಂದಿದೆ. ಇದೀಗ ಅದಕ್ಕೆ ತಿದ್ದುಪಡಿ ತರುವ ಮೂಲಕ ಇನ್ನಷ್ಟು ಸಮಸ್ಯೆಯನ್ನು ಹೆಚ್ಚಿಸುವ ಕಾರ್ಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಯ ಬದಲು ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದೆ.

ಇಂತಹ ಸೂಕ್ಷ್ಮ ವಿಚಾರಗಳನ್ನು ಮುಂದಿಟ್ಟು ನಾವು ಜನರ ಬಳಿಗೆ ತೆರಳಿ ಸತ್ಯದ ಅರಿವು ಮೂಡಿಸುವ ಕಾರ್ಯ ಮಾಡುತ್ತೇವೆ. ಅಗತ್ಯವಿದ್ದರೆ ರೈತರು ಹಾಗೂ ದೇಶದ ನಾಗರಿಕರ ಪರ ಯಾವ ಹಂತದವರೆಗಿನ ಹೋರಾಟಕ್ಕೂ ನಾವು ಸಿದ್ದ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.