ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಚರ್ಚೆ ನಡೆಸಿದರು.
ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಆಕ್ಸಿಜನ್, ಬೆಡ್, ವೆಂಟಿಲೇಟರ್ಗಳ ಕೊರತೆ, ಇದಕ್ಕೆ ಪ್ರತಿಯಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಸಿದ್ದರಾಮಯ್ಯ ಮಾಹಿತಿ ಪಡೆದರು. ಅದೇ ರೀತಿ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಸಲಹೆ ನೀಡಿದರು.
ಓದಿ : ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ?: ತೇಜಸ್ವಿ ಸೂರ್ಯಗೆ ಸಿದ್ದು ಪ್ರಶ್ನೆ
ಸುದೀರ್ಘ ಸಮಾಲೋಚನೆ ನಡೆಸಿದ ಸಿದ್ದರಾಮಯ್ಯ, ಮುಂಬರುವ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಹಾಗೂ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರಕ್ಕೆ ನೀಡಿರುವ ಸಲಹೆಗಳು ಹಾಗೂ ಸೂಚನೆಯ ಬಗ್ಗೆ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ಒದಗಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಹಾಗೂ ಆಡಳಿತಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಸಹಕಾರ ಸದಾ ಇರಲಿದೆ. ತಾವು ಪ್ರತಿಪಕ್ಷದ ಸಲಹೆ, ಸೂಚನೆ ಹಾಗೂ ಸಹಾಯವನ್ನು ಪಡೆಯಬಹುದಾಗಿದೆ ಎಂದು ಭರವಸೆ ನೀಡಿದ್ದಾರೆ.