ETV Bharat / state

ಸಿಎಂ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಸರ್ಕಾರ ಐಸಿಯುನಲ್ಲಿದೆ : ಸಿದ್ದರಾಮಯ್ಯ ಲೇವಡಿ - ಕೊರೊನಾ ಎರಡನೇ ಅಲೆ

ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ. ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ,‌ ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದೆ..

siddu
siddu
author img

By

Published : Apr 19, 2021, 3:43 PM IST

ಬೆಂಗಳೂರು : ಸಿಎಂ ಬಿಎಸ್​ವೈ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

  • ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು @BJP4Karnataka ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು.
    1/5#COVID19

    — Siddaramaiah (@siddaramaiah) April 19, 2021 " class="align-text-top noRightClick twitterSection" data=" ">

ಸರಣಿ ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು ರಾಜ್ಯ ಬಿಜೆಪಿ ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದೆ. ಸೋಂಕು ಹರಡುವುದನ್ನು ತಡೆಯಲಿಕ್ಕಾಗದೇ, ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ.

  • ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ @BJP4Karnataka ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ.
    2/5

ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ. ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ,‌ ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದೆ ಎಂದಿದ್ದಾರೆ.

ವರ್ಷದ ಹಿಂದೆ ಮೊದಲ ಬಾರಿ‌ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರ್ಕಾರ ಈಗ ಕೈಚೆಲ್ಲಿ ಕೂತಿದೆ.

  • ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ.@CMofKarnataka ಆಸ್ಪತ್ರೆಯಲ್ಲಿದ್ದಾರೆ,‌
    ರಾಜ್ಯ @BJP4Karnataka ಸರ್ಕಾರ ಐ.ಸಿ.ಯು ನಲ್ಲಿದೆ.
    3/5#COVID19

ರಾಜ್ಯ ಬಿಜೆಪಿ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.