ಬೆಂಗಳೂರು: ದೋಸ್ತಿ ಸರ್ಕಾರದ ಪತನದ ಬೆನ್ನಲ್ಲೇ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಸಭೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ , ಕೆಜೆ ಜಾರ್ಜ್ ಸೇರಿ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಲು ಬಂದಿದ್ದು, ಸಭೆಗೂ ಮುನ್ನವೇ ಸ್ಪೀಕರ್ ಅವರನ್ನು ಭೇಟಿಯಾಗಲು ಸಿದ್ದು ಟೀಂ ಹೊರಟಿದೆ.
ಅತೃಪ್ತ ಶಾಸಕರ ವಿರುದ್ದ ದೂರು ನೀಡಲು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಕಾಂಗ್ರೆಸ್ ನಾಯಕರ ತಂಡ ತೆರಳಿದ್ದು, ಮುಂಬೈಯಲ್ಲಿರುವ ಅತೃಪ್ತ ಶಾಸಕರ ವಿರುದ್ದ ಸ್ಪೀಕರ್ ಗೆ ದೂರು ಕೊಡಲಿದ್ದಾರೆ ಎಂದು ತಿಳಿದುಬಂದಿದೆ.
ದೂರು ಕೊಟ್ಟ ನಂತರ ಮತ್ತೆ ಕೆಪಿಸಿಸಿ ಕಚೇರಿಗೆ ಆಗಮಿಸಿ ರಾಜಕೀಯ ಬೆಳವಣಿಗೆ ಕುರಿತು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.