ಬೆಂಗಳೂರು: ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ನನ್ನ ವಿರೋಧವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾರು ಸಮಾವೇಶ ಮಾಡಿದ್ದಾರೆ ಅವರನ್ನು ಕೇಳಿ. ಕೆ.ಎಸ್.ಈಶ್ವರಪ್ಪನವರು ಕ್ಯಾಬಿನೆಟ್ನಲ್ಲಿದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರವಾಗಿ ನಾನು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಪರಿಷತ್ ಸಭಾಪತಿ ಚುನಾವಣೆ ವಿಚಾರದ ಬಗ್ಗೆ ಮಾತನಾಡಿ, ಸಭಾಪತಿ ಚುನಾವಣೆಗೆ ಕಾಂಗ್ರೆಸ್ನಿಂದ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ. ವಿಧಾನ ಪರಿಷತ್ ಉಪಸಭಾಪತಿ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಈಗಲೂ ಇಳಿಸುತ್ತೇವೆ ಎಂದು ಹೇಳಿದರು.