ETV Bharat / state

ನಾಳೆಯೂ ಮೌನ ಸತ್ಯಾಗ್ರಹ: ಎಲ್ಲ ಜಿಲ್ಲೆಗಳಲ್ಲೂ ನಡೆಸಲು ಡಿಕೆಶಿ ಸೂಚನೆ - Etv bharat kannada

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇ.ಡಿ. ವಿಚಾರಣೆಯನ್ನು ಅನಗತ್ಯವಾಗಿ ಮುಂದುವರೆಸಿ ಕಿರುಕುಳ ನೀಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ನಾಳೆಯೂ ನಗರದಲ್ಲಿ ಮೌನ ಪ್ರತಿಭಟನೆ ನಡೆಸಲಿದೆ.

ಡಿಕೆಶಿ ಸೂಚನೆ
ಡಿಕೆಶಿ ಸೂಚನೆ
author img

By

Published : Jul 26, 2022, 10:27 PM IST

ಬೆಂಗಳೂರು: ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನಾಳೆಯೂ ವಿಚಾರಣೆಗೆ ಕರೆದಿರುವ ಹಿನ್ನೆಲೆ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಾಳೆ 'ಮೌನ ಸತ್ಯಾಗ್ರಹ' ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ.

ಜಿಲ್ಲಾ ಮುಖಂಡರು, ಶಾಸಕರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು, ಮುಂಚೂಣಿ ಘಟಕಗಳ ಜಿಲ್ಲಾ ಪ್ರತಿನಿಧಿಗಳಿಗೆ ಸೂಚಿಸಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ನೀಡಲಾಗುತ್ತಿರುವ ಕಿರುಕುಳ ನಿಲ್ಲುವವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರಿಸಬೇಕು ಎಂದು ನಿರ್ದೇಶನ ನೀಡಿರುವುದಾಗಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆಯು ನಗರದಲ್ಲಿ ಮೌನ ಪ್ರತಿಭಟನೆ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇ.ಡಿ. ವಿಚಾರಣೆಯನ್ನು ಅನಗತ್ಯವಾಗಿ ಮುಂದುವರೆಸಿ ಕಿರುಕುಳ ನೀಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ನಾಳೆಯೂ ನಗರದಲ್ಲಿ ಮೌನ ಪ್ರತಿಭಟನೆ ಮೂಲಕ ಖಂಡಿಸಲು ತೀರ್ಮಾನಿಸಿದೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಆನಂದ್ ರಾವ್ ವೃತ್ತದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಎದುರು ಮೌನ ಸತ್ಯಾಗ್ರಹ ಮುಂದುವರೆಯಲಿದೆ.

ಈ ಸತ್ಯಾಗ್ರಹದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಸಂಸದರು ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಮುಂಚೂಣಿ ಘಟಕಗಳ ಪ್ರತಿನಿಧಿಗಳು ಹಾಗೂ ಹಿರಿಯ ಮುಖಂಡರಿಗೂ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಪ್ರತಿಭಟನಾ ವೇದಿಕೆಗೆ ಆಗಮಿಸಿದ್ದ ನಟಿ ಭಾವನಾಗೆ ಕಾರ್ಯಕರ್ತರಿಂದ ತರಾಟೆ

ಇಂದೂ ಸಹ ಬೆಳಗ್ಗೆ 11 ಗಂಟೆಯಿಂದ ಕಾಂಗ್ರೆಸ್ ಭವನದಲ್ಲಿ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೂರನೇ ವಿಜ್ಞಾನದ ವಿಚಾರಣೆ ನಾಳೆ ಇರುವ ಹಿನ್ನೆಲೆ ಪ್ರತಿಭಟನೆಯನ್ನು ನಾಳೆಯೂ ಮುಂದುವರಿಸಲು ತೀರ್ಮಾನಿಸಲಾಗಿದೆ. ಸೋನಿಯಾ ಗಾಂಧಿ ವಿಚಾರಣೆ ಎದುರಿಸುವಷ್ಟು ಸಮಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.