ETV Bharat / state

ಮೃತ ವ್ಯಕ್ತಿಯ ಸಹೋದರಿಗೆ ಅನುಕಂಪದ ಉದ್ಯೋಗ ನೀಡಲಾಗದು: ಹೈಕೋರ್ಟ್

Compassionate Employment: ಸರ್ಕಾರಿ ನೌಕರ ಮೃತಪಟ್ಟರೆ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಆಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

sister-cannot-be-given-compassionate-employment-high-court
ಸಹೋದರಿಗೆ ಅನುಕಂಪದ ಉದ್ಯೋಗ ನೀಡಲಾಗದು : ಹೈಕೋರ್ಟ್
author img

By ETV Bharat Karnataka Team

Published : Sep 13, 2023, 10:44 PM IST

ಬೆಂಗಳೂರು : ಸರ್ಕಾರಿ ನೌಕರ ಮೃತಪಟ್ಟಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಬೆಸ್ಕಾಂನಲ್ಲಿ ಲೈನ್​ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತ ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಒದಗಿಸಲು ಕೆಪಿಟಿಸಿಲ್ ಮತ್ತು ಬೆಸ್ಕಾಂಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ತುಮಕೂರು ಜಿಲ್ಲೆ ಗೆದ್ಲಹಳ್ಳಿ ನಿವಾಸಿ ಜಿ.ಎಂ. ಪಲ್ಲವಿ ಎಂಬುವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮೇಲ್ಮನವಿದಾರೆಯು ಮೃತ ನೌಕರ (ಸಹೋದರ) ಸಾವನ್ನಪ್ಪಿದ ವೇಳೆ ಅವರ ಆದಾಯದ ಮೇಲೆ ತಾನು ಅಲವಂಬಿಸಿದ್ದೆ ಎಂಬುದನ್ನು ದೃಢಪಡಿಸುವ ಸಾಕ್ಷವನ್ನು ಒದಗಿಸಿಲ್ಲ. ಅಂತೆಯೇ, ಅನುಕಂಪದ ಉದ್ಯೋಗ ಪಡೆದುಕೊಳ್ಳವುದನ್ನು ಸಮರ್ಥಿಸಿಕೊಳ್ಳವುದಕ್ಕಾಗಿ ಮೃತ ನೌಕರನ ಕುಟುಂಬವು ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದೆ ಎಂಬುದನ್ನು ಸಾಬೀತುಪಡಿಸಲು ದಾಖಲೆಗಳು ಇಲ್ಲವಾಗಿದೆ. ಹೀಗಾಗಿ ಮೇಲ್ಮನವಿದಾರೆಯನ್ನು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಪರಿಗಣಿಸಲು ನಿರಾಕರಿಸಿದ ಏಕ ಸದಸ್ಯ ನ್ಯಾಯಪೀಠದ ಆದೇಶದಲ್ಲಿ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದ ನ್ಯಾಯಪೀಠ: ಅನುಕಂಪದ ಆಧಾರದ ಮೇಲೆ ನೇಮಕಾತಿಯು ಸಂವಿಧಾನದ 14 ಮತ್ತು 16ನೇ ವಿಧಿಗಳಲ್ಲಿ ಜಾರಿಗೆ ತಂದಿರುವ ಸಾರ್ವಜನಿಕ ಉದ್ಯೋಗದಲ್ಲಿ ಸಮಾನತೆಯ ಸಾಮಾನ್ಯ ನಿಯಮಕ್ಕೆ ಒಂದು ಅಪವಾದವಾಗಿದೆ. ಹಾಗಾಗಿ, ಅನುಕಂಪದ ಉದ್ಯೋಗದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ನ್ಯಾಯಾಲಯಗಳು ವ್ಯಾಖ್ಯಾನದ ಪ್ರಕ್ರಿಯೆಯ ಮೂಲಕ ಶಾಸನಬದ್ಧ ವ್ಯಾಖ್ಯಾನದ ಬಾಹ್ಯರೇಖೆಗಳನ್ನು ವಿಸ್ತರಿಸಲು ಸಾಧ್ಯವಿಲ್ಲ. ನೌಕರರ ಕುಟುಂಬ ಸದಸ್ಯ ವ್ಯಕ್ತಿ ಎಂಬುದಕ್ಕೆ ಕಾನೂನು ರೂಪಕರು ಹಲವು ಪದಗಳನ್ನು ನಿರ್ದಿಷ್ಟ ಪಡಿಸಿರುವ ವೇಳೆ ಕುಟುಂಬದ ವ್ಯಾಖ್ಯಾನಕ್ಕೆ ನ್ಯಾಯಾಲಯ ಒಂದು ಪದವನ್ನು ಸೇರಿಸಲು ಮತ್ತು ರದ್ದುಪಡಿಸಲು ಸಾಧ್ಯವಿಲ್ಲ. ನಿಯಮಕ್ಕೆ ವಿರುದ್ಧವಾಗಿರುವ ವಾದವನ್ನು ಒಪ್ಪಿದರೆ, ನಿಯಮವನ್ನು ಮತ್ತೆ ಬರೆದಂತಾಗುತ್ತದೆ. ಹಾಗಾಗಿ, ಮೇಲ್ಮನವಿದಾರೆಯ ವಾದ ಹಾಗೂ ಮನವಿ ಪರಿಗಣಿಸಲು ಸಾಧ್ಯವಾಗುವುದಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

ಅಲ್ಲದೆ, ಮೃತ ನೌಕರನ ಕುಟುಂಬ ಸದಸ್ಯರು ಮಾತ್ರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೇಮಕಾತಿ ಪಡೆದುಕೊಳ್ಳಬಹುದಾಗಿದೆ ಎಂದು ಕಾನೂನು ಹೇಳುತ್ತದೆ. ಸಾವನ್ನಪ್ಪಿದ ಸರ್ಕಾರಿ ನೌಕರನ ಮೇಲೆ ಅಲಂಬಿತರಾಗಿದ್ದೆವು ಎಂಬುದನ್ನು ದೃಢಪಡಿಸುವ ಸಾಕ್ಷ್ಯಾಧಾರಗಳ ಮೇಲೆ ಅನುಕಂಪದ ಉದ್ಯೋಗವನ್ನು ಕ್ಲೇಮು ಮಾಡಬಹುದಾಗಿದೆ ಎಂದು ಪೀಠ ತಿಳಿಸಿದೆ.

ಕರ್ನಾಟಕ ನಾಗರೀಕ ಸೇವೆಗಳ ನಿಯಮಗಳು (ಅನುಕಂಪದ ಆಧಾರದ ನೇಮಕಾತಿ) 1996ರ 2(1)(ಬಿ) ಪ್ರಕಾರ ಒಂದು ವೇಳೆ ವಿವಾಹಿತ ಪುರಷ ಸರ್ಕಾರಿ ನೌಕರ ಅನಾರೋಗ್ಯದಿಂದ ಸೇವಾವಧಿಯಲ್ಲಿ ಮೃತಪಟ್ಟಲ್ಲಿ ಅವರನ್ನು ಅಲಂಬಿಸಿರುವ ವಿಧವಾ ಪತ್ನಿ, ಮಗ ಅಥವಾ ಮಗಳು (ಅವಿವಾಹಿತೆ, ವಿವಾಹಿತೆ, ವಿಚ್ಛೇದಿತೆ ಹಾಗೂ ವಿಧವೆ) ಅನುಕಂಪದ ಆಧಾರದ ಮೇಲೆ ಉದ್ಯೋಗ ಕೋರಬಹುದಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಅದರಂತೆ ಈ ವ್ಯಾಖ್ಯಾನದಲ್ಲಿ ಸಹೋದರಿಯನ್ನು ಸೇರಿಸಿಲ್ಲ. ಸಹೋದರಿಯನ್ನು ಮೃತ ನೌಕರನ ಕುಟುಂಬದ ಸದಸ್ಯೆಯಾಗಿ ಅರ್ಥೈಸಲು ಸಾಧ್ಯವಿಲ್ಲ ಎಂದು ತಿಳಿಸಿದ ವಿಭಾಗೀಯ ಪೀಠ, ಏಕ ಸದಸ್ಯ ನ್ಯಾಯಪೀಠವು 2023ರ ಮಾರ್ಚ್​​ 30ರಂದು ಹೊರಡಿಸಿದ್ದ ಆದೇಶವನ್ನು ಪುರಸ್ಕರಿಸಿದೆ.

ಇದನ್ನೂ ಓದಿ: ವೈಯಕ್ತಿಕ ಖಾತೆಗಳ ನಿರ್ಬಂಧ: ಹೈಕೋರ್ಟ್​ನಲ್ಲಿ 25 ಲಕ್ಷ ರೂ. ಠೇವಣಿ ಇಟ್ಟ ಎಕ್ಸ್ ಕಾರ್ಪ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.