ಬೆಂಗಳೂರು: ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ನಿನ್ನೆಯಷ್ಟೇ ಬಿಬಿಎಂಪಿ ನಾಮ ನಿರ್ದೇಶಿತ ಸದಸ್ಯನನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿರುವ ಬೆನ್ನಲ್ಲೇ ಮತ್ತೊಬ್ಬನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.
ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬರುವ ಮುನ್ನ ಆರೋಪಿ ಮೊಹಮ್ಮದ್ ಮನ್ಸೂರ್ ಹರಿಬಿಟ್ಟಿದ್ದ ಆಡಿಯೋದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎಂಜಿನಿಯರ್ ಕುಮಾರ್ ಎಂಬಾತ ನನ್ನ ಬಳಿ 5 ಕೋಟಿ ರೂ. ಹಣ ತೆಗೆದುಕೊಂಡಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದ. ಈ ಹೇಳಿಕೆ ಆಧಾರದ ಸತ್ಯಾಸತ್ಯತೆ ಪರಿಶೀಲಿಸಿದ ಎಸ್ಐಟಿ ಅಧಿಕಾರಿಗಳು, ಕುಮಾರ್ ಎಂಬುವರನ್ನು ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವುದಾಗಿ ಎಸ್ಐಟಿ ಮೂಲಗಳು ತಿಳಿಸಿವೆ.