ETV Bharat / state

ಆಪರೇಷನ್​ ಕೇಸರೀಕರಣ ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ: ಯೆಚೂರಿ - ಈಟಿವಿ ಭಾರತ ಕನ್ನಡ

ಬಿಜೆಪಿಯಿಂದ ನಡೆಯುತ್ತಿರುವ ಆಪರೇಷನ್​ ಕೇಸರೀಕರಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಸೀತಾರಾಮ್ ಯೆಚೂರಿ ಹೇಳಿದರು.

KN_BNG_04_SITHARAM_YACHURI_SPEECH_SCRIPT_7208080
ಸೀತಾರಾಮ್ ಯಚೂರಿ
author img

By

Published : Aug 29, 2022, 10:11 PM IST

ಬೆಂಗಳೂರು: ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ ಮುಖ್ಯ ಪಾತ್ರ ವಹಿಸುತ್ತಿರುವುದು ಆತಂಕಕಾರಿ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದರು.

ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ನಡೆದ ರಾಮಕೃಷ್ಣ ಹೆಗಡೆ ಅವರ 96ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಭಾರತ 75 ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ಭಾರತ ಹಿಂದೂ ರಾಷ್ಟ್ರದ ಬದಲು ಜಾತ್ಯಾತೀತ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಿಸಲಾಯಿತು. ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕತೆ, ಸಾಮಾಜಿಕ ನ್ಯಾಯ, ಆಡಳಿತ ವಿಕೇಂದ್ರೀಕರಣ ಇವೇ ನಾಲ್ಕು ಅಂಶಗಳ ತಳಹದಿಯ ಮೇಲೆ ರಾಷ್ಟ್ರ ಕಟ್ಟಲಾಗಿದೆ. ಆದರೆ ಈಗ ಈ ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದರು.

ಮಹಾರಾಷ್ಟ್ರದಲ್ಲಿ ಏನಾಯಿತು ಎಂದು ಎಲ್ಲರಿಗೂ ಗೊತ್ತಿದೆ. ಇದನ್ನು ನೋಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಏನಾಗುತ್ತಿದೆ?, ಇಂದು ಹಣ ಮುಖ್ಯ ಪಾತ್ರ ವಹಿಸುತ್ತಿದೆ ಎನ್ನುವುದು ಆತಂಕಕಾರಿ ಬೆಳವಣಿಗೆ. ಕೇಂದ್ರ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುತ್ತಿದೆ. ಸಾರ್ವಜನಿಕ ಉದ್ದಿಮೆ ಜನರ ಆಸ್ತಿ. ಇದನ್ನು ಸರ್ಕಾರ ನಿರ್ವಹಣೆ ಮಾಡಬೇಕೇ ಹೊರತು ಮಾರಾಟ ಮಾಡುವುದಲ್ಲ. ಆದರೂ ಮಾರಾಟ ಮಾಡುತ್ತಿರುವುದು ಯಾಕೆ? ಎಂದು ಪ್ರಶ್ನಿಸಿದರು. ‌ಆರ್ಥಿಕ ಬಿಕ್ಕಟ್ಟು ಎದುರಾಗಿದೆ, ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳು ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಅಲೆದಾಡಬೇಕಿದೆ. ಜಿಎಸ್​ಟಿ ವ್ಯವಸ್ಥೆ ಪ್ರತಿ ರಾಜ್ಯವೂ ಕೇಂದ್ರದ ಮುಂದೆ ಬರುವಂತೆ ಮಾಡಲು ಮಾಡಿರುವ ವ್ಯವಸ್ಥೆ ಆಗಿದೆ ಎಂದು ಬಿಜೆಪಿ ಧೋರಣೆ ಖಂಡಿಸಿದರು.

ರಾಮಕೃಷ್ಣ ಹೆಗಡೆ ಕರ್ನಾಟಕದಲ್ಲಿ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿ ಆಗಿದ್ದರು. ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯುವ ಕೆಲಸ ಮಾಡಿದ್ದರು. ಸಮಾಜವಾದ, ಜಾತ್ಯತೀತ, ಪ್ರಜಾಪ್ರಭುತ್ವ ವ್ಯವಸ್ಥೆಗೆ ರಾಮಕೃಷ್ಣ ಹೆಗಡೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಇದನ್ನೂ ಓದಿ: ಮೋದಿ ಒರಟು ವ್ಯಕ್ತಿ ಅಂದ್ಕೊಂಡಿದ್ದೆ, ಆದ್ರೆ ಅವ್ರಿಗೆ ಮಾನವೀಯತೆ ಇದೆ: ಗುಲಾಂ ನಬಿ ಆಜಾದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.