ಬೆಂಗಳೂರು : ನಗರದಲ್ಲಿ ಕೋವಿಡ್ ಎರಡನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದು, 6 ತಿಂಗಳ ಹಸುಗೂಸು ಸೋಂಕಿನಿಂದ ಸಾವನ್ನಪ್ಪಿದೆ.
ವಿಷಮ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಏಪ್ರಿಲ್ 15 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಂದೇ ಕೊನೆಯುಸಿರೆಳೆದಿದೆ.
![Six month baby dies from Covid in Bengaluru](https://etvbharatimages.akamaized.net/etvbharat/prod-images/kn-bhg-1-covid-child-death-script-7201801_18042021103734_1804f_1618722454_950.jpg)
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕಾದ ಜನರು ನಿರ್ಲಕ್ಷ್ಯ ವಹಿಸುತ್ತಿದ್ದು ಗುಂಪು ಸೇರುವುದು , ಮಾಸ್ಕ್ ಧರಿಸದೇ ಓಡಾಡುವುದು ಕಂಡುಬರುತ್ತಿದೆ. ನಿರ್ಲಕ್ಷ್ಯದಿಂದಾಗಿ ರಾಜಧಾನಿಯಲ್ಲಿ ಸೋಂಕಿತರು ಮತ್ತು ಸಾವಿನ ಸಂಖ್ಯೆ ಹೆಚ್ಚಾಗಿವೆ.