ETV Bharat / state

ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ 6 ಸಾವಿರ ಉಪನ್ಯಾಸಕರು ಗೈರು: ಕ್ರಮದ ಎಚ್ಚರಿಕೆ

ಏಪ್ರಿಲ್​​ 5ರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಆರಂಭಗೊಂಡಿದ್ದು, ಮೊದಲ ದಿನ ಸುಮಾರು 6000 ಉಪನ್ಯಾಸಕರು ಗೈರಾಗಿದ್ದಾರೆ.

six-thousand-lecturers-absent-for-second-puc-evaluation
ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ ಆರು ಸಾವಿರ ಉಪನ್ಯಾಸಕರ ಗೈರು: ಕ್ರಮದ ಎಚ್ಚರಿಕೆ..!
author img

By

Published : Apr 6, 2023, 8:09 PM IST

ಬೆಂಗಳೂರು : ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯಾರಂಭಗೊಂಡಿದೆ. ರಾಜ್ಯಾದ್ಯಂತ 65 ಕೇಂದ್ರಗಳಲ್ಲಿ 20 ದಿನಗಳ ಕಾಲ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮೊದಲ ದಿನದ ಮೌಲ್ಯಮಾಪನಕ್ಕೆ 6 ಸಾವಿರ ಉಪನ್ಯಾಸಕರು ಗೈರಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕಾರಣ ಹೊರತುಪಡಿಸಿ ಗೈರಾಗಿದ್ದಲ್ಲಿ ಅಂತಹ ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 5 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಂಡಿದೆ. 20 ದಿನಗಳ ಕಾಲ ನಡೆಯಲಿರುವ ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಸುತ್ತಿದ್ದಾರೆ. ಆದರೆ ಮೊದಲ ದಿನದ ಮೌಲ್ಯಮಾಪನ ಕಾರ್ಯಕ್ಕೆ 6 ಸಾವಿರ ಉಪನ್ಯಾಸಕರು ಗೈರಾಗಿದ್ದು, 19 ಸಾವಿರ ಉಪನ್ಯಾಸಕರು ಮೌಲ್ಯಮಾಪನ ಕಾರ್ಯ ನಡೆಸಿದರು. ಗೈರಾದ ಉಪನ್ಯಾಸಕರ ಸಂಪರ್ಕ ಕಾರ್ಯ ನಡೆಸಲು ಜಿಲ್ಲೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾದವರನ್ನು ಹೊರತುಪಡಿಸಿ ಇತರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಲು ನಿರ್ದೇಶನ ನೀಡಲಾಗಿದೆ.

ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಆದರೆ ಮೌಲ್ಯಮಾಪನಕ್ಕಿರುವ ಕೆಲವರನ್ನು ಚುನಾವಣಾ ಕರ್ತವ್ಯಕ್ಕೂ ಬಳಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮೌಲ್ಯಮಾಪಕರ ಸಂಖ್ಯೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಶೇ.20ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಉಪನ್ಯಾಸಕರು ಗೈರಾಗಿದ್ದಾರೆ. ಇದು ಹೀಗೆಯೇ ಮುಂದುವರೆದಲ್ಲಿ 20 ದಿನದ ಬದಲಿಗೆ 1 ತಿಂಗಳ ಕಾಲ ಮೌಲ್ಯಮಾಪನ ಕಾರ್ಯ ನಡೆಯಲಿದೆ ಎನ್ನಲಾಗಿದೆ.

ರಾಜ್ಯದ ಎಲ್ಲಾ 65 ಮೌಲ್ಯಮಾಪನ ಕೇಂದ್ರಗಳಲ್ಲಿಯೂ ಉತ್ತರ ಪತ್ರಿಕೆಗಳ ಮೌಲ್ಯಮಾಪಕ ಕಾರ್ಯ ಆರಂಭಗೊಂಡಿದ್ದು, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ. ಆದರೆ ಇದೀಗ ಉಪನ್ಯಾಸಕರ ಗೈರು ಫಲಿತಾಂಶ ವಿಳಂಬವಾಗುವ ಸಾಧ್ಯತೆಯನ್ನು ಎದುರಾಗಿಸುತ್ತಿದೆ. ಹಾಗಾಗಿ ಗೈರಾದ ಉಪನ್ಯಾಸಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು ಕಾರಣ ಕೇಳಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರನ್ನು ಹೊರತುಪಡಿಸಿ ಇತರರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಆ ಮೂಲಕ ಗೈರು ತಪ್ಪಿಸಲು ಪ್ರಯತ್ನ ನಡೆಸಿದ್ದು, ಫಲಿತಾಂಶ ವಿಳಂಬವಾಗದಂತೆ ನೋಡಿಕೊಳ್ಳಲು ಯತ್ನಿಸುತ್ತಿದೆ. ಆದರೂ ಇದೇ ಪ್ರಮಾಣದ ಗೈರು ಮುಂದುವರೆದಲ್ಲಿ ಕನಿಷ್ಟ 8 ದಿನ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ. ಹಾಗಾದಲ್ಲಿ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ : ಪಿಯು ವಿಜ್ಞಾನ, ವಾಣಿಜ್ಯ ಪಠ್ಯದಲ್ಲಿ ಕಡಿತ: ಯಾವೆಲ್ಲ ವಿಷಯದಲ್ಲಿ ಕತ್ತರಿ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.