ETV Bharat / state

ರಾಜ್ಯದಲ್ಲಿ ಕೌಶಲ್ಯ ಬೇಡಿಕೆ ನಿರ್ಧಾರಣಾ ಸಮೀಕ್ಷೆ: ಸಚಿವ ಅಶ್ವತ್ಥನಾರಾಯಣ್

‘ಮೇಕ್ ಇನ್ ಇಂಡಿಯಾ’ ರೀತಿಯಲ್ಲಿ ‘ಮೇಕ್ ಇನ್ ಕರ್ನಾಟಕ’ಕ್ಕೆ ಆದ್ಯತೆ ಕೊಡಬೇಕಾದ ಅಗತ್ಯವಿದೆ. ಜೊತೆಗೆ, ಕೈಮಗ್ಗದವರು ಸೇರಿದಂತೆ ರಾಜ್ಯದೆಲ್ಲೆಡೆ ಇರುವ ಕುಶಲಕರ್ಮಿಗಳ ಮ್ಯಾಪಿಂಗ್ ಸಿದ್ಧಪಡಿಸಬೇಕಾದ ಮಹತ್ವದ ಬಗ್ಗೆ ವಿವರಿಸುತ್ತಾ, ರಾಜ್ಯದಲ್ಲಿ ಅರೆವಾಹಕ ಮತ್ತು ಎಲೆಕ್ಟ್ರಾನಿಕ್ಸ್ ವಲಯಗಳ ಬೆಳವಣಿಗೆಗೆ ಒತ್ತು ಕೊಡುವುದಾಗಿ ಡಾ.ಅಶ್ವತ್ಥನಾರಾಯಣ್ ತಿಳಿಸಿದರು.

ರಾಜ್ಯದಲ್ಲಿ ಕೌಶಲ್ಯ ಬೇಡಿಕೆ ನಿರ್ಧಾರಣಾ ಸಮೀಕ್ಷೆ

author img

By

Published : Nov 3, 2021, 9:07 PM IST

ನವದೆಹಲಿ/ಬೆಂಗಳೂರು: ಯೋಜಿತ ಕೌಶಲ್ಯ ತರಬೇತಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯದಲ್ಲಿ ‘ಕೌಶಲ್ಯ ಬೇಡಿಕೆ ನಿರ್ಧಾರಣಾ ಸಮೀಕ್ಷೆ’ ನಡೆಸಲು ನಿರ್ಧರಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರೊಂದಿಗೆ ನಡೆಸಿದ ಸಭೆಯ ವೇಳೆ ಈ ನಿರ್ಧಾರ ಕೈಗೊಳ್ಳಲಾಯಿತು. ಈ ರೀತಿಯ ಸಮೀಕ್ಷೆ ಮಾಡಿಸುವುದರಿಂದ ರಾಜ್ಯದ ಯಾವ್ಯಾವ ವಲಯದಲ್ಲಿ ಎಂತೆಂತಹ ಕೌಶಲ್ಯಗಳಿಗೆ ಬೇಡಿಕೆ ಇದೆ ಎಂಬುದರ ಸ್ಪಷ್ಟ ಚಿತ್ರಣ ಸಿಗುತ್ತದೆ. ಇದನ್ನು ಆಧರಿಸಿ ಪ್ರಸ್ತುತ ಬೇಡಿಕೆಗಳಿಗೆ ಅನುಸಾರವಾಗಿ ಯುವಜನತೆಯನ್ನು ತರಬೇತುಗೊಳಿಸಲು ಅನುಕೂಲವಾಗುತ್ತದೆ ಎಂದರು.

‘ಮೇಕ್ ಇನ್ ಇಂಡಿಯಾ’ ರೀತಿಯಲ್ಲಿ ‘ಮೇಕ್ ಇನ್ ಕರ್ನಾಟಕ’ಕ್ಕೆ ಆದ್ಯತೆ ಕೊಡಬೇಕಾದ ಅಗತ್ಯವಿದೆ. ಜೊತೆಗೆ, ಕೈಮಗ್ಗದವರು ಸೇರಿದಂತೆ ರಾಜ್ಯದೆಲ್ಲೆಡೆ ಇರುವ ಕುಶಲಕರ್ಮಿಗಳ ಮ್ಯಾಪಿಂಗ್ ಸಿದ್ಧಪಡಿಸಬೇಕಾದ ಮಹತ್ವದ ಬಗ್ಗೆ ವಿವರಿಸುತ್ತಾ, ರಾಜ್ಯದಲ್ಲಿ ಅರೆವಾಹಕ ಮತ್ತು ಎಲೆಕ್ಟ್ರಾನಿಕ್ಸ್ ವಲಯಗಳ ಬೆಳವಣಿಗೆಗೆ ಒತ್ತು ಕೊಡುವುದಾಗಿ ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ರಾಷ್ಟ್ರೀಯ ಮಟ್ಟದ ಐ.ಟಿ.ಸಚಿವರ ಸಮಾವೇಶವೊಂದನ್ನು ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಆಗ ಅಶ್ವತ್ಥ ನಾರಾಯಣ, ಇಂತಹ ಸಮಾವೇಶವನ್ನು ಕರ್ನಾಟಕದಲ್ಲೇ ನಡೆಸಲು ಕೋರಿದರು. ಇದರಿಂದ ಐಟಿ ಹಾಗೂ ಐಟಿಇಎಸ್ ಆಧಾರಿತ ಹೊಸ ತಾಂತ್ರಿಕತೆಗಳಲ್ಲಿ ರಾಜ್ಯದಲ್ಲಿ ಆಗಿರುವ ಬೆಳವಣಿಗೆಗಳನ್ನು ಪ್ರದರ್ಶಿಸಲು ಅವಕಾಶವಾಗುತ್ತದೆ ಎಂದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜೀವ್ ಅವರು, ಈ ಸಂಬಂಧವಾಗಿ ಕೇಂದ್ರ ಇಲಾಖೆಗೆ ಪತ್ರವನ್ನು ಬರೆಯಲು ಸಲಹೆ ನೀಡಿದರು.

ಇದಕ್ಕೆ ಮುನ್ನ ಸಚಿವ ನಾರಾಯಣ ಐವರು ಕೇಂದ್ರ ಸಚಿವರನ್ನು ಭೇಟಿಯಾಗಿ ತಮ್ಮ ಇಲಾಖೆಗಳ ಪ್ರಸ್ತಾವಗಳ ಬಗ್ಗೆ ಚರ್ಚಿಸಿ ಸಹಕಾರ ಕೋರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.