ETV Bharat / state

ರಾಜ್ಯದ 10 ಲಕ್ಷ ಯುವಜನರಿಗೆ ಕೌಶಲ ತರಬೇತಿ: ಸಚಿವ ಅಶ್ವತ್ಥ ನಾರಾಯಣ್​ - ಕೌಶಲ್ಯಾಭಿವೃದ್ಧಿ ಸಚಿವ ಸಿ ಎನ್ ಅಶ್ವತ್ಥ ನಾರಾಯಣ್

ಯುವಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲು ಸರ್ಕಾರ ಸಿದ್ಧವಾಗಿದೆ. ಹೀಗಾಗಿ, ಪದವಿ ಕೋರ್ಸ್​ಗಳಲ್ಲಿ ಡಿಜಿಟಲ್, ಹಣಕಾಸು ಮತ್ತು ತಂತ್ರಜ್ಞಾನ ಸಾಕ್ಷರತೆಗಳನ್ನು ಕಡ್ಡಾಯಗೊಳಿಸಲಾಗಿದೆ. ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿ ಎನ್ ಅಶ್ವತ್ಥ ನಾರಾಯಣ್​ ಹೇಳಿದರು.

Minister Ashwath Narayan
ಸಚಿವ ಅಶ್ವತ್ಥ ನಾರಾಯಣ್​
author img

By

Published : Aug 27, 2022, 10:01 AM IST

ಬೆಂಗಳೂರು: ರಾಜ್ಯದ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ್​ ಹೇಳಿದರು.

ಶುಕ್ರವಾರ ಸರ್ಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಪ್ರಗತಿ ಪಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಆನ್ ಲೈನ್ ನೋಂದಣಿ ಮಾಡಿಕೊಂಡು ಪಾಲ್ಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಮೇಳ ಪ್ರಗತಿ ಪಥ ಕಾರ್ಯಕ್ರಮದಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ್​

ಇದನ್ನೂ ಓದಿ: ಟೊಯೋಟಾ ಬಿಡದಿ ಘಟಕದಲ್ಲಿ ಹೊಸ ಯೋಜನೆಗಳಿಗೆ ಚಾಲನೆ ಕೊಟ್ಟ ಸಚಿವ ಅಶ್ವತ್ಥ​ ನಾರಾಯಣ್

ಯುವಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲು ಸರ್ಕಾರ ಸಿದ್ಧವಾಗಿದೆ. ಹೀಗಾಗಿ, ಪದವಿ ಕೋರ್ಸ್​ಗಳಲ್ಲಿ ಡಿಜಿಟಲ್, ಹಣಕಾಸು ಮತ್ತು ತಂತ್ರಜ್ಞಾನ ಸಾಕ್ಷರತೆಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ವಿವರಿಸಿದರು.

ನುರಿತ ಮಾನವ ಸಂಪನ್ಮೂಲ ಪೂರೈಸಲು ಸಾಧ್ಯವಾಗುತ್ತಿಲ್ಲ: ಸೂಕ್ತ ವಿದ್ಯಾಭ್ಯಾಸ, ತಕ್ಕ ಅರ್ಹತೆ ಮತ್ತು ಆಧುನಿಕ ಕೌಶಲ್ಯಗಳು ಇದ್ದರೆ ಅವಕಾಶಗಳಿಗೆ ಬರವಿಲ್ಲ. ವಾಸ್ತವವಾಗಿ ಉದ್ಯಮ ರಂಗವು ಬಯಸುತ್ತಿರುವಷ್ಟು ನುರಿತ ಮಾನವ ಸಂಪನ್ಮೂಲವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ನುಡಿದರು.

ಇದನ್ನೂ ಓದಿ: ಸೈಬರ್ ಭದ್ರತೆ, ಡೇಟಾ ಸೆಂಟರ್‌ ನೂತನ ನೀತಿ ಪ್ರಕಟವಾಗಲಿದೆ:ಸಚಿವ ಅಶ್ವತ್ಥ ನಾರಾಯಣ್

ನೆಪಮಾತ್ರದ ಪದವಿಗಳನ್ನು ಬಿಡಲಾಗಿದೆ: ನೆಪಮಾತ್ರದ ಪದವಿಗಳನ್ನು ಬಿಟ್ಟು ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ. ಈಗಾಗಲೇ ವಿನೂತನ ಮತ್ತು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.

ನಗರದಲ್ಲಿ ರಚನಾತ್ಮಕ ವಾತಾವರಣ: ಬೆಂಗಳೂರು ಮತ್ತು ಕರ್ನಾಟಕ ಇಂದು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ. ಇದಕ್ಕೆ ಇಲ್ಲಿರುವ ರಚನಾತ್ಮಕ ವಾತಾವರಣವೇ ಕಾರಣ ಎಂದು ಸಚಿವರು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ: ಥಾಯ್ಲೆಂಡ್ ಜೊತೆ ಶಿಕ್ಷಣ, ಐಟಿ, ಬಿಟಿ ಸಹಕಾರಕ್ಕೆ ರಾಜ್ಯ ಉತ್ಸುಕ : ಸಚಿವ ಡಾ. ಅಶ್ವತ್ಥ​ ನಾರಾಯಣ್​

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾತನಾಡಿದರು. ಈ ವೇಳೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಎಲ್. ಕೃಷ್ಣಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಎಸ್. ಶೈಲಜಾ, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಸಂಜಯ್ ಉದಾನಿ, ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.