ETV Bharat / state

ನಾಡ 'ಪರ್ವ'ಕ್ಕೆ ಎಸ್​.ಎಲ್​. ಭೈರಪ್ಪ ಚಾಲನೆ: ದಸರೆಗೆ ಈ ಸಾರಿ ಸಾಹಿತ್ಯದ ಮೆರಗು

ಸಾಹಿತಿ ಎಸ್​.ಎಲ್​.ಭೈರಪ್ಪ ಅವರು ಈ ಭಾರಿಯ ನಾಡ ಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರ ಈಗಾಗಲೇ ₹ 20 ಕೋಟಿಯಷ್ಟು ಅನುದಾನ ಬಿಡುಗಡೆ ಮಾಡಲಿದೆ ಎಂದು ಸಿಎಂ ಬಿ.ಎಸ್​​.ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಿಎಂ ಬಿ.ಎಸ್.ಯಡಿಯೂರಪ್ಪ, ಸಾಹಿತಿ ಎಸ್.ಎಲ್.ಭೈರಪ್ಪ
author img

By

Published : Aug 14, 2019, 7:16 PM IST

ಬೆಂಗಳೂರು: ಐತಿಹಾಸಿಕ ದಸರಾ ಮಹೋತ್ಸವವನ್ನು ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಸೆಪ್ಟೆಂಬರ್ 28ರಂದು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ದಸರಾ ಆಚರಿಸಲು ₹ 20.50 ಕೋಟಿಯನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಈ ಬಾರಿ ಹೊರ ರಾಜ್ಯದ ಕಲಾವಿದರನ್ನು ಕರೆಸುವುದಕ್ಕಿಂತ ನಮ್ಮ ರಾಜ್ಯದಲ್ಲಿಯೇ ಪ್ರತಿಭಾವಂತ ಕಲಾವಿದರಿಗೆ ಅವಕಾಶ ನೀಡುವುದರಿಂದ ಖರ್ಚಿನ ಹೊರೆಯನ್ನು ತಗ್ಗಿಸಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸುತ್ತೇವೆ ಎಂದು ಈ ಹಿಂದೆ ಹೇಳಿದ್ದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರಲಿಲ್ಲ. ಪ್ರವಾಸಿಗರು ಬರದೆ ಹೋಗಿದ್ದರಿಂದ ಆರ್ಥಿಕ ಚಟುವಟಿಕೆಗಳು ನೀರಸವಾದವು. ಇದನ್ನು ಗಮನದಲ್ಲಿಟ್ಟುಕೊಂಡು ಮಹೋತ್ಸವ ಆಚರಿಸೋಣ ಎಂದು ಹಲವರು ಹೇಳಿದರು.

ದೀಪಾಲಂಕಾರಗಳು ಹೊರತು ಪಡಿಸಿ ಉಳಿದೆಲ್ಲವೂ ನಿಗಧಿತ ಪಟ್ಟಿಯಂತೆ ನಡೆಯುತ್ತವೆ. ಮುಂದಿನ ಯಾವುದೇ ಬದಲಾವಣೆಗಳು ಘಟಿಸಿದಲ್ಲಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Intro:Body:

national

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.