ETV Bharat / state

ಪದ್ಮವಿಭೂಷಣ ಮಾಜಿ ಸಿಎಂ ಎಸ್ ಎಂ ಕೃಷ್ಣರಿಗೆ ಕನ್ನಡ ಸಾಹಿತ್ಯ ಪರಿಷತ್​ದಿಂದ ಸನ್ಮಾನ - ನಾಡೋಜ ಡಾ ಮಹೇಶ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಗೌರವ ತವರು ಮನೆಯ ಗೌರವ ಸಿಕ್ಕಂತಾಗಿದೆ - ಹಾವೇರಿ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ - 7 ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯತತ್ಪರತೆಗೆ ಎಸ್​ ಎಂ ಕೃಷ್ಣರಿಂದ ಮೆಚ್ಚುಗೆ ನುಡಿ.

Kannada Sahitya Parishad Honored to SM Krishna
ಪದ್ಮವಿಭೂಷಣ ಮಾಜಿ ಸಿಎಂ ಎಸ್ ಎಂ ಕೃಷ್ಣರಿಗೆ ಕನ್ನಡ ಸಾಹಿತ್ಯ ಪರಿಷತ್​ದಿಂದ ಸನ್ಮಾನ
author img

By

Published : Mar 8, 2023, 9:23 PM IST

Updated : Mar 9, 2023, 8:58 AM IST

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಇತ್ತೀಚೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಎಸ್.ಎಂ. ಕೃಷ್ಣ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕನ್ನಡಿಗರ ಅಸ್ಮಿತೆಯ ಪ್ರತೀಕ ಕನ್ನಡ ಸಾಹಿತ್ಯ ಪರಿಷತ್ತು ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿತು. ಸಮಸ್ತ ಕನ್ನಡಿಗರ ಪರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಎಸ್.ಎಂ. ಕೃಷ್ಣ ಅವರಿಗೆ ಗೌರವ ಸಮರ್ಪಣೆ ಮಾಡಿದರು.

ತವರು ಮನೆಯ ಗೌರವ ದಕ್ಕಿದೆ: ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಗೌರವವನ್ನು ಸಂತಸದಿಂದ ಸ್ವಿಕರಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಗೌರವ ತವರು ಮನೆಯ ಗೌರವಕ್ಕೆ ಸರಿಸಮನಾಗಿದೆ. ಈ ಗೌರವ ಸಮಸ್ತ ಕನ್ನಡಿಗರಿಂದ ಪ್ರದಾನ ಮಾಡಲಾಗಿದೆ. 7 ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ಇತ್ತೀಚಿನ ಬೆಳೆವಣಿಗೆಯನ್ನು ಗಮನಿಸುತ್ತಾ ಇರುವೆ. ಪ್ರಪಂಚದಾದ್ಯಂತ ಹರಡಿ ಹಂಚಿ ಹೋಗಿರುವ ಕನ್ನಡಿಗರನ್ನು ಒಂದುಗೂಡಿಸಲು ನಾಡೋಜ ಡಾ ಮಹೇಶ ಜೋಶಿ ಕೈಗೊಂಡ ಕ್ರಮ ಸ್ವಾಗತಾರ್ಹ, ಅವರ ಕಾರ್ಯತತ್ಪರತೆ ಕಂಡಾಗ ಸಾಹಿತ್ಯ ಪರಿಷತ್ತಿಗೆ ಸೂಕ್ತ ಸಾರಥಿ ಸಿಕ್ಕಿದ್ದಾರೆ ಎನ್ನುವಲ್ಲಿ ಸಂಶಯವಿಲ್ಲ ಎಂದು ಶ್ಲಾಘಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ: ಹಾವೇರಿಯಲ್ಲಿ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಾಖಲೆ ರೀತಿಯಲ್ಲಿ ಯಶಸ್ವಿಗೊಳಿಸಿದ್ದಾರೆ. ಅದೇ ರೀತಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಭರ್ಜರಿಯಾಗಿ ನಡೆಸುವ ಮೂಲಕ ದಾಖಲೆ ಸೃಷ್ಟಿಮಾಡುವ ಜವಾಬ್ದಾರಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ. ಅದನ್ನು ನಾಡೋಜ ಡಾ. ಮಹೇಶ ಜೋಶಿ ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ. ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಮ್ಮೇಳಕ್ಕೆ ತಮ್ಮ ಸಲಹೆ ಸಹಕಾರ ಕಾಲ ಕಾಲಕ್ಕೆ ಇರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭರವಸೆ ವ್ಯಕ್ತಪಡಿಸಿದರು.

ಎಸ್ ಎಂ ಕೃಷ್ಣರಿಗೆ ಪದ್ಮವಿಭೂಷಣ ಪ್ರಶಸ್ತಿ ಹೆಮ್ಮೆಯ ಸಂಗತಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ ಹಿರಿಯರು ಹಾಗೂ ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಸಿಲಿಕಾನ್ ಸಿಟಿ ಎನ್ನುವ ಹೆಗ್ಗಳಿಕೆಗೆ ಏರಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಹೆಮ್ಮೆಯಿಂದ ಅವರನ್ನು ಗೌರವಿಸುತ್ತಿದೆ ಎಂದು ನಾಡೋಜ ತಿಳಿಸಿದರು.

ಕಸಾಪಗೆ ಎಸ್ ಎಂ ಕೃಷ್ಣರ ಸಲಹೆ ಅಗತ್ಯ: ಇದೇ ಸಂದರ್ಭದಲ್ಲಿ ಮುಂದೆ ನಡೆಯಲಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅವರ ಮಾರ್ಗದರ್ಶನದ ಅವಶ್ಯಕತೆ ಇದೆ. ಮಂಡ್ಯ ಸಮ್ಮೇಳನವನ್ನು ನ ಭೂತೋ ನ ಭವಿಷ್ಯತಿಃ ಎನ್ನುವ ರೀತಿಯಲ್ಲಿ ನಡೆಸುವ ಇಂಗಿತವನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದ್ದು, ಅದಕ್ಕೆ ಹಿರಿಯರು ಹಾಗೂ ನಾಡಿನ ಬಗ್ಗೆ ದೂರ ದೃಷ್ಟಿತ್ವವನ್ನು ಹೊಂದಿರುವ ಎಸ್.ಎಂ. ಕೃಷ್ಣ ಅವರ ಸಲಹೆ ಸೂಚನೆಗಳನ್ನು ಪರಿಷತ್ತು ನಿರೀಕ್ಷಿಸುತ್ತಿದೆ.

ಅದಕ್ಕೆ ಅವರು ತುಂಬ ಹೃದಯದಿಂದ ಸಹಕರಿಸುವ ಭರವಸೆಯನ್ನು ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಕಾರ್ಯಚಟುವಟಿಕೆಗಳನ್ನು ಹತ್ತಿರದಿಂದ ಗಮನಿಸುತ್ತಿರುವ ಅವರು ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ಯೋಜನೆ ನಿಜಕ್ಕೂ ಶ್ಲಾಘನೀಯ ಎಂದು ಬಣ್ಣಿಸಿದ್ದಾರೆ ಎಂದು ಡಾ. ಮಹೇಶ ಜೋಶಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷ ಡಾ. ಬಿ. ಎಂ. ಪಟೇಲ್ ಪಾಂಡು ಹಾಜರಿದ್ದರು.

ಇದನ್ನೂಓದಿ: 1 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯಾಗಿ ಕರ್ನಾಟಕ: ಕ್ರಿಯಾ ಯೋಜನೆ ಬಿಡುಗಡೆ

Last Updated : Mar 9, 2023, 8:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.