ಬೆಂಗಳೂರು: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಝುಬಿನ್ ಇರಾನಿ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಂಗನವಾಡಿ ಡ್ಯಾಶ್ ಬೋರ್ಡ್ ಕುರಿತು ಸಮಾಲೋಚನೆ ನಡೆಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್ ಸರ್ಕಾರಿ ನಿವಾಸಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗಮಿಸಿದರು. ಅವರನ್ನು ಮುಖ್ಯಮಂತ್ರಿಯವರ ಪತ್ನಿ ಚೆನ್ನಮ್ಮ ಸ್ಥಳೀಯ ಸಂಪ್ರದಾಯದಂತೆ ಅರಿಶಿನ ಕುಂಕುಮ ಹಾಗೂ ಉಡುಗೊರೆ ನೀಡಿ ಸತ್ಕರಿಸಿದರು. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.
ಇದನ್ನೂ ಓದಿ: ಬೆಲೆ ಏರಿಕೆಯಿಂದ ಬೇಸತ್ತಿರುವ ಜನತೆಗೆ ಕರೆಂಟ್ ಶಾಕ್.. ಪರಿಷ್ಕೃತ ವಿದ್ಯುತ್ ದರ ಜಾರಿ!
ಡ್ಯಾಶ್ ಬೋರ್ಡ್ ದಾಖಲಾತಿ ಕುರಿತು ಚರ್ಚಿದ್ದಾರೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ತಾಲೂಕಿನ ಮಟ್ಟದಲ್ಲಿ ಸಭೆಯನ್ನು ನಡೆಸಿ, ನಂತರ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಾಖಲಾತಿಯಲ್ಲಿ ಫೋಟೋ ಸಹಿತ ಹಾಕಲಾಗುವುದು. ಮಕ್ಕಳನ್ನು ಯಾವ ಅಂಗನವಾಡಿಯ ಟೀಚರ್, ಸಿಡಿಪಿಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೋ, ಅಂತವರನ್ನು ಗುರುತಿಸಿ ಪ್ರಶಸ್ತಿಗೆ ಶಿಫಾರಸು ಮಾಡುವ ಮೂಲಕ ಸನ್ಮಾನಿಸಲಾಗುವುದು ಎನ್ನುವ ಮಾಹಿತಿಯನ್ನು ಸ್ಮೃತಿ ಇರಾನಿ ಅವರಿಗೆ ಸಿಎಂ ನೀಡಿದರು.
ರಾಜ್ಯ ಸಚಿವ ಭೇಟಿ: ನಂತರ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ರಾಜ್ಯ ಸಚಿವ ಡಾ. ಮುಂಜ್ಪಾರಾ ಮಹೇಂದ್ರಭಾಯಿ ಕಾಲುಭಾಯಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಇತರರು ಉಪಸ್ಥಿತರಿದ್ದರು.