ETV Bharat / state

ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದವರಿಂದ ಸುಲಿಗೆ: ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರ ಬಂಧನ

author img

By

Published : Jun 23, 2023, 12:07 PM IST

Smuggling Beef: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಹಾಗೂ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದ ಇಬ್ಬರು ಸೇರಿ ಒಟ್ಟು 4 ಮಂದಿಯನ್ನು ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

Bengaluru
ಬಂಧಿತ ಆರೋಪಿಗಳು

ಬೆಂಗಳೂರು: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಸೇರಿದಂತೆ ಇಬ್ಬರು ಆರೋಪಿಗಳನ್ನ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಂಕದಕಟ್ಟೆಯ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಪ್ರಶಾಂತ್ ಹಾಗೂ ಸೋಮುಗೌಡ ಬಂಧಿತ ಆರೋಪಿಗಳಾಗಿದ್ದಾರೆ.

ಪ್ರಕರಣದ ವಿವರ: ಜೂ.21 ರಂದು ಬೆಳಗ್ಗೆ 8.30ರ ಸುಮಾರಿಗೆ ಮಾಗಡಿಯಿಂದ ಗೋಮಾಂಸ ಖರೀದಿಸಿ ಶಿವಾಜಿನಗರಕ್ಕೆ ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ಸಾಗಣೆ ಮಾಡುತ್ತಿದ್ದ ಖಾಜಾ ಮೊಯಿನುದ್ದೀನ್ ಹಾಗೂ ಉಮೇಶ್ ಎಂಬುವವರನ್ನ ತುಮಕೂರು ರಸ್ತೆಯಲ್ಲಿ ಅಡ್ಡಗಟ್ಟಿದ್ದ ಆರೋಪಿ ಪ್ರಶಾಂತ್ ಹಾಗೂ ಸ್ನೇಹಿತರು ನಿಮ್ಮ ವಾಹನ ನಮ್ಮ ಇನ್ನೋವಾ ಕಾರಿಗೆ ಟಚ್ ಆಗಿ ಡ್ಯಾಮೇಜ್ ಆಗಿದೆ. ಹಣ ಕಟ್ಟಿಕೊಡುಬೇಕೆಂದು ಧಮ್ಕಿ ಹಾಕಿದ್ದರು. ಪರಸ್ಪರ ವಾಗ್ವಾದದ ನಡುವೆ ಸ್ಕಾರ್ಪಿಯೋ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿರುವುದನ್ನ ಕಂಡು ಬೆದರಿಸಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ನಾಲ್ವರು ಆರೋಪಿಗಳ ಬಂಧನ: ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದಿದ್ದರು. ಉಮೇಶ್ ಹಾಗೂ ಖಾಜಾ ಮೊಯಿನುದ್ದೀನ್ ಅವರನ್ನ ಕಾರಿಗೆ ಹತ್ತಿಸಿ ಹಲ್ಲೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಪ್ರಶಾಂತ್ ಹಾಗೂ ಸೋಮು ಗೌಡನನ್ನ ಬಂಧಿಸಿದ್ದಾರೆ‌. ಮತ್ತೊಂದೆಡೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಉಮೇಶ್ ಹಾಗೂ ಖಾಜಾ ಮೊಯಿನುದ್ದೀನ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಒಟ್ಟು ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದಿಂದ ಗೋವಾಕ್ಕೆ ಗೋಮಾಂಸ ಸಾಗಣೆ: ಇತ್ತೀಚೆಗೆ ಕರ್ನಾಟಕದಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಗೋವಾದ ಮಡಗಾಂವ್​​ನ ಹುಸೇನ್ ದೇಸಾಯಿ ಹಾಗೂ ಆಜಾದ್ ಕಾದ್ರೊಳ್ಳಿ ಬಂಧಿತರು. ಆರೋಪಿಗಳು ಬೆಳಗಾವಿ ತಾಲೂಕಿನ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವಾಹನಗಳಲ್ಲಿ ಅಕ್ರಮವಾಗಿ ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಹಿರೇಬಾಗೆವಾಡಿ ಪೊಲೀಸರು, ಗೋಮಾಂಸ ಸಮೇತ ಇಬ್ಬರು ಆರೋಪಿಗಳು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕದಿಂದ ಗೋವಾಕ್ಕೆ ಗೋಮಾಂಸ ಸಾಗಣೆ: ಆರೋಪಿಗಳಿಬ್ಬರ ಬಂಧನ

ಗೋಮಾಂಸ ಸಾಗಾಟ - ನಾಲ್ವರು ಪೊಲೀಸ್​​ ವಶಕ್ಕೆ: ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 112 ವಾಹನದಲ್ಲಿ ಚೇಸಿಂಗ್ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 2 ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನ ವಶಕ್ಕೆ ಪಡೆದಿದ್ದರು.

ದೊಡ್ಡಬಳ್ಳಾಪುರ ವಿಭಾಗದ ಪೊಲೀಸರು ದೊಡ್ಡಬಳ್ಳಾಪುರ-ಹಿಂದೂಪುರ ರಸ್ತೆಯ ಗುಂಜೂರು ಬಳಿಯ ಕಾರ್ಯ ನಿಮಿತ್ತ ತೆರಳುತ್ತಿದ್ದರು. ಈ ವೇಳೆ ಕೆಟ್ಟು ನಿಂತಿದ್ದ ಟಾಟಾ ಏಸ್ ವಾಹನದಲ್ಲಿದ್ದವರನ್ನ ಮಾತನಾಡಿಸಲು ಮುಂದಾಗಿದ್ದರು. ಪೊಲೀಸರನ್ನು ಕಂಡ ಟಾಟಾ ಏಸ್​​ನಲ್ಲಿದ್ದವರು ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ 112 ವಾಹನದಲ್ಲಿ ಪೊಲೀಸರು ಚೇಸಿಂಗ್ ನಡೆಸಿ ಪರಾರಿಯಾಗಲು ಯತ್ನಿಸಿದವರನ್ನ ಹಿಡಿದಿದ್ದರು. ವಾಹನ ತಪಾಸಣೆ ನಡೆಸಿದ್ದಾಗ ಗೋಮಾಂಸ ಪತ್ತೆಯಾಗಿತ್ತು.

ಇದನ್ನೂ ಓದಿ: 2 ಸಾವಿರ ಕೆಜಿ ಗೋಮಾಂಸ ಸಾಗಾಟ : ನಾಲ್ವರು ಪೊಲೀಸ್​​ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.