ಬೆಂಗಳೂರು: ಸೊಲ್ಲಾಪುರ-ವಿಜಯಪುರ ನಡುವಿನ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಂಡು ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದಿದೆ.
ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಲೋಕೋಪಯೋಗಿ ಸಚಿವ ಮತ್ತು ಡಿಸಿಎಂ ಗೋವಿಂದ ಎಂ. ಕಾರಜೋಳ, ಸಂಸದ ರಮೇಶ್ ಜಿಗಜಿಣಗಿ ನೇತೃತ್ವದಲ್ಲಿ ಚಾಲನೆ ನೀಡಲಾದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯನ್ನು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಲಾಗಿದೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆದ್ದಾರಿ ಕಾಮಗಾರಿ ದಾಖಲಾದ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.
ಓದಿ : ಚಿರತೆ ಕೊಂದವರಿಗೆ ಆರ್ಥಿಕ ಸಹಾಯ ಮಾಡಿದ ಶಾಸಕರು: ಇದು ಈಟಿವಿ ಭಾರತ ಫಲಶ್ರುತಿ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಈ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯ ಶ್ಲಾಘನೀಯವಾದುದು ಎಂದು ಹೇಳಿದ ಡಿಸಿಎಂ ಗೋವಿಂದ ಕಾರಜೋಳ, ಸಚಿವ ನಿತಿನ್ ಗಡ್ಕರಿ ಹಾಗೂ ತಂಡವನ್ನು ಅಭಿನಂದಿಸಿದ್ದಾರೆ.