ETV Bharat / state

ನಿವೃತ್ತ ಕೆಎಎಸ್ ಅಧಿಕಾರಿ ಭೀಮಪ್ಪ ತಳವಾರ ಸೇರಿ ಹಲವು ಕೈ ಕಾರ್ಯಕರ್ತರು ಜೆಡಿಎಸ್​ಗೆ - ನಿವೃತ್ತ ಕೆಎಎಸ್ ಅಧಿಕಾರಿ ಭೀಮಪ್ಪ ತಳವಾರ ಜೆಡಿಎಸ್​ಗೆ ಸೇರ್ಪಡೆ

ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. 2023ರ ವಿಧಾನಸಭೆ ಚುನಾವಣೆಗೆ ತಯಾರಾಗಬೇಕಿದೆ. ಅದಕ್ಕಿಂತ ಮೊದಲು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಬರಲಿದ್ದು, ಈ ಚುನಾವಣೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಸಲಹೆ..

ಹಲವು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್​ಗೆ ಸೇರ್ಪಡೆ
Some of Congress activists are joining JDS party
author img

By

Published : Jul 23, 2021, 8:47 PM IST

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜೆಡಿಎಸ್ ಮುಖಂಡ ಹನುಮಂತಪ್ಪ ತಳವಾರ್ ನೇತೃತ್ವದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್​​ಗೆ ಸೇರ್ಪಡೆಯಾಗಿದ್ದಾರೆ.

ಪಕ್ಷದ ಕಚೇರಿ ಜೆಪಿಭವನದಲ್ಲಿ ಬಾಗಲಕೋಟೆ ಜಿಲ್ಲೆಯ ಮುಖಂಡರ ಸಭೆ ಕರೆಯಲಾಗಿತ್ತು. ಹಾಗಾಗಿ, ಸಭೆ ನಡುವೆಯೇ ನಿವೃತ್ತ ಕೆಎಎಸ್ ಅಧಿಕಾರಿ ಭೀಮಪ್ಪ ತಳವಾರ ಹಾಗೂ ಬಾದಾಮಿಯ ಕಾಂಗ್ರೆಸ್​​ನ ಕೆಲವು ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕಿ ಅವರನ್ನು ಕುಮಾರಸ್ವಾಮಿಯವರು ಬರಮಾಡಿಕೊಂಡರು.

ನಂತರ ಹೆಚ್ ​ಡಿ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. 2023ರ ವಿಧಾನಸಭೆ ಚುನಾವಣೆಗೆ ತಯಾರಾಗಬೇಕಿದೆ. ಅದಕ್ಕಿಂತ ಮೊದಲು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಬರಲಿದ್ದು, ಈ ಚುನಾವಣೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಈ ವೇಳೆ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.