ETV Bharat / state

ಜೆಡಿಎಸ್‌ನಿಂದ ಹೊರ ನಡೆಯಲು ಸಜ್ಜಾದ ಕೆಲ ನಾಯಕರು : ಇವರ ಮುಂದಿನ ನಡೆ ಏನು?

ಜೆಡಿಎಸ್ ಯುವ ಘಟಕಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಯುವ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಶರಣಗೌಡರನ್ನು ನೇಮಕ ಮಾಡಲಾಯಿತು. ಇದರಿಂದ ಬೇಸರಗೊಂಡು ಶರಣಗೌಡ ಅಂತರ ಕಾಯ್ದುಕೊಂಡಿದ್ದಾರೆಂಬ ಮಾತು ಕೇಳಿ ಬರುತ್ತಿವೆ..

ಜೆಡಿಎಸ್
ಜೆಡಿಎಸ್
author img

By

Published : Aug 21, 2021, 7:11 PM IST

Updated : Aug 21, 2021, 7:27 PM IST

ಬೆಂಗಳೂರು : ಒಂದೆಡೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಜೆಡಿಎಸ್ ವರಿಷ್ಠರು ಸಜ್ಜಾಗುತ್ತಿದ್ದರೆ, ಮತ್ತೊಂದೆಡೆ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಕೆಲ ನಾಯಕರ ನಿಗೂಢತೆ ಅಸ್ಪಷ್ಟವಾಗಿದೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾರ್ಗದರ್ಶನದಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೊಡಗಿದ್ದಾರೆ. ಅದಕ್ಕಾಗಿ ಜಿಲ್ಲಾ ಪ್ರವಾಸ ಮಾಡಲು ಸಿದ್ಧತೆ ಮಾಡುತ್ತಿದ್ದಾರೆ.

ಇನ್ನೊಂದೆಡೆ ಜೆಡಿಎಸ್ ನಾಯಕರು ಒಬ್ಬೊಬ್ಬರಾಗಿ ಪಕ್ಷದಿಂದ ಹೊರ ಬೀಳುತ್ತಿದ್ದಾರೆ. ಮುಖ್ಯವಾಗಿ ಉತ್ತರಕರ್ನಾಟಕ ಭಾಗದಿಂದ ಹಲವು ಮುಖಂಡರು ಪಕ್ಷದಿಂದ ಹಿಂದೆ ಸರಿಯುತ್ತಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಗೌಡ ಮಾಲಿ ಪಾಟೀಲ್ ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್‌ಗೆ ಬಲ ತುಂಬಿದ್ದ ಎಂ ಸಿ ಮನಗೂಳಿ ನಿಧನರಾಗಿದ್ದು, ತಂದೆ ನಿಧನ ನಂತರ ಅಶೋಕ್ ಮನಗೂಳಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಇನ್ನು, ಮಧು ಬಂಗಾರಪ್ಪ ಸಹ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಪ್ರಮುಖವಾಗಿ ಜೆಡಿಎಸ್ ನಾಯಕರ ಬಗ್ಗೆ ಮುನಿಸಿಕೊಂಡಿರುವ ಗುಬ್ಬಿ ಶಾಸಕ ಶ್ರೀನಿವಾಸ್ ಸಹ ತಟಸ್ಥರಾಗಿದ್ದು, ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎಂಬ ಸುದ್ದಿ ಪಕ್ಷದ ವಲಯದಲ್ಲೇ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲದಿನಗಳ ಹಿಂದೆ ತುಮಕೂರಿನಲ್ಲಿ ಶ್ರೀನಿವಾಸ್ ಮಾತನಾಡಿ, 'ಪಕ್ಷದ ನಡವಳಿಕೆಯಿಂದ ನನಗೆ ಬೇಜಾರಾಗಿರುವುದು ನಿಜ. ಮುಂದಿನ ದಿನಗಳಲ್ಲಿ ಎಲ್ಲವನ್ನು ಹೇಳುತ್ತೇನೆ. ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ.

ಏಕೆ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಗೊತ್ತು. ಮೈತ್ರಿ ಸರ್ಕಾರ ಉಳಿಸಿಕೊಳ್ಳಬಹುದಿತ್ತು. ಅಲ್ಲಿ ಅವರ ನಡವಳಿಕೆ ಮುಖ್ಯವಾಗಿತ್ತು. ಆ ಸಂದರ್ಭದಲ್ಲಿ ಅವರು ಸರಿಯಾಗಿ ನಡೆದುಕೊಂಡಿಲ್ಲ. ಆದರೆ, ದೇವೇಗೌಡರು ನಿರಂತರ ಪಕ್ಷ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಬಗ್ಗೆ ನಾನು ಏನು ಹೇಳುವುದಿಲ್ಲ. ಅವರು ದೊಡ್ಡ ನಾಯಕರು' ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಾನು ಜೆಡಿಎಸ್‌ನಲ್ಲೇ ಇರುತ್ತೇನೆ. ಕಾಂಗ್ರೆಸ್‌ಗೆ ಹೋಗಲ್ಲ ಎಂದು ಕಳೆದ ತಿಂಗಳು ಮತ್ತೆ ಶ್ರೀನಿವಾಸ್ ಹೇಳಿದ್ದಾರೆ. ಆದರೂ ಸಹ ಸ್ಪಷ್ಟ ನಿಲುವುಗೆ ಇನ್ನೂ ಬಂದಿಲ್ಲ.

ಜಿ ಟಿ ದೇವೇಗೌಡರ ನಡೆ ನಿಗೂಢ : ಮಾಜಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ ಟಿ ದೇವೇಗೌಡ ಅವರ ನಡೆ ಇನ್ನೂ ನಿಗೂಢವಾಗಿಯೇ ಇದೆ. ಜೆಡಿಎಸ್ ನಾಯಕರ ವಿರುದ್ಧ ಮುನಿಸಿಕೊಂಡು ತಟಸ್ಥರಾಗಿರುವ ಅವರು, ಜೆಡಿಎಸ್‌ನಲ್ಲೇ ಉಳಿಯಬೇಕೋ, ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಹೋಗಬೇಕೋ ಎಂಬ ಜಿಜ್ಞಾಸೆಯಲ್ಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮುನಿಸಿಕೊಂಡು, ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಜಿ ಟಿ ದೇವೇಗೌಡ ಅವರೊಂದಿಗೆ ಜೆಡಿಎಸ್‌ ವರಿಷ್ಠ ಹೆಚ್ ಡಿ ದೇವೇಗೌಡರು ಮಾತನಾಡಿ ಮನವೊಲಿಕೆ ಮಾಡುವ ಪ್ರಯತ್ನ ಸಹ ಮಾಡಿದ್ದರು. ಎರಡು ವರ್ಷಗಳಿಂದ ಪಕ್ಷದ ಸಭೆ, ಸಮಾರಂಭಗಳಿಂದ ದೂರ ಉಳಿದಿರುವ ಶಾಸಕ ಜಿ ಟಿ ದೇವೇಗೌಡ, ಜೆಡಿಎಸ್ ತೊರೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಬಿಜೆಪಿ ಮೇಲೆ ಒಲವು : ಹಿಂದೆ ಬಿಜೆಪಿ ಪಕ್ಷದಲ್ಲಿದ್ದ ಜಿ ಟಿ ದೇವೇಗೌಡರು, ರಾಜಕೀಯ ಬೆಳವಣಿಗೆಗಳಿಂದ ಜೆಡಿಎಸ್​​ಗೆ ಸೇರಿದ್ದರು. ಆದರೆ, ಜೆಡಿಎಸ್ ನಾಯಕರ ನಡೆಯಿಂದ ಅಸಮಾಧಾನಗೊಂಡಿರುವ ಜಿ ಟಿ ದೇವೇಗೌಡರು ಮತ್ತೆ ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಒಂದು ವೇಳೆ ಬಿಜೆಪಿಗೆ ಸೇರ್ಪಡೆ ಸಾಧ್ಯವಾಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲು ದೇವೇಗೌಡರು ಚಿಂತನೆ ನಡೆಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆಗೆ ಒಲವು ತೋರಿರುವ ಜಿ ಟಿ ದೇವೇಗೌಡರು, ಆ ಮೂಲಕ ಜೆಡಿಎಸ್ ಬಿಡುವ ಕುರಿತು ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಜೆಡಿಎಸ್ ತೊರೆಯಲು ಮಾನಸಿಕವಾಗಿ ಸಿದ್ಧರಾಗಿರುವ ಜಿ ಟಿ ದೇವೇಗೌಡ ಅವರು, ಮುಂದೆ ಯಾವ ಪಕ್ಷ ಸೇರಬೇಕು? ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾ? ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ.‌ ಈ ಹಿನ್ನೆಲೆಯಲ್ಲಿ ಮುಂದಿನ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಜಿ ಟಿ ದೇವೇಗೌಡ ಅವರ ರಾಜಕೀಯ ಭವಿಷ್ಯ ನಿರ್ಧರಿಸಲಿದೆ.

ಅದೇ ರೀತಿ ಕುಮಾರಸ್ವಾಮಿ ಸರ್ಕಾರ ಪತನ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅಪರೇಷನ್ ಆಡಿಯೋ ಬಾಂಬ್ ಸಿಡಿಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಗುರುಮಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಕಂದಕೂರು ಕೂಡ ತಟಸ್ಥರಾಗಿದ್ದಾರೆ.

ಇದನ್ನೂ ಓದಿ : ಸದನದ ಯಾವ ಆಸನದಲ್ಲಿ ಆಸೀನರಾಗುತ್ತಾರೆ ಬಿಎಸ್​ವೈ,ಶೆಟ್ಟರ್?

ಜೆಡಿಎಸ್ ಯುವ ಘಟಕಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಯುವ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಶರಣಗೌಡರನ್ನು ನೇಮಕ ಮಾಡಲಾಯಿತು. ಇದರಿಂದ ಬೇಸರಗೊಂಡು ಶರಣಗೌಡ ಅಂತರ ಕಾಯ್ದುಕೊಂಡಿದ್ದಾರೆಂಬ ಮಾತು ಕೇಳಿ ಬರುತ್ತಿವೆ.

ಈ ಮಧ್ಯೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಕೋಲಾರ ಶಾಸಕ ಶ್ರೀನಿವಾಸಗೌಡ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರೇ ತಿರುಗಿಬಿದ್ದಿದ್ದಾರೆ. ಮಾಜಿ ಸ್ಪೀಕರ್, ಕಾಂಗ್ರೆಸ್​​ನ ಹಿರಿಯ ನಾಯಕ ರಮೇಶ್ ಕುಮಾರ್ ಅವರನ್ನು ಹಾಡಿ ಹೊಗಳಿದ್ದರು.

ಶ್ರೀನಿವಾಸಗೌಡ ಅವರು ಕಾಂಗ್ರೆಸ್ ಸೇರಲು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾತು ಸ್ಥಳೀಯ ಮಟ್ಟದಲ್ಲಿ ಕೇಳಿ ಬರುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮಧ್ಯಪ್ರವೇಶಿಸಿ ಅಸಮಾಧಾನವನ್ನು ಶಮನ ಮಾಡುವರೇ ಎಂಬುದನ್ನು ಕಾದು ನೋಡಬೇಕಿದೆ.

Last Updated : Aug 21, 2021, 7:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.