ಬೆಂಗಳೂರು : ರಾಜಧಾನಿಯಲ್ಲಿ ಕೊರೊನಾ ಕೇಸ್ಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜ.29ರವರೆಗೆ ಶಾಲೆಗಳನ್ನು ಮುಚ್ಚುವ ನಿರ್ಧಾರ ಮುಂದುವರೆದಿದೆ. ಇದರ ನಡುವೆ ವಿದ್ಯಾಗಮ ನಡೆಸುವಂತೆ ಒತ್ತಾಯ ಕೂಡ ಕೇಳಿ ಬಂದಿದೆ.
ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜು ನಡೆಯಲಿವೆ. ಬೆಂಗಳೂರಿನಲ್ಲಿ ಶಾಲೆಗಳ ಆರಂಭ ಕುರಿತು ಮುಂದಿನ ವಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತಂತೆ ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿರುವುದು ಆರೋಗ್ಯಕರ ಬೆಳವಣಿಗೆ. ಆದರೆ, ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವ ವ್ಯವಸ್ಥೆಗೆ ಮುಂದಾಗಬಾರದು. ಹಾಗೆಯೇ, ಬೆಂಗಳೂರಲ್ಲಿನ ಸ್ಥಿತಿಗತಿ ಅವಲೋಕಿಸಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಮಕ್ಕಳ ನಿರಂತರ ಕಲಿಕೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ಧತಿಗೆ ನಿರ್ಧಾರ.. ರಾತ್ರಿ ನಿಷೇಧಾಜ್ಞೆ ಸೇರಿ ಏನೆಲ್ಲಾ ಮುಂದುವರಿಕೆ?
ವಿದ್ಯಾಗಮವಾದರೂ ಶುರು ಮಾಡಿ : ಬೆಂಗಳೂರಿನಲ್ಲಿ ಮಕ್ಕಳ ನಿರಂತರ ಕಲಿಕೆಗೆ ವಿದ್ಯಾಗಮ ಯೋಜನೆಯನ್ನಾದರೂ ಶುರು ಮಾಡಿ ಎಂದು ರೂಪ್ಸಾ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿದ್ದಾರೆ. ಬೆಂಗಳೂರು ಹೊರತು ಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಶಾಲೆಗಳಲ್ಲಿ ಭೌತಿಕ ತರಗತಿ ನಡೆಸಲು ಅವಕಾಶ ಕಲ್ಪಿಸಿದೆ.
ಇದನ್ನು ಸ್ವಾಗತ ಮಾಡ್ತೀವಿ. ಆದರೆ, ಬೆಂಗಳೂರಿನಲ್ಲಿ ನಿರ್ಬಂಧ ಹೇರಿರುವುನ್ನು ಖಂಡಿಸುತ್ತೇವೆ. ಕೋವಿಡ್ ಪ್ರಭಾವ ಬಹಳ ಕಡಿಮೆ ಇದೆ. ಒಂದು ವೇಳೆ ಬೆಂಗಳೂರಿನಲ್ಲಿ ನಿರ್ಬಂಧ ಹೇರುವುದಾದರೆ ಅಲ್ಲಿರುವ ಬಡ ಮಕ್ಕಳು, ಆರ್ಥಿಕವಾಗಿ ಕಷ್ಟದಲ್ಲಿ ಇರುವವರಿಗೆ ಎಲ್ಲಾ ವ್ಯವಸ್ಥೆ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ನಿರಂತರ ಕಲಿಕೆಯಿಂದ ದೂರ ಇಟ್ಟರೆ ಬಹಳ ಕಷ್ಟವಾಗಲಿದೆ ಎಂದರು.
ಜಾಹೀರಾತು: ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ