ಬೆಂಗಳೂರು : ರೋಷನ್ ಬೇಗ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೇಗ್ ಪುತ್ರ ರುಮಾನ್ ಬೇಗ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ .
ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರ ಬಿಡುಗಡೆ ಕೋರಿ ಪುತ್ರ ರುಮಾನ್ ಬೇಗ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಎಸ್ಐಟಿ ವಿಚಾರಣೆ ಮುಗಿಸಿ ತಕ್ಷಣ ಬಿಡುಗಡೆ ಮಾಡಲು ನಿರ್ದೇಶನ ಕೋರಿ ಬೇಗ್ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ತನಿಖಾ ಸಂಸ್ಥೆ ಎಸ್ಐಟಿಯನ್ನು ದುರುಪಯೋಗ ಮಾಡಿಕೊಂಡಿದೆ. ಬೇಗ್ 19 ಕ್ಕೆ ವಿಚಾರಣೆಗೆ ಹಾಜರಾಗಲು ರೆಡಿ ಇದ್ದರೂ ಬಲವಂತವಾಗಿ ವಶಕ್ಕೆ ಪಡೆದಿದೆ ಎಂದು ಅರ್ಜಿಯಲ್ಲಿ ವಕೀಲರು ಉಲ್ಲೇಖಿಸಿದ್ದಾರೆ. ಹಾಗಾಗಿ ಆದಷ್ಟು ಬೇಗ ವಿಚಾರಣೆ ಮುಗಿಸಿ ಬಿಡುಗಡೆ ಮಾಡುವಂತೆ ಹೈಕೋರ್ಟ್ಗೆ ಅರ್ಜಿಯಲ್ಲಿ ತಿಳಿಸಿದ್ದಾರೆ.