ETV Bharat / state

ಪಿಎಂ ಕೇರ್ ಫಂಡ್ ಬಗ್ಗೆ ಸೋನಿಯಾ ಟ್ವೀಟ್ ಪ್ರಕರಣ: ಸರ್ಕಾರ, ಸಾಗರ ಪೊಲೀಸರಿಗೆ ಹೈಕೋರ್ಟ್ ನೋಟಿಸ್ - ಸೋನಿಯಾ ಟ್ವೀಟ್ ಪ್ರಕರಣ

ಪಿಎಂ ಕೇರ್​ ಫಂಡ್​ ಕುರಿತಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿದ್ದ ಟ್ವೀಟ್​ ಹಿನ್ನೆಲೆ ದಾಖಲಾಗಿದ್ದ ಪ್ರಕರಣ ಸಂಬಂಧ ಸರ್ಕಾರ ಮತ್ತು ಸಾಗರ ಪೊಲೀಸ್ ಠಾಣೆಗೆ ಹೈಕೋರ್ಟ್​ ನೋಟಿಸ್ ಕಳಿಸಿದೆ. ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸಲು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದೂರುದಾರ ವಕೀಲ ಕೆ.ವಿ. ಪ್ರವೀಣ್ ಸಲ್ಲಿಸಿರುವ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ ಈ ನೋಟಿಸ್​ ಜಾರಿ ಮಾಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Mar 22, 2021, 9:09 PM IST

ಬೆಂಗಳೂರು : ಪಿಎಂ ಕೇರ್ ಫಂಡ್, ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅಪನಂಬಿಕೆ ಹುಟ್ಟಿಸುವ ರೀತಿಯಲ್ಲಿ ಟ್ವೀಟ್ ಮಾಡಿದ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಿಸಿರುವ ದೂರಿನ ಅಂತಿಮ ತನಿಖಾ ವರದಿ ಸಲ್ಲಿಸದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಾಗರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸಲು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದೂರುದಾರ ವಕೀಲ ಕೆ.ವಿ. ಪ್ರವೀಣ್ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕ, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಾಗರ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್​ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ: ಸೋನಿಯಾ ಗಾಂಧಿ ಅವರು 2020ರ ಮೇ 11ರಂದು ರಾಷ್ಟ್ರೀಯ ಕಾಂಗ್ರೆಸ್‌ನ ಅಧಿಕೃತ ಟ್ವಿಟ್ಟರ್ ಖಾತೆ ‘ಎನ್‌ಐಸಿ ಇಂಡಿಯಾ’ ಮೂಲಕ ಟ್ವೀಟ್ ಮಾಡಿ, ಪಿಎಂ ಕೇರ್ ನಿಧಿಯ ಹಣ ವೈಯಕ್ತಿಕವಾಗಿ ಬಳಕೆಯಾಗುತ್ತಿದ್ದು, ಬಡಜನರಿಗೆ ಉಪಯೋಗವಾಗುತ್ತಿಲ್ಲ ಎಂದು ಟ್ವೀಟ್‌ ಮಾಡಿದ್ದರು. ಈ ಮೂಲಕ ಪ್ರಧಾನಿ ಮೋದಿ ಹಾಗೂ ಭಾರತ ಸರ್ಕಾರದ ವಿರುದ್ಧ ನಾಗರಿಕರಲ್ಲಿ ಅಪನಂಬಿಕೆ ಉಂಟು ಮಾಡುವ ಮತ್ತು ನಾಗರಿಕರನ್ನು ಎತ್ತಿ ಕಟ್ಟಿದ್ದಾರೆ ಎಂದು ಆರೋಪಿಸಿ ವಕೀಲ ಕೆ.ವಿ ಪ್ರವೀಣ್ ಕುಮಾರ್ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಅಲ್ಲದೇ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಐಎನ್‌ಸಿ ಇಂಡಿಯಾ ಟ್ವಿಟ್ಟರ್ ಖಾತೆ ಹಾಗೂ ಅದರ ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ದೂರುದಾರರು, ಈವರೆಗೂ ತಮ್ಮ ದೂರಿನ ಅಂತಿಮ ತನಿಖಾ ವರದಿಯನ್ನು ಸಂಬಂಧಪಟ್ಟ ನಾಯಾಲಯಕ್ಕೆ ಸಲ್ಲಿಸಿಲ್ಲ. ಹೀಗಾಗಿ, ಅಂತಿಮ ವರದಿ ಸಲ್ಲಿಸಲು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ.. ವಿಧಾನಸಭೆಯಲ್ಲಿ ಸಿಡಿದ ಸಿಡಿ: ಆರು ಸಚಿವರ ವಿರುದ್ಧ ಸಿದ್ದು ಮಾತಿನ ಬಾಣ, ಕಂಗಾಲಾದ ಆಡಳಿತ ಪಕ್ಷ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.