ETV Bharat / state

ರಮೇಶ್​ ಜಾರಕಿಹೊಳಿ ಮಾಲೀಕತ್ವದ ಫ್ಯಾಕ್ಟರಿಯಲ್ಲಿ 819 ಕೋಟಿ ಮೊತ್ತದ ಅಕ್ರಮ ಆರೋಪ.. ತನಿಖೆಗೆ ಕಾಂಗ್ರೆಸ್​ ಆಗ್ರಹ

author img

By

Published : Jun 26, 2022, 5:39 PM IST

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮೀ ಶುಗರ್ಸ್​ ಲಿಮಿಟೆಡ್​ನಲ್ಲಿ 819 ಕೋಟಿ ರೂ. ವಂಚನೆ ನಡೆದಿದೆ. ಈ ಪ್ರಕರಣವನ್ನು ಸರಿಯಾಗಿ ತನಿಖೆ ಆಗಬೇಕು. ಇಡಿ ಅವರು ಈ ವಂಚನೆ ಬಗ್ಗೆ ಏಕೆ ತನಿಖೆ ಮಾಡುತ್ತಲ್ಲ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್​ ಪ್ರಶ್ನಿಸಿದ್ದಾರೆ.

Soubhagya Laxmi Sugars Ltd  819 crore illegality appropriate investigation
ಕೆಪಿಸಿಸಿ ವಕ್ತಾರ ಲಕ್ಷ್ಮಣ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮೀ ಶುಗರ್ಸ್​ ಲಿಮಿಟೆಡ್​ನಲ್ಲಿ 819 ಕೋಟಿ ರೂಪಾಯಿ ಮೊತ್ತದ ಅಕ್ರಮ ನಡೆದಿದೆ. ಈ ಅಕ್ರಮದಲ್ಲಿ ದೊಡ್ಡ ವ್ಯಕ್ತಿಗಳು ಭಾಗಿಯಾಗಿದ್ದಾರೆ. ಈ ವಿಚಾರವಾಗಿ ಹೈಕೋರ್ಟ್ ಮಧ್ಯ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸ ಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗ್ರಹಿಸಿದ್ದಾರೆ.

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ. ಇವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ. ಇದು ಗಂಭೀರವಾದ ವಿಚಾರವಾಗಿದ್ದು, ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದವರು ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕರ್ನಾಟಕ ರಾಜ್ಯದ ಹಾಲಿ ಮುಖ್ಯಮಂತ್ರಿಗಳು ಇದರಲ್ಲಿ ನೇರವಾಗಿ ಭಾಗಿದಾರರು ಎಂದು ಆರೋಪಿಸಿದರು.

ಸೌಭಾಗ್ಯ ಲಕ್ಷ್ಮೀ ಶುಗರ್ ಲಿಮಿಟೆಡ್​ನಲ್ಲಿ 819 ಕೋಟಿ ರೂ. ಮೊತ್ತದ ಅಕ್ರಮ

ಬ್ಯಾಂಕ್​ಗಳಿಂದ ಪಡೆದ ಸಾಲ: ಸೌಭಾಗ್ಯ ಲಕ್ಷ್ಮೀ ಶುಗರ್ಸ್​ ಲಿಮಿಟೆಡ್​ಗೆ 6 ಮಂದಿ ಬೋರ್ಡ್ ಆಫ್ ಡೈರೆಕ್ಟರ್​ನಲ್ಲಿ 4 ಜನ ಜಾರಕಿಹೊಳಿ ಅವರ ಕುಟುಂಬದವರು, ಉಳಿದವರು ಇವರ ಬೇನಾಮಿಗಳು. ಈ ಕಂಪನಿ ಯಾವ ಬ್ಯಾಂಕಿಗೆ ಎಷ್ಟು ಸಾಲ ನೀಡಬೇಕು ಎಂದು ಲಿಖಿತ ರೂಪದಲ್ಲಿ ತಿಳಿಸಿದೆ. ಅದರ ಪ್ರಕಾರ, ಕರ್ನಾಟಕ ಸ್ಟೇಟ್ ಕೋ ಆಪರೇಟಿವ್ ಅಪೆಕ್ಸ್ ಬ್ಯಾಂಕ್ ಲಿ. ಗೆ 180 ಕೋಟಿ ರೂ., ಐಕೆಮೆಸ್ಟ್ ಆಸೆಟ್ ರಿಕನ್​ಸ್ಟ್ರಕ್ಷನ್ ಲಿ. 128.96 ಕೋಟಿ ರೂ., ವಿಜಯಪುರ ಡಿಸಿಸಿ ಬ್ಯಾಂಕ್ ಲಿ. 57 ಕೋಟಿ ರೂ., ಸೌಥ್ ಕೆನರಾ ಡಿಸಿಸಿಗೆ 44 ಕೋಟಿ ರೂ., ತುಮಕೂರು ಡಿಸಿಸಿಗೆ 44.33 ಕೋಟಿ ರೂ., ಕರ್ನಾಟಕ ಡಿಸಿಸಿ ಬ್ಯಾಂಕ್ ಗೆ 51 ಕೋಟಿ, ಶ್ರೀ ಅರಿಹಂತ್ ಕ್ರೆಡಿಟ್ ಸಹಕಾರ ಲಿಮಿಟೆಡ್ 42.22 ಕೋಟಿ ರೂ. ನೀಡಬೇಕಿದೆ. ಯೂನಿಯನ್ ಬ್ಯಾಂಕ್ ನಲ್ಲಿ 22.66 ಕೋಟಿ, ಶ್ರೀ ಬೀರವೇಶ್ವರ ಸೌಹಾರ್ದ್ ಕ್ರೆಡಿಟ್ ಸಹಕಾರ ಲಿಮಿಟೆಡ್ ನಿಂದ 6.87 ಕೋಟಿ ಸೇರಿದಂತೆ ಒಟ್ಟು 578.39 ಕೋಟಿ ಸಾಲ ಪಡೆದಿದ್ದಾರೆ ಎಂದು ದೂರಿದರು.

ಬಾಕಿ ಉಳಿಸಿಕೊಂಡಿರುವ ಹಣ: ಅರಿಹಂತ್ ಕ್ರೆಡಿಟ್ ಸಹಕಾರ ಲಿಮಿಟೆಡ್ ನಡೆಸುತ್ತಿರುವ ಅಭಿನಂದನ್ ಪಾಟೀಲ್ ಅವರು ರಮೇಶ್ ಜಾರಕಿಹೊಳಿ ಅವರ ಬೇನಾಮಿ ಆಗಿದ್ದಾರೆ. ರಮೇಶ್ ಜಾರಕಿಹೋಳಿ ಅವರು ಇವರಿಂದಲೇ 42.24 ಕೋಟಿ ಸಾಲ ಪಡೆದಿದ್ದಾರೆ. ಈ ಸಾಲ ಪಡೆದಿರುವುದರ ಜತೆಗೆ ಕಬ್ಬು ಬೆಳೆದ ರೈತರಿಗೆ 50 ಕೋಟಿ ರೂ. ಬಾಕಿ, ಗುತ್ತಿಗೆದಾರರಿಗೆ 5 ಕೋಟಿ, ಸರಬರಾಜುದಾರರಿಗೆ 50 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದು ಮಾಹಿತಿ ನೀಡಿದರು. ಶ್ರೀ ಕೊಂಡಿಶೆಟ್ಟಿ ಕುಮಾರ ದುಶ್ಯಂತ ಎಂಬ ಸೌಭಾಗ್ಯ ಲಕ್ಷ್ಮಿ ಶುಗರ್ಸ್​ ಕಂಪನಿಯ ಆರ್ಬಿಟ್ರೇಟರ್ ಅವರು ಆದಾಯ ತೆರಿಗೆಗೆ 19-5-2020 ರಂದು ಬರೆದ ಪತ್ರದಲ್ಲಿ 2011ರಿಂದ 156.64 ಕೋಟಿ ರೂ. ಆದಾಯ ತೆರಿಗೆ ಬಾಕಿ ಇದೆ ಎಂದು ತಿಳಿಸಿದ್ದಾರೆ ಎಂದರು.

ಶೇ.50ರಷ್ಟು ಸಾಲ ಮರುಪಾವತಿಸಲು ಕೋರ್ಟ್​ ಆದೇಶ: ಇದೆಲ್ಲವೂ ಸೇರಿ ರಮೇಶ್ ಜಾರಕಿಹೊಳಿ ಅವರು ಮೋಸ ಮಾಡಲು ಹೊರಟಿರುವ ಒಟ್ಟಾರೆ ಮೊತ್ತ 819 ಕೋಟಿ. ಎಲ್ಲಾ ಡಿಸಿಸಿ ಬ್ಯಾಂಕುಗಳಿಗೆ ಮುಖ್ಯಸ್ಥವಾಗಿರುವ ಅಪೆಕ್ಸ್ ಬ್ಯಾಂಕ್ ಸಾಲ ವಸೂಲಿಗೆ 2019ರಲ್ಲಿ ನೊಟೀಸ್ ಜಾರಿ ಮಾಡಿದೆ. ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರು ಹಾಗೂ ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಅವರು ಈ ನೋಟಿಸ್ ಜಾರಿ ಮಾಡುತ್ತಾರೆ. ರಮೇಶ್ ಜಾರಕಿಹೊಳಿ ಅವರು 2019ರಲ್ಲಿ ನೋಟಿಸ್ ಪಡೆದ ನಂತರ ನ್ಯಾಯಾಲಯದ ಮೆಟ್ಟಿಲೇರಿ ಧಾರವಾಡ ಹೈಕೋರ್ಟ್​ಗೆ ಹೋಗುತ್ತಾರೆ. ಹೈಕೋರ್ಟ್ ಆಗ 6 ವಾರದೊಳಗೆ ಬ್ಯಾಂಕುಗಳಿಗೆ ನೀಡಬೇಕಾದ ಸಾಲವನ್ನು ಶೇ.50ರಷ್ಟು ಸಾಲ ಮರುಪಾವತಿಸಿ ಎಂದು ಮಧ್ಯಂತರ ಆದೇಶ ನೀಡುತ್ತದೆ ಎಂದು ಇಡೀ ವಿಚಾರಣೆ ಕುರಿತು ಲಕ್ಷ್ನಣ್​ ವಿವರಿಸಿದರು.

ಈ ಎಲ್ಲಾ ಅವ್ಯವಹಾರ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಪ್ರಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ 660 ಕೋಟಿ ವಂಚನೆ ಮಾಡಿದ್ದಾರೆ ಎಂದು ಹೇಳಿಕೆ ಕೊಟ್ಟಾಗ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಬೆಳಗಾವಿಗೆ ಹೋಗಿ ಸಹಕಾರ ಬ್ಯಾಂಕುಗಳ ಜತೆ ಸಭೆ ಮಾಡಿ ಯಾವುದೇ ವಂಚನೆ ನಡೆದಿಲ್ಲ ಎಂದು ಹೇಳುತ್ತಾರೆ.

ಇಡಿ ವಿಚಾರಣೆಗೆ ಒತ್ತಾಯ: ಈ ಸಂದರ್ಭದಲ್ಲಿ ನಾನು ಜಾರಿ ನಿರ್ದೇಶನಾಲಯದವರಿಗೆ ಪ್ರಶ್ನೆ ಮಾಡಲು ಬಯಸುತ್ತೇನೆ. ಇದರ ಜವಾಬ್ದಾರಿ ಎಂದರೆ ಆರ್ಥಿಕ ಕಾನೂನು ಜಾರಿ ಹಾಗೂ ಆರ್ಥಿಕ ಅಪರಾಧಗಳ ವಿರುದ್ಧ ಹೋರಾಡುವ ಸಂಸ್ಥೆ. ಇದು ಕೇಂದ್ರ ಹಣಕಾಸು ಸಚಿವಾಲಯದ ಭಾಗವಾಗಿದೆ. ಹೀಗಿರುವಾಗ ನಿರ್ಮಲಾ ಸೀತರಾಮನ್ ಅವರೇ ಎಲ್ಲಿದ್ದೀರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಅಂಜನಾದ್ರಿಗೆ ಜುಲೈ 15ರೊಳಗೆ ಸಿಎಂ ಭೇಟಿ: ಶಾಸಕ ಪರಣ್ಣ ಮುನವಳ್ಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.