ETV Bharat / state

ಸೋದರನ ಕೈ ಬಲಪಡಿಸಲು ಕಾಂಗ್ರೆಸ್ ಸೇರಲಿದ್ದಾರೆ ಗೀತಾ ಶಿವರಾಜಕುಮಾರ್ - ಕಾಂಗ್ರೆಸ್ ಸೇರಲಿದ್ದಾರೆ ಗೀತಾ ಶಿವರಾಜಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ.

ಗೀತಾ ಶಿವರಾಜಕುಮಾರ್ ಹಾಗೂ ಮಧು ಬಂಗಾರಪ್ಪ
ಗೀತಾ ಶಿವರಾಜಕುಮಾರ್ ಹಾಗೂ ಮಧು ಬಂಗಾರಪ್ಪ
author img

By

Published : Apr 27, 2023, 11:04 PM IST

ಬೆಂಗಳೂರು: ಜನಪ್ರಿಯ ನಟ ಡಾ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ. ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಬೆಂಬಲಕ್ಕೆ ಸೋದರಿ ಗೀತಾ ಶಿವರಾಜಕುಮಾರ್ ನಿಲ್ಲಲು ತೀರ್ಮಾನಿಸಿದ್ದಾರೆ.

ಈಗಾಗಲೇ ಸೋದರ ಮಧು ಪರವಾಗಿ ಸೊರಬ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಸಹ ಭಾಗಿಯಾಗಿರುವ ಗೀತಾ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕೈ ಹಿಡಿಯಲಿರುವ ಗೀತಾ ಶಿವರಾಜಕುಮಾರ್ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವರನಟ ರಾಜಕುಮಾರ್ ಹಾಗೂ ಅವರ ಮಕ್ಕಳು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರದಿರಲು ತೀರ್ಮಾನಿಸಿದ್ದು, ಈ ನಿರ್ಧಾರಕ್ಕೆ ಬದ್ಧವಾಗಿ ಶಿವರಾಜ್ ಕುಮಾರ್ ಸಹ ರಾಜಕೀಯ ಚಟುವಟಿಕೆಯಿಂದ ದೂರವೇ ಉಳಿದಿದ್ದಾರೆ. ಆದರೆ ತಂದೆ ದಿ. ಎಸ್. ಬಂಗಾರಪ್ಪ ಹಾಗೂ ಸೋದರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಮಾದರಿಯಲ್ಲೇ ಗೀತಾ ಶಿವರಾಜಕುಮಾರ್ ಸಹ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಜೆಡಿಎಸ್ ಯುವರಾಜ್ಯಾಧ್ಯಕ್ಷರಾಗಿದ್ದ ಮಧು ಬಂಗಾರಪ್ಪ ಒತ್ತಾಯಕ್ಕೆ ಮಣಿದು ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಗೀತಾ ಶಿವರಾಜ್​ಕುಮಾರ್ ಸ್ಪರ್ಧಿಸಿದ್ದರು. ಆದರೆ ಬಿ ಎಸ್ ಯಡಿಯೂರಪ್ಪ ವಿರುದ್ಧ ಗೆಲುವು ಸಾಧಿಸಲಾಗದೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಅದಾದ ಬಳಿಕ ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಅವರು ಮಧು ಬಂಗಾರಪ್ಪ ಜೆಡಿಎಸ್ ತೊರೆಯುತ್ತಿದ್ದಂತೆ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ಪಾಲ್ಗೊಳ್ಳದೆ ತಟಸ್ಥವಾಗಿ ಇದ್ದರು. ಇದೀಗ ಸೋದರ ಮಧು ಬಂಗಾರಪ್ಪ ಮತ್ತೊಮ್ಮೆ ಅವರನ್ನು ರಾಜಕೀಯಕ್ಕೆ ಎಳೆದು ತರುವ ಪ್ರಯತ್ನ ಮಾಡಿದ್ದು, ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಕಾಂಗ್ರೆಸ್ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಬಿಜೆಪಿ ಸೇರ್ಪಡೆಯಾದ ಸಂದರ್ಭದಲ್ಲಿ ತಂದೆಯೊಂದಿಗೆ ಬಿಜೆಪಿ ಸೇರಿದ್ದ ಕುಮಾರ್ ಬಂಗಾರಪ್ಪ ನಂತರ ಬಂಗಾರಪ್ಪ ಕಾಂಗ್ರೆಸ್ ಸೇರಿದರೂ ತಾವು ಬಿಜೆಪಿಯಲ್ಲೇ ಉಳಿದಿದ್ದರು. ಕುಟುಂಬದಲ್ಲಿ ಇದು ವೈಷಮ್ಯಕ್ಕೆ ಕಾರಣವಾಗಿ ಕುಮಾರ್ ಬಂಗಾರಪ್ಪ ಪ್ರತ್ಯೇಕವಾದರೆ ಬಂಗಾರಪ್ಪ ಜೊತೆ ಮಧು ಹಾಗೂ ಗೀತಾ ಶಿವರಾಜಕುಮಾರ್ ನಿಂತರು.

ಶುಕ್ರವಾರ ಕಾಂಗ್ರೆಸ್​ ಸೇರ್ಪಡೆ: 2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಬಿಜೆಪಿಯಿಂದ ಹಾಗೂ ಮಧು ಬಂಗಾರಪ್ಪ ಜೆಡಿಎಸ್​ನಿಂದ ಸೊರಬ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸೋದರ ಹೋರಾಟದಲ್ಲಿ ಕುಮಾರ್ ಬಂಗಾರಪ್ಪಗೆ ಗೆಲುವು ಲಭಿಸಿತ್ತು. ಈ ಸಾರಿಯೂ ಇಬ್ಬರೂ ಕಣದಲ್ಲಿದ್ದು ಮಧು ಬಂಗಾರಪ್ಪ ಜೆಡಿಎಸ್ ಬದಲು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಮಧುಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಸೋದರನ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ : ಕೋರ್ಟ್ ಆರ್ಡರ್ ಮೂಲಕ ಬೆದರಿಸಿ ಅರಣ್ಯವಾಸಿಗಳ ಜಮೀನು ತೆರವು: ಮಧು ಬಂಗಾರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.