ETV Bharat / state

Railway Jobs: ನೈರುತ್ಯ ರೈಲ್ವೆಯಲ್ಲಿದೆ ನೌಕರಿ; 904 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

South Western Railway Recruitment: ಒಂದು ವರ್ಷದ ಗುತ್ತಿಗೆ ಅವಧಿಗೆ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

South western Railway Recruitment for apprentices post in Bangalore hubballi division

author img

By

Published : Jul 26, 2023, 12:00 PM IST

ನೈರುತ್ಯ ರೈಲ್ವೆ ಇಲಾಖೆಯಲ್ಲಿ (SWR) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಘಟಕ ಮುಂದಾಗಿದೆ. ಒಟ್ಟು 904 ಅಪ್ರೆಂಟಿಸ್​ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಐಟಿಐ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಈಗಾಗಲೇ ರೈಲ್ವೆ ಇಲಾಖೆಯಲ್ಲಿ ತರಬೇತಿಯಲ್ಲಿರುವ ಅಭ್ಯರ್ಥಿಗಳು ಅರ್ಹರಲ್ಲ.

ಹುದ್ದೆಗಳ ಯಾವುವು? : ರೈಲ್ವೆಯ ಮೂರು ವಿಭಾಗಗಳಲ್ಲಿ ಫಿಟ್ಟರ್​, ವೆಲ್ಡರ್​​, ಮೆಕಾನಿಸ್ಟ್​​, ಎಲೆಕ್ಟ್ರಿಷಿಯನ್​​, ಕಾರ್ಪೆಂಟರ್​​, ಪೈಂಟರ್​​, ಸ್ಟೆನೋಗ್ರಾಫರ್​, ಪ್ರೊಗ್ರಾಮಿಂಗ್​ ಆ್ಯಂಡ್​ ಸಿಸ್ಟಂ ಅಡ್ಮಿನಿಸ್ಟ್ರೇಷನ್,​ ಅಸಿಸ್ಟೆಂಟ್ ಅಪ್ರೆಂಟಿಸ್​. ಹುಬ್ಬಳ್ಳಿ ವಿಭಾಗದಲ್ಲಿ ಒಟ್ಟು 237, ಹುಬ್ಬಳ್ಳಿಯ ಕ್ಯಾರೇಜ್​ ರಿಪೇರಿ ವರ್ಕ್​ಶಾಪ್​ನಲ್ಲಿ 217, ಬೆಂಗಳೂರು ವಿಭಾಗದಲ್ಲಿ 230, ಮೈಸೂರು ವಿಭಾಗದಲ್ಲಿ 177, ಮೈಸೂರು ಸೆಂಟ್ರಲ್​​ ವರ್ಕ್​ಶಾಪ್​ನಲ್ಲಿ 43 ಹುದ್ದೆಗಳಿವೆ.

ವಿದ್ಯಾರ್ಹತೆ: 10ನೇ ತರಗತಿ, ಐಟಿಐ ಅಥವಾ ಎನ್​ಟಿಸಿ ಪೂರ್ಣಗೊಳಿಸಿರಬೇಕು.

ಅಧಿಸೂಚನೆ
ಅಧಿಸೂಚನೆ

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 24 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ ಹೇಗೆ?: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಇತರೆ ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿಸಬೇಕು. ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಸಂಪೂರ್ಣವಾಗಿ ಮೆರಿಟ್​ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಮಾಸಿಕ ಸ್ಟೈಫಂಡ್​ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ ಜುಲೈ 3ರಿಂದ ಆರಂಭವಾಗಿದ್ದು, ಆಗಸ್ಟ್​​ 2 ಕಡೇಯ ದಿನ. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅರ್ಜಿ ಸಲ್ಲಿಕೆಗೆ ನೈರುತ್ಯ ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣ swr.indianrailways.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಯಾದಗಿರಿ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.