ಬೆಂಗಳೂರು: ನೈರುತ್ಯ ಮುಂಗಾರು ವೇಗ ಪಡೆದಿದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿಯ 3 ಜಿಲ್ಲೆ ಮತ್ತು ಉತ್ತರ ಒಳನಾಡಿನ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದುವರೆದು ಅಕ್ಟೋಬರ್ 1ರವರೆಗೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಸೆ. 29 ರಂದು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರದಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದಿದೆ.
ಸೆಪ್ಟೆಂಬರ್ 30 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಮತ್ತು ಅಕ್ಟೋಬರ್ 1 ರಂದು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ನೈರುತ್ಯ ಮುಂಗಾರು: ನಾಳೆ ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್