ETV Bharat / state

ರಾಜ್ಯದಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆ: ಹಿಂಗಾರು ಬಿತ್ತನೆ ಕಾರ್ಯ ಚುರುಕು

ಅಗತ್ಯಕ್ಕೆ ತಕ್ಕಂತೆ ಮಳೆ ಸುರಿದಿದ್ದರಿಂದ ನಿಗದಿತ ಗುರಿಗಿಂತ ಅಧಿಕ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈಗ ಮುಂಗಾರಿನಲ್ಲಿ ಬಿತ್ತನೆಯಾಗಿದ್ದ ಭತ್ತ, ರಾಗಿ, ಜೋಳ ಕಟಾವಿಗೆ ಬಂದಿದ್ದು, ಕೆಲದಿನಗಳಲ್ಲೇ ಒಕ್ಕಣೆ ಕಾರ್ಯ ಪ್ರಾರಂಭವಾಗಬೇಕಿದೆ. ಇನ್ನೊಂದೆಡೆ ಅಕ್ಟೋಬರ್ ತಿಂಗಳ ದಾಖಲೆ ಮಳೆಯಿಂದಾಗಿ ಫಸಲು ಕೈಸೇರುವ ಹಂತದಲ್ಲಿ ರೈತರು ಕಂಗಾಲಾಗಿದ್ದಾರೆ.

author img

By

Published : Oct 22, 2021, 1:09 PM IST

sowing-in-karnataka-more-than-expectaions
ರಾಜ್ಯದಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆ : ಹಿಂಗಾರು ಬಿತ್ತನೆ ಕಾರ್ಯ ಚುರುಕು

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷೆಗಿಂತ ಹೆಚ್ಚು ಹಿಂಗಾರು ಮಳೆಯಾಗುತ್ತಿದ್ದು, ಈಗಾಗಲೇ ಸುಮಾರು ಶೇ. 15ರಷ್ಟು ಹಿಂಗಾರು ಬಿತ್ತನೆ ಪೂರ್ಣಗೊಂಡಿದೆ. ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮವಾಗಿರುವುದರಿಂದ ನಿಗದಿಗಿಂತ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಾಗಿದೆ. ಒಟ್ಟು 77 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಸರ್ಕಾರ ಹೊಂದಿತ್ತು. ಆದರೆ, 78.20 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ.

ವಾರ್ಷಿಕ ಹಿಂಗಾರು ಬಿತ್ತನೆ ಗುರಿಯನ್ನು 28 ಲಕ್ಷ ಹೆಕ್ಟೇರ್ ಎಂದು ಅಂದಾಜಿಸಲಾಗಿದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು ಹಾಗೂ ಕರಾವಳಿ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆ ಕಾರ್ಯ ಚುರುಕುಗೊಂಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಬೆಳೆಗಳ ಕಟಾವು ಮತ್ತು ಒಕ್ಕಲು ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಈ ತಿಂಗಳಾಂತ್ಯದ ವೇಳೆಗೆ ಬಿತ್ತನೆ ಚಟುವಟಿಕೆ ಕಾರ್ಯಕ್ಕೆ ವೇಗ ಸಿಗಲಿದೆ. ಹಿಂಗಾರು ಬಿತ್ತನೆ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಫಸಲು ಕೈಸೇರುವ ಹಂತದಲ್ಲಿ ಮಳೆ:

ಅಗತ್ಯಕ್ಕೆ ತಕ್ಕಂತೆ ಮಳೆ ಸುರಿದಿದ್ದರಿಂದ ನಿಗದಿತ ಗುರಿಗಿಂತ ಅಧಿಕ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈಗ ಮುಂಗಾರಿನಲ್ಲಿ ಬಿತ್ತನೆಯಾಗಿದ್ದ ಭತ್ತ, ರಾಗಿ, ಜೋಳ ಕಟಾವಿಗೆ ಬಂದಿದ್ದು, ಕೆಲದಿನಗಳಲ್ಲೇ ಒಕ್ಕಣೆ ಕಾರ್ಯ ಪ್ರಾರಂಭವಾಗಬೇಕಿದೆ. ಇನ್ನೊಂದೆಡೆ ಅಕ್ಟೋಬರ್ ತಿಂಗಳ ದಾಖಲೆ ಮಳೆಯಿಂದಾಗಿ ಫಸಲು ಕೈಸೇರುವ ಹಂತದಲ್ಲಿ ರೈತರು ಕಂಗಾಲಾಗಿದ್ದಾರೆ. ಆದರೆ ಬಿತ್ತನೆ ಚಟುವಟಿಕೆಗಳಿಗೆ ಹಿಂಗಾರು ಮಳೆ ಪೂರಕವಾಗಿದ್ದು, ಬಿರುಸಿನಿಂದ ಕೃಷಿ ಚಟುವಟಿಕೆ ಕಾರ್ಯ ನಡೆಯುತ್ತಿದೆ.

ದಾವಣಗೆರೆ, ಬಾಗಲಕೋಟೆ, ವಿಜಾಪುರ, ಕಲಬುರಗಿ, ಕೊಪ್ಪಳ, ಹಾವೇರಿ, ಧಾರವಾಡ, ಬೀದರ್, ಗದಗ, ಬೆಳಗಾವಿ ಸೇರಿದಂತೆ ಬಹುತೇಕ ಉತ್ತರ ಕರ್ನಾಟಕ ಭಾಗದಲ್ಲಿ ಹತ್ತಿ, ಜೋಳ, ಮೆಕ್ಕೆಜೋಳ, ಗೋಧಿ, ಸೋಯಾಬೀನ್, ಶೇಂಗಾ, ಕಡಲೆ, ಹುರುಳಿ, ಅಲಸಂದಿ, ಈರುಳ್ಳಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶುಂಠಿ, ಮೆಣಸು, ಅಡಿಕೆ, ಕಾಫಿ, ಭತ್ತ, ರಾಗಿ, ಕಬ್ಬು ಹೆಚ್ಚಾಗಿ ಬೆಳೆಯಲಾಗುತ್ತದೆ.

ಸಂಕಷ್ಟಕ್ಕೆ ಸಿಲುಕಿದ ರೈತ:

ಮುಂಗಾರು ಮಳೆ ಅಧಿಕವಾಗಿ ಆದರೂ, ಅಷ್ಟಾಗಿ ಬೆಳೆಗಳಿಗೆ ಹಾನಿಯಾಗಿಲ್ಲ. ಆದರೆ, ಹಿಂಗಾರು ಆರಂಭವಾಗುತ್ತಿದ್ದಂತೆ ಅತಿ ಹೆಚ್ಚು ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಅಂದಾಜು 2.74 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ನಾಶವಾಗಿವೆ. ಇದರ ಜೊತೆಗೆ ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿದ್ದ ಬೆಳೆಗಳು ಕಟಾವಿನ ಹಂತಕ್ಕೆ ಬಂದಿದ್ದು, ಮಳೆ ಇದೇ ರೀತಿ ಮುಂದುವರೆದರೆ ಬೆಳೆ ನಾಶವಾಗುವುದೆಂಬ ಆತಂಕದಲ್ಲಿ ರೈತರಿದ್ದಾರೆ.

ಯಾವ ಜಿಲ್ಲೆಗಳಲ್ಲಿ ನಷ್ಟ :

ಅಧಿಕ ಮಳೆಯಿಂದ ಈ ಕೆಳಕಂಡ ಜಿಲ್ಲೆಗಳಲ್ಲಿ ನಷ್ಟ ಉಂಟಾಗಿದೆ. ತುಮಕೂರು ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್, ವಿಜಾಪುರ ಜಿಲ್ಲೆಯಲ್ಲಿ 40 ಸಾವಿರ ಹೆಕ್ಟೇರ್, ಶಿವಮೊಗ್ಗದಲ್ಲಿ 6 ಸಾವಿರ ಹೆಕ್ಟೇರ್, ಉತ್ತರ ಕನ್ನಡ ಜಿಲ್ಲೆಯಲ್ಲಿ 2,700 ಹೆಕ್ಟೇರ್, ದಕ್ಷಿಣ ಕನ್ನಡ 1,500 ಹೆಕ್ಟೇರ್, ಹಾವೇರಿ ಜಿಲ್ಲೆಯಲ್ಲಿ 2 ಸಾವಿರ ಹೆಕ್ಟೇರ್, ದಾವಣಗೆರೆ 2,162 ಹೆಕ್ಟೇರ್, ಕೊಪ್ಪಳ 202 ಹೆಕ್ಟೇರ್, ಬಳ್ಳಾರಿ 338 ಹೆಕ್ಟೇರ್, ಚಿತ್ರದುರ್ಗ 310 ಹೆಕ್ಟೇರ್ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 2,550 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದ್ದು, ನಷ್ಟದ ಸಮೀಕ್ಷೆ ಕಾರ್ಯ ಆರಂಭವಾಗಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೇವಲ 29 ಕೋಟಿ ಜನರಿಗೆ ಮಾತ್ರ 2 ಡೋಸ್ ಲಸಿಕೆ ನೀಡಲಾಗಿದೆ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.