ಹೊಸಕೋಟೆ : ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಯ ಬಗ್ಗೆ ಅವಹೇಳನಕಾರಿ ಅಥವಾ ಸುಳ್ಳು ಸುದ್ದಿಯನ್ನು ಹಾಕುವುದಾಗಲಿ ಮತ್ತೊಬ್ಬರಿಗೆ ಕಳುಹಿಸುವುದಾಗಲಿ ಮಾಡಿದರೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ಎಚ್ಚರಿಕೆ ನೀಡಿದ್ದಾರೆ.
ಹೊಸಕೋಟೆ ಠಾಣೆಗೆ ಭೇಟಿ ನೀಡಿದ ಅವರು, ಮಾಧ್ಯಮದವರ ಜೊತೆಗೆ ಮಾತನಾಡಿ, ಇನ್ನು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಯ ಬಗ್ಗೆ ಅವಹೇಳನಕಾರಿ ಅಥವಾ ಸುಳ್ಳು ಸುದ್ದಿಯನ್ನು ಹಾಕುವುದಾಗಲಿ, ಅಂತಹ ಸುದ್ದಿಯನ್ನು ಮತ್ತೊಬ್ಬರಿಗೆ ಕಳುಹಿಸುವುದಾಗಲಿ ಮಾಡಿದರೆ ಅಂತಹ ವ್ಯಕ್ತಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಮತ್ತು ಗ್ರೂಪ್ ಅಡ್ಮಿನ್‌ಗಳ ವಿರುದ್ಧವೂ ಕೇಸ್ ದಾಖಲಿಸಲಾಗುವುದು ಎಂದು ತಿಳಿಸಿದರು.
ಯಾವುದೇ ಒಂದು ವ್ಯಕ್ತಿ, ಸಂಸ್ಥೆ, ಹಾಗೂ ವಸ್ತುಗಳ ಬಗ್ಗೆ ದುರುದ್ದೇಶವಾಗಿ, ಆಧಾರ ರಹಿತ ನಿಂದನೆ ಮಾಡಿದರೆ, ಅಂತಹರ ವಿರುದ್ ದೂರನ್ನು ದಾಖಲಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ. ಸಮಾಜದ ಶಾಂತಿ ಸುವ್ಯವಸ್ಥೆಗೆ ದಕ್ಕೆ ಉಂಟಾದರೆ ಅಂತವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.