ಬೆಂಗಳೂರು: ನೂತನ ಪಿಂಚಣಿಯನ್ನು ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಕೋರಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಿಎಂಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಅವರು, ಹಲವಾರು ಹೋರಾಟಗಳು ನಡೆದ ನಂತರ 11-12-2018ರಂದು ಹೊರಡಿಸಿದ ಆದೇಶದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಹೊಸ ಪಿಂಚಣಿ ಯೋಜನೆಯಲ್ಲಿ ಮಾರ್ಪಾಡು/ಬದಲಾವಣೆ ಮಾಡಲು ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ ಎಂದು ವಿವರಿಸಿದ್ದಾರೆ.
ಏಪ್ರಿಲ್ 1, 2006ರ ನಂತರ ಹೊಸದಾಗಿ ಸೇವೆಗೆ ಸೇರಿದ 2 ಲಕ್ಷಕ್ಕೂ ಅಧಿಕ ನೌಕರರು ನಿಶ್ಚಿತ ಪಿಂಚಣಿ ಯೋಜನೆಯಿಂದ ವಂಚಿತರಾಗಿದ್ದು, ಹಲವು ನೌಕರರು ನಿವೃತ್ತರಾಗಿದ್ದಾರೆ. ಅವರಿಗೆ ಕನಿಷ್ಠ ಪಿಂಚಣಿ ಸಿಗುತ್ತಿದೆ. ನಿವೃತ್ತ ನೌಕರರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆದ್ದರಿಂದ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ನಿಶ್ಚಿತ ಪಿಂಚಣಿ ನೀಡುವ ಬಗ್ಗೆ ಪರಿಷ್ಕೃತ ಆದೇಶ ಹೊರಡಿಸಿ 3 ತಿಂಗಳೊಳಗಾಗಿ ಅಧಿಕಾರಿಗಳ ಸಮಿತಿಯಿಂದ ವರದಿಯನ್ನು ಪಡೆದು ಮುಂಬರುವ 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡುವಂತೆ ಕೋರಿದ್ದಾರೆ.
ಇದನ್ನೂ ಓದಿ: ಪಕ್ಷ ಕಟ್ಟಲು ನನ್ನ ಸ್ವಂತ ವಾಹನದಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ: ಬಿಎಸ್‌ವೈ