ETV Bharat / state

ನಾಳೆಯಿಂದ ಚಳಿಗಾಲದ ಅಧಿವೇಶನ: ಪೂರ್ವ ತಯಾರಿ ಪರಿಶೀಲಿಸಿದ ಸ್ಪೀಕರ್ ಕಾಗೇರಿ - ನವೆಂಬರ್​ 7 ರಿಂದ ಚಳಿಗಾಲ ಅಧಿವೇಶನ

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ ಹಿನ್ನೆಲೆ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪೂರ್ವತಯಾರಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಈ ಬಾರಿಯೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕೋವಿಡ್ 19 ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕಲಾಪದಲ್ಲಿ ಪಾಲ್ಗೊಳ್ಳುವ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಕೋವಿಡ್ 19 ಟೆಸ್ಟ್ ಮಾಡಿಸಬೇಕು.

speaker checks preperations of  Assembly winter  session
ಪೂರ್ವ ತಯಾರಿ ಪರಿಶೀಲಿಸಿದ ಸ್ಪೀಕರ್ ಕಾಗೇರಿ
author img

By

Published : Dec 6, 2020, 2:22 PM IST

ಬೆಂಗಳೂರು: ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಕಲಾಪ ಸದನದ ಪೂರ್ವತಯಾರಿಯನ್ನು ಪರಿಶೀಲಿಸಿದರು.

ಪೂರ್ವ ತಯಾರಿ ಪರಿಶೀಲಿಸಿದ ಸ್ಪೀಕರ್ ಕಾಗೇರಿ
ನಾಳೆಯಿಂದ ಡಿ.15ರ ವರೆಗೆ ಏಳು ದಿನಗಳ ಕಾಲ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಕಳೆದ ಬಾರಿಯಂತೆ ಈ ಸಲವೂ ಕೋವಿಡ್ ಮುಂಜಾಗ್ರತಾ ಕ್ರಮದೊಂದಿಗೆ ಅಧಿವೇಶನ ನಡೆಯಲಿದೆ. ಶಾಸಕರು ಕೂರುವ ಟೇಬಲ್ ಹಾಗೂ ಕುರ್ಚಿ ಮಧ್ಯೆ ಪ್ಲಾಸ್ಟಿಕ್ ಶೀಟನ್ನು ಅಳವಡಿಸಲಾಗಿದೆ. ಕಳೆದ ಬಾರಿಯಂತೆಯೇ ಎಲ್ಲಾ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಲಾಗುತ್ತಿದೆ. ಈ ಸಂಬಂಧ ಸ್ಪೀಕರ್ ಕಾಗೇರಿ ಕಲಾಪ ಸಭಾಂಗಣಕ್ಕೆ ಭೇಟಿ ನೀಡಿ, ಕೋವಿಡ್ ಮುಂಜಾಗ್ರತಾ ಕ್ರಮ, ಪೂರ್ವ ತಯಾರಿಗಳ ಪರಿಶೀಲನೆ ನಡೆಸಿದರು. ಕಳೆದ ಬಾರಿಯಂತೆಯೇ ಈ ಬಾರಿಯೂ ಮಾಧ್ಯಮದವರಿಗೆ ವೀಕ್ಷಕರ ಗ್ಯಾಲರಿಯಲ್ಲಿ ಅವಕಾಶ‌ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಕಲಾಪ ವೀಕ್ಷಣೆಗೆ ಅವಕಾಶ ಇಲ್ಲ. ಅಧಿಕಾರಿಗಳು ನಿಯಮಿತ ಸಂಖ್ಯೆಯಲ್ಲಿ ಮಾತ್ರ ಸದನದೊಳಗೆ ಹೋಗಲು ಅವಕಾಶ ಇದೆ. ಬ್ಯಾಂಕ್ವೆಟ್ ಹಾಲ್​ನಲ್ಲಿ ಕೋವಿಡ್ ಟೆಸ್ಟ್:ಈ ಬಾರಿಯೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕೋವಿಡ್ 19 ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕಲಾಪದಲ್ಲಿ ಪಾಲ್ಗೊಳ್ಳುವ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಕೋವಿಡ್ 19 ಟೆಸ್ಟ್ ಮಾಡಿಸಬೇಕು. ಆದರೆ ಈ ಬಾರಿ ಮಾಧ್ಯಮದವರಿಗೆ ಕಡ್ಡಾಯ ಕೋವಿಡ್ ಟೆಸ್ಟ್​​ನಿಂದ ವಿನಾಯ್ತಿ ನೀಡಲಾಗಿದೆ.ಇನ್ನು ಯಾರಿಗಾದರೂ ರೋಗ ಲಕ್ಷಣಗಳು ಕಂಡು ಬಂದರೆ ಕೋವಿಡ್ ಟೆಸ್ಟ್ ಮಾಡಿಸಬೇಕು. ನಾಳೆಯಿಂದ ಡಿ.15ರ ರವರೆಗೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರೀಕ್ಷಾ ಕೇಂದ್ರ ಕಾರ್ಯನಿರ್ವಹಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.