ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಸ್ಪೀಕರ್ ರಮೇಶ್ ಕುಮಾರ್ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಸದನದಲ್ಲಿ ಏನು ಮಾಡಬೇಕು, ಯಾವ ರೀತಿ ಹೋರಾಟ ನಡೆಸಬೇಕು ಎಂದು ಶಾಸಕರ ಜೊತೆ ಚರ್ಚೆ ನಡೆಸಿ ಎಲ್ಲರ ಅಭಿಪ್ರಾಯವನ್ನು ಪಡೆದು ನಂತರ ತೀರ್ಮಾನ ಕೈಗೊಳ್ಳಲಿದ್ದೇನೆ ಎಂದರು.
ಸದನದಲ್ಲಿ ಪಾಲ್ಗೊಳ್ಳುವ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ನಿಲುವಿನ ನಿರ್ಧಾರ ಕೈಗೊಂಡು ನಂತರವೇ ಸದನಕ್ಕೆ ತೆರಳುವುದಾಗಿ ಯಡಿಯೂರಪ್ಪ ಮಾಹಿತಿ ನೀಡಿದರು.