ETV Bharat / state

ಉಪಸಭಾಪತಿ ನಿಧನಕ್ಕೆ ಸ್ಪೀಕರ್ ಕಾಗೇರಿ ಮತ್ತು ಜಗದೀಶ್‌ ಶೆಟ್ಟರ್ ಸಂತಾಪ.. - condole the death of the vice chairperson

ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ‌ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಸಚಿವ ಜಗದೀಶ್‌ ಶೆಟ್ಟರ್‌ ತೀವ್ರ ಸಂತಾಪ ಸೂಚಿಸಿದ್ದಾರೆ..

banglore
ಉಪಸಭಾಪತಿ ನಿಧನಕ್ಕೆ ಸಂತಾಪ
author img

By

Published : Dec 29, 2020, 8:58 AM IST

Updated : Dec 29, 2020, 9:32 AM IST

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ‌ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಧರ್ಮೇಗೌಡರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ. ಶ್ರೀಯುತರ ಅಗಲಿಕೆಯಿಂದ ಹಿರಿಯ ರಾಜಕಾರಣಿಯೊಬ್ಬರನ್ನು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ಸಂತಾಪ ಸಂದೇಶದ ಮೂಲಕ ಪ್ರಾರ್ಥಿಸಿದ್ದಾರೆ.

ಓದಿ: ಉಪಸಭಾಪತಿ ಎಸ್ ‌ಎಲ್‌ ಧರ್ಮೇಗೌಡರು ರಾಜಕೀಯದಲ್ಲಿ ನಡೆದು ಬಂದ ದಾರಿ..

ಸಚಿವ ಜಗದೀಶ್‌ ಶೆಟ್ಟರ್‌ ತೀವ್ರ ಸಂತಾಪ : ಧರ್ಮೇಗೌಡರ ನಿಧನಕ್ಕೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿತ್ವ ಹೊಂದಿದ್ದ ಅವರ ಹಠಾತ್‌ ಮರಣದ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು, ಧರ್ಮೇಗೌಡರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ದೇವರು ನೀಡಲೆಂದು ಕೃಷಿ ಸಚಿವ ಬಿ ಸಿ ಪಾಟೀಲ್ ಮತ್ತು ಸಚಿವ ಬೈರತಿ ಬಸವರಾಜ್ ಸಂತಾಪ ಸೂಚಿಸಿದ್ದಾರೆ.

Last Updated : Dec 29, 2020, 9:32 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.