ಬೆಂಗಳೂರು : ಎಲ್ಲಾ ವಿಧಾನಸಭಾ ಸದಸ್ಯರಿಗೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆಗೆ ನಾಳೆ ಮಂತ್ರಿಮಾಲ್ನಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ವಿಧಾನಸಭೆಯಲ್ಲಿ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಾಳೆ ಸಂಜೆ 6.30 ಕ್ಕೆ ಮಂತ್ರಿ ಮಾಲ್ನಲ್ಲಿ ಸಿನಿಮಾ ವೀಕ್ಷಣೆ ಆಯೋಜನೆ ಮಾಡಲಾಗಿದೆ. ಎಲ್ಲಾ ಶಾಸಕರು ಆಗಮಿಸಿ ಸಿನಿಮಾ ವೀಕ್ಷಿಸಬೇಕೆಂದು ಆಹ್ವಾನಿಸಿದರು.
ಈ ಸಿನಿಮಾ ನೋಡುವುದರಿಂದ ಒಳ್ಳೆಯದಾಗುತ್ತದೆ. ಹಾಗಾಗಿ, ಎಲ್ಲರೂ ಸೇರಿ ಚಿತ್ರ ವೀಕ್ಷಿಸಲು ಹೋಗೋಣ ಎಂದು ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರಿಗೆ ಸ್ಪೀಕರ್ ಆಹ್ವಾನ ನೀಡಿದರು.
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಚಿತ್ರ ವೀಕ್ಷಣೆಗೆ ಶೇ.100ರಷ್ಟು ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ. ಅದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಸ್ಪೀಕರ್ ಕಾಗೇರಿ ತಿಳಿಸಿದರು.
ಇದನ್ನೂ ಓದಿ: 'ದಿ ಕಾಶ್ಮೀರ್ ಫೈಲ್ಸ್' ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಶಾಸಕ ಆಗ್ರಹ