ETV Bharat / state

ನಾಳೆ ಸ್ಪೀಕರ್​​ ಸ್ಥಾನಕ್ಕೆ ರಮೇಶ್​​​ ಕುಮಾರ್​​​​​​​​ ರಾಜೀನಾಮೆ? - ಅವಿಶ್ವಾಸ ನಿರ್ಣಯ

ನಾಳಿನ ಅಧಿವೇಶನದ ನಂತರ ರಮೇಶ್​ ಕುಮಾರ್​ ಸ್ಪೀಕರ್​ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಮೇಶ್​ ಕುಮಾರ್
author img

By

Published : Jul 28, 2019, 8:51 PM IST

ಬೆಂಗಳೂರು: ಅತೃಪ್ತ ಶಾಸಕರನ್ನೆಲ್ಲ ಅನರ್ಹಗೊಳಿಸಿರುವ ಸ್ಪೀಕರ್ ರಮೇಶ್ ಕುಮಾರ್ ನಾಳಿನ ಅಧಿವೇಶನದ ಕಾರ್ಯ ಕಲಾಪ ಮುಗಿಸಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಅತೃಪ್ತ ಶಾಸಕರ ಅನರ್ಹತೆ ಅರ್ಜಿಯನ್ನು ಇತ್ಯರ್ಥಗೊಳಿಸಿದ ಸ್ಪೀಕರ್ ಇಂದು ತರಾತುರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಎಲ್ಲ ಅತೃಪ್ತರನ್ನ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ. ನಾಳಿನ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆ, ಧನ ವಿನಿಯೋಗ ಮಸೂದೆ ಅಂಗೀಕಾರದ ಕಾರ್ಯ ಕಲಾಪಗಳನ್ನು ಪೂರೈಸಲಿದ್ದಾರೆ. ಬಳಿಕ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಬಿಜೆಪಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಚಿಂತನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ತಾವೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಭಾನುವಾರವಾಗಿದ್ದರೂ ಇಂದೇ ತುರ್ತು ಸುದ್ದಿಗೋಷ್ಠಿ ನಡೆಸಿದ್ದರು.

ಇಂದಿನ ಸುದ್ದಿಗೋಷ್ಠಿ ವೇಳೆ ರಾಜೀನಾಮೆ ಬಗ್ಗೆ ಸ್ಪೀಕರ್ ಪರೋಕ್ಷವಾಗಿ ಸಂದೇಶ ನೀಡಿದ್ದರು. ನಾನು ನನ್ನ ಜವಾಬ್ದಾರಿ ನಿಭಾಯಿಸಿದ್ದೇನೆ. ಸ್ಪೀಕರ್ ಆಗಿ ಸರ್ವಾನುಮತದಿಂದ ನಾನು ಆಯ್ಕೆಯಾಗಿದ್ದೇನೆ. ಧನ ವಿನಿಯೋಗ ಮಸೂದೆ ಅಂಗೀಕರಿಸುವುದು ನನ್ನ ಕರ್ತವ್ಯ. ಬಳಿಕ ನನ್ನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಜೊತೆಗೆ ನಾಳೆ ಅಧಿವೇಶನದಲ್ಲಿ ನಾನು ಅನರ್ಹತೆ ನಿರ್ಣಯದ ಸಂಬಂಧ, ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸವಿವರವಾಗಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ಹೀಗಾಗಿ ರಮೇಶ್ ಕುಮಾರ್ ಅಧಿವೇಶನದ ಕಾರ್ಯ ಕಲಾಪ ಮುಗಿಸಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Intro:GggBody:KN_BNG_04_SPEAKER_RESIGNATION_SCRIPT_7201951

ನಾಳಿನ ಅಧಿವೇಶನ ಕಾರ್ಯಕಲಾಪದ ಬಳಿಕ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜೀನಾಮೆ?

ಬೆಂಗಳೂರು: ಅತೃಪ್ತ ಶಾಸಕರನ್ನೆಲ್ಲಾ ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ನಾಳಿನ ಅಧಿವೇಶನ ಕಾರ್ಯಕಲಾಪ ಮುಗಿಸಿ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಅತೃಪ್ತ ಶಾಸಕರ ಅನರ್ಹತೆ ಅರ್ಜಿಯನ್ನು ಇತ್ಯರ್ಥಗೊಳಿಸಿದ ಸ್ಪೀಕರ್ ಇಂದು ತರಾತುರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಎಲ್ಲ ಅತೃಪ್ತರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ. ನಾಳೆ ಅಧಿವೇಶನ ನಡೆಯಲಿದ್ದು, ವಿಶ್ವಾಸ ಮತಯಾಚನೆ, ಧನವಿನಿಯೋಗ ಮಸೂಧೆ ಅಂಗೀಕಾರದ ಕಾರ್ಯ ಕಲಾಪಗಳನ್ನು ಪೂರೈಸಲಿದ್ದಾರೆ. ಬಳಿಕ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಬಿಜೆಪಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಚಿಂತನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ತಾವೇ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ ಹಿನ್ನೆಲೆಯಲ್ಲೇ ರಮೇಶ್ ಕುಮಾರ್ ಭಾನುವಾರವಾಗಿದ್ದರೂ ಇಂದೇ ತುರ್ತು ಸುದ್ದಿಗೋಷ್ಠಿ ನಡೆಸಿ, ತಮ್ಮ ಮುಂದಿದ್ದ ಅನರ್ಹತೆ ಅರ್ಜಿಗಳನ್ನು ಇತ್ಯರ್ಥ ಪಡಿಸಿದ್ದಾರೆ ಎನ್ನಲಾಗಿದೆ.

ಇಂದಿನ ಸುದ್ದಿಗೋಷ್ಠಿ ವೇಳೆ ರಾಜೀನಾಮೆ ಬಗ್ಗೆ ಸ್ಪೀಕರ್ ಪರೋಕ್ಷ ಸಂಕೇತ ನೀಡಿದ್ದಾರೆ. ನಾನು ನನ್ನ ಜವಾಬ್ದಾರಿ ನಿಭಾಯಿಸಿದ್ದೇನೆ. ಸ್ಪೀಕರ್ ಆಗಿ ಸರ್ವಾನುಮತದಿಂದ ನಾನು ಆಯ್ಕೆಯಾಗಿದ್ದೇನೆ. ಧನವಿನಿಯೋಗ ಮಸೂಧೆ ಅಂಗೀಕರಿಸುವುದು ನನ್ನ ಕರ್ತವ್ಯ. ಬಳಿಕ ನಾನು ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಜತೆಗೆ ನಾಳೆ ಅಧಿವೇಶನದಲ್ಲಿ ನಾನು ಅನರ್ಹತೆ ನಿರ್ಣಯದ ಸಂಬಂಧ, ರಾಜಕೀಯ ಬೆಳವಣಿಗೆಗಳ ಬಗ್ಗೆನೂ ಸವಿವರವಾಗಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ಹೀಗಾಗಿ ನಾಳೆನೇ ಸ್ಪೀಕರ್ ರಮೇಶ್ ಕುಮಾರ್ ಅಧಿವೇಶನದ ಕಾರ್ಯಕಲಾಪ ಮುಗಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.Conclusion:Hhh
ETV Bharat Logo

Copyright © 2025 Ushodaya Enterprises Pvt. Ltd., All Rights Reserved.