ETV Bharat / state

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ - ETV Bharat Kannada

ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ ಬಿತ್ತು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸದನದ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ವಿಧಾನಸಭೆ
ವಿಧಾನಸಭೆ
author img

By ETV Bharat Karnataka Team

Published : Dec 15, 2023, 5:43 PM IST

ಬೆಂಗಳೂರು/ಬೆಳಗಾವಿ: ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ 'ಸುವರ್ಣ ಕರ್ನಾಟಕ ಸಂಭ್ರಮ' ರಾಜ್ಯದೆಲ್ಲೆಡೆ ಮನೆ ಮಾಡಿದೆ. ಈ ಸಂಭ್ರಮದ ನಡುವೆಯೇ ಜರುಗಿದ ಬೆಳಗಾವಿ ಅಧಿವೇಶನ ಇಂದು ಮುಕ್ತಾಯವಾಯಿತು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸದನದ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

16ನೇ ವಿಧಾನಸಭೆಯ 2ನೇ ಅಧಿವೇಶನ ಡಿ.4ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ ಡಿ.15ವರೆಗೆ ನಡೆಯಿತು. ಈ ಅಧಿವೇಶನದಲ್ಲಿ ಸುಮಾರು 66 ಗಂಟೆಗಳಿಗೂ ಹೆಚ್ಚು ಕಾರ್ಯಕಲಾಪ ನಡೆದಿದೆ. 2023-24ನೇ ಸಾಲಿನ ಪೂರಕ ಅಂದಾಜು, 2023-24ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿ, ಧನವಿನಿಯೋಗ ವಿಧೇಯಕ ಸೇರಿದಂತೆ ಒಟ್ಟು 17 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಖಾದರ್ ಸುವರ್ಣಸೌಧದಲ್ಲಿಂದು ತಿಳಿಸಿದರು.

ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಅಧಿಕೃತ ನಿರ್ಣಯ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಬೆಳಗಾವಿಗೆ ಆಗಮಿಸಿದ ಶತಮಾನೋತ್ಸವದ ಸಂಭ್ರಮದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಕುರಿತು ಖಾಸಗಿ ಸದಸ್ಯರ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ.

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2023-24ನೇ ಸಾಲಿನ ಮೊದಲನೇ ಹಾಗೂ ಮಧ್ಯಂತರ ವರದಿ, ಸಾರ್ವಜನಿಕ ಉದ್ಯಮಗಳ ಸಮಿತಿಯ 136ನೇ ವರದಿ, ಕರ್ನಾಟಕ ವಿಧಾನಸಭೆಯ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ 2023-24ನೇ ಸಾಲಿನ ಮೊದಲನೇ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ. ಒಟ್ಟು 9 ಅಧಿಸೂಚನೆಗಳು, 3 ಅಧ್ಯಾದೇಶಗಳು ಮತ್ತು 61 ವಾರ್ಷಿಕ ವರದಿಗಳು, 105 ಲೆಕ್ಕ ಪರಿಶೋಧನಾ ವರದಿಗಳು ಹಾಗೂ 1 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ.

ನಿಯಮ 60 ರಡಿಯಲ್ಲಿ ನೀಡಿದ್ದ 4 ಸೂಚನೆಗಳ ಪೈಕಿ 3 ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಟ್ಟು 5 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿದೆ. ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಸದಸ್ಯರುಗಳನ್ನು ನಾಮನಿರ್ದೇಶನ ಮಾಡಲು ಸಭಾಧ್ಯಕ್ಷರಿಗೆ ಸದನವು ಅಧಿಕಾರ ನೀಡಲಾಗಿದೆ.

ಒಟ್ಟು 3038 ಪ್ರಶ್ನೆಗಳನ್ನು ಶಾಸಕರಿಂದ ಸ್ವೀಕರಿಸಲಾಗಿದೆ. ಸದನದಲ್ಲಿ ಉತ್ತರಿಸಬೇಕಾಗಿದ್ದ 150 ಪ್ರಶ್ನೆಗಳ ಪೈಕಿ 148 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 2206 ಪ್ರಶ್ನೆಗಳ ಪೈಕಿ 2010 ಪ್ರಶ್ನೆಗಳಿಗೆ ಉತ್ತರಗಳನ್ನು ಒದಗಿಸಲಾಗಿದೆ. ನಿಯಮ 351 ರಡಿಯಲ್ಲಿ 200 ಸೂಚನೆಗಳನ್ನು ಅಂಗೀಕರಿಸಿದ್ದು, 110 ಸೂಚನೆಗಳ ಉತ್ತರಗಳನ್ನು ನೀಡಲಾಗಿದೆ. ಗಮನ ಸೆಳೆಯುವ 174 ಸೂಚನೆಗಳ ಪೈಕಿ 140 ಸೂಚನೆಗಳನ್ನು ಸದನದಲ್ಲಿ ಚರ್ಚಿಸಲಾಗಿದೆ. ಒಟ್ಟಾರೆಯಾಗಿ 197 ಸೂಚನೆಗಳಿಗೆ ಉತ್ತರವನ್ನು ನೀಡಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 31 ಸೂಚನೆಗಳನ್ನು ಚರ್ಚಿಸಲಾಗಿದೆ. 18 ಅರ್ಜಿಗಳನ್ನು ಒಪ್ಪಿಸಲಾಗಿದೆ ಎಂದು ಯು ಟಿ ಖಾದರ್ ತಿಳಿಸಿದರು.

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ: ವಿಧಾನಸಭಾ ಕಲಾಪದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ ವಿಶೇಷ ಚರ್ಚೆ ಜರುಗಿದೆ. 42 ಶಾಸಕರು 11 ಗಂಟೆ 04 ನಿಮಿಷಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಮಾತನಾಡಿದರು.

ಬರ ನಿರ್ವಹಣೆಗೆ ಬದ್ಧತೆ: ರಾಜ್ಯದಲ್ಲಿ ಆವರಿಸಿರುವ ಬರಗಾಲದ ಕುರಿತು ವಿಧಾನಸಭೆಯಲ್ಲಿ ಚರ್ಚೆ ಜರುಗಿತು. ಶಾಸಕರು ಹಾಗೂ ಮಂತ್ರಿಗಳು ಬರಗಾಲದ ಬಗ್ಗೆ ಯುದ್ದ ಸನ್ನದ್ಧ ರೀತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನೀತಿಗಳನ್ನು ರೂಪಿಸಿದರು. ಯುವ ಶಾಸಕರು ಹವಾಮಾನ ಬದಲಾವಣೆ ಹಾಗೂ ಅದರ ಗಂಭೀರತೆಯ ಬಗ್ಗೆ ಸದನದಲ್ಲಿ ಗಹನ ವಿಚಾರಗಳನ್ನು ಮಂಡಿಸಿದರು.

ಅಧಿವೇಶನಕ್ಕೆ ಸಾಂಸ್ಕೃತಿಕ ಮೆರುಗು: ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಆರಂಭವಾದ ಅಧಿವೇಶನಕ್ಕೆ ಈ ಬಾರಿ ಸಾಂಸ್ಕೃತಿಕ ಮೆರುಗು ದೊರಕಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸೌಧದ ಮುಂದೆ ಶಾಸ್ತ್ರೀಯ ಹಾಗೂ ನವ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದರ ನಡುವೆಯೇ ಸುವರ್ಣ ಸೌಧಕ್ಕೆ ಶಾಶ್ವತ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಾಗಿದೆ.

ಡಿ.12ರಂದು ಸುವರ್ಣ ಸೌಧದ ಮುಂದೆ ಕರ್ನಾಟಕ ಎಂದು ನಾಮಕರಣಗೊಂಡ 50 ವರ್ಷ ಸಂದ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಮಂಡಲದ ಮಾಜಿ ಸಭಾಧ್ಯಕ್ಷ ಹಾಗೂ ಸಭಾಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೂಡಬಿದರೆಯ ಆಳ್ವಾಸ್​ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಭಾನುವಾರ ಸೇರಿದಂತೆ ರಜಾ ದಿನ, ರಾಷ್ಟ್ರೀಯ ಹಬ್ಬಗಳಂದು ಸುವರ್ಣ ಸೌಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿದೆ. ಸುವರ್ಣ ಸೌಧ ಉತ್ತರ ಭಾಗದಲ್ಲಿ ಶಾಸಕರ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಪ್ರಕೃತಿ ಕಾಳಜಿಯನ್ನು ಸಹ ಈ ಬಾರಿ ಅಧಿವೇಶನದಲ್ಲಿ ತೋರಲಾಯಿತು.

ಸುವರ್ಣ ಸೌಧದಲ್ಲಿ ಚಿಣ್ಣರ ಕಲರವ: ಈ ಬಾರಿಯ ಅಧಿವೇಶನವನ್ನು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ವೀಕ್ಷಿಸಿದರು. ಪ್ರಜಾಪ್ರಭುತ್ವ ಹಾಗೂ ಸಂಸದೀಯ ಅಂಶಗಳ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಮಕ್ಕಳಿಗೆ ಸುವರ್ಣಾವಕಾಶ ಒದಗಿತು. ಇದರ ನಡುವೆ ಸಾರ್ವಜನಿಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಕಲಾಪಗಳನ್ನು ವೀಕ್ಷಿಸಿದ ಇತಿಹಾಸ ಸೃಷ್ಠಿಯಾಯಿತು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ಬಿಜೆಪಿಯಿಂದ ನಿಲುವಳಿ ಸೂಚನೆ, ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.