ETV Bharat / state

ದೀಪಾವಳಿ ಹಬ್ಬದ ಪ್ರಯುಕ್ತ 1500ಕ್ಕೂ ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಿದೆ ಕೆಎಸ್​ಆರ್​ಟಿಸಿ - ಗಣಕೀಕೃತ ಬುಕ್ಕಿಂಗ್‌ ಕೌಂಟರ್‌

ಬೆಂಗಳೂರು ನಗರದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಕಲ್ಲಿಕೋಟೆ ಸೇರಿದಂತೆ ವಿವಿಧ ರಾಜ್ಯಗಳ ಸ್ಥಳಗಳಿಗೆ ತೆರಳಲು ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿಸಿ
author img

By

Published : Oct 17, 2022, 7:18 PM IST

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪ್ರಯಾಣಿಕರಿಗಾಗಿ 1500 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 24ರ ನರಕ ಚತುದರ್ಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ,ಧಾರಾವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಗೆ ತೆರಳಲು ವಿಶೇಷ ಬಸ್​ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದೆ.

ನಗರದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಕಲ್ಲಿಕೋಟೆ ಸೇರಿದಂತೆ ವಿವಿಧ ರಾಜ್ಯಗಳ ಸ್ಥಳಗಳಿಗೆ ತೆರಳಲು ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದಿದೆ.

ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಬಸ್ ಸೇವೆ: ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ ಎಂದು ಮಾಹಿತಿ ನೀಡಿದೆ.

ಹಲವು ಭಾಗಗಳಿಂದ ಹೆಚ್ಚುವರಿ ಬಸ್ ಗಳು: ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್‌, ಪಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರ 8ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಅನುಕೂಲಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಸೇರಿದಂತೆ ಇತರ ಸ್ಥಳಗಳಿಗೆ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂತಾರಾಜ್ಯಗಳಲ್ಲಿ 691 ಕೌಂಟರ್‌ಗಳಲ್ಲಿ ಬುಕ್ಕಿಂಗ್‌: ಅಂತಾರಾಜ್ಯಗಳಲ್ಲಿರುವ 691 ಗಣಕೀಕೃತ ಬುಕ್ಕಿಂಗ್‌ ಕೌಂಟರ್‌ಗಳ ಮೂಲಕ ಮುಂಗಡ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಒಟ್ಟಿಗೆ ಕಾಯ್ದಿರಿಸಿದರೆ ಶೇ. 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.

ಓದಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಚೆನ್ನಾಗಿ ನಡೆದಿದೆ: ಡಿ ಕೆ ಶಿವಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.