ETV Bharat / state

ದಸರಾ ಪ್ರಯುಕ್ತ 2 ಸಾವಿರಕ್ಕೂ ಹೆಚ್ಚು ಕೆಎಸ್​ಆರ್​ಟಿಸಿ ವಿಶೇಷ ಬಸ್ ಸೌಲಭ್ಯ; ಪೂಜೆ ಸಲ್ಲಿಸಿ ಚಾಲನೆ - ​ ETV Bharat Karnataka

ದಸರಾ ಹಬ್ಬಕ್ಕಾಗಿ ಊರಿಗೆ ತೆರಳುವ ಮತ್ತು ರಜೆ ಮುಗಿಸಿ ವಾಪಸಾಗಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದೆ.

ಬಸ್ ವ್ಯವಸ್ಥೆ
ಬಸ್ ವ್ಯವಸ್ಥೆ
author img

By ETV Bharat Karnataka Team

Published : Oct 19, 2023, 7:57 PM IST

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗು ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚು ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್​ಆರ್​ಟಿಸಿ) ಕಲ್ಪಿಸಿದ್ದು, ನಿಗಮದ ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ‌ ವಿಧ್ಯುಕ್ತವಾಗಿ‌ ಬಸ್​ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು‌. ಚಾಲಕ‌, ನಿರ್ವಾಹಕರಿಗೆ ಸಿಹಿ ಹಂಚಿ ಶುಭ ಕೋರಲಾಯಿತು. ಕೇಂದ್ರ‌ ಕಚೇರಿಯ ಹಿರಿಯ ಅಧಿಕಾರಿಗಳು, ಕೇಂದ್ರೀಯ ವಿಭಾಗದ ಅಧಿಕಾರಿಗಳು, ಕೆಂಪೇಗೌಡ ಬಸ್ ನಿಲ್ದಾಣದ‌ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆ್ಯಕ್ಸಲ್‌) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ದಸರಾ ಪ್ರಯುಕ್ತ ವಿಶೇಷ ಬಸ್ ವ್ಯವಸ್ಥೆ
ದಸರಾ ಪ್ರಯುಕ್ತ ವಿಶೇಷ ಬಸ್ ವ್ಯವಸ್ಥೆ

ಹಬ್ಬದ ರಜೆಗಳ ಪ್ರಯುಕ್ತ ಕೆಎಸ್ಆರ್​ಟಿಸಿ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 26.10.2023 ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಗೆ 2,000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಈ ಬಸ್‌ಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 24/10/2023 ರಿಂದ 29/10/2023 ರವರೆಗೆ ವಿಶೇಷ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಿದೆ.

ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು-ಧಾರವಾಡ ಹಾಗು ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ. ಪ್ರಯಾಣಿಸುವ ಸಾರ್ವಜನಿಕರು ಈ ದಸರಾ ಹಬ್ಬದ ಋತುವಿನಲ್ಲಿ ತೊಂದರೆರಹಿತ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಸೇವೆಗಳನ್ನು ಬಳಸಿಕೊಳ್ಳಬಹುದು. ಪ್ರಯಾಣಿಕರು ಕಾಯ್ದಿರಿಸದ ಟಿಕೆಟ್‌ಗಳನ್ನು ತೊಂದರೆ ಮುಕ್ತವಾಗಿ ಖರೀದಿಸಲು ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ನೈರುತ್ಯ ರೈಲ್ವೆ ವಿನಂತಿಸಿದೆ.

ಇದನ್ನೂ ಓದಿ: ಮೈಸೂರು ದಸರಾ: ಹೆಚ್ಚುವರಿ ಜನದಟ್ಟಣೆ ನಿವಾರಣೆಗೆ ವಿಶೇಷ ರೈಲುಗಳ ವ್ಯವಸ್ಥೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.