ETV Bharat / state

ಸಿಎಂ ಬಿಎಸ್​ವೈಗೆ ‘ಭೂ’ಕಂಟಕ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್, ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ..

special court of representatives rejected b report in Bellandur land dentification case
ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್
author img

By

Published : Jul 3, 2021, 5:45 PM IST

ಬೆಂಗಳೂರು : ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸರಿಯಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

ನಗರದ ದೇವರಬೀಸನಹಳ್ಳಿಯಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು 10 ಸಾವಿರ ಪುಟಗಳ ಬಿ ರಿಪೋರ್ಟ್ ಸಲ್ಲಿಸಿದ್ದರು.

ಈ ವರದಿ ಪರಿಶೀಲಿಸಿದ ನ್ಯಾಯಾಲಯ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಸೂಕ್ತವಾಗಿಲ್ಲ. ಹೀಗಾಗಿ, ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶಾನುಸಾರ ಸೂಕ್ತ ರೀತಿ ಮರುತನಿಖೆ ಮಾಡಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದೆ.

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ದೂರುದಾರ ವಾಸುದೇವರೆಡ್ಡಿ ಪರ ಮಂಡಿಸಿದ್ದ ಸುಪ್ರೀಂಕೋರ್ಟ್ ವಕೀಲ ಕೆ ವಿ ಧನಂಜಯ ಅವರು, ಪೊಲೀಸರು ಸರಿಯಾದ ತನಿಖೆಯನ್ನೇ ಮಾಡಿಲ್ಲ. ಬದಲಿಗೆ ಪ್ರಕರಣಕ್ಕೆ ಪೂರಕವಲ್ಲದ ರೀತಿ 10 ಸಾವಿರ ಪುಟಗಳ ವರದಿ ಸಲ್ಲಿಸಿದ್ದಾರೆ. ಡಿನೋಟಿಫೈ ಮಾಡುವ ಸರ್ಕಾರದ ನಿಲುವಿಗೆ ಅಂದಿನ ಕೆಐಎಡಿಬಿ ಸಿಇಒ ಆಕ್ಷೇಪಿಸಿದ್ದರು.

ಜತೆಗೆ, ರಾಜ್ಯ ಅಡ್ವೊಕೇಟ್ ಜನರಲ್ ಕೂಡ ಸಮ್ಮತಿ ವ್ಯಕ್ತಪಡಿಸಿರಲಿಲ್ಲ. ಹೀಗಾಗಿಯೇ, ಹೈಕೋರ್ಟ್ ಕೂಡ ಪೊಲೀಸರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆದ್ದರಿಂದ ಬಿ ರಿಪೋರ್ಟ್ ಪುರಸ್ಕರಿಸಬಾರದು ಎಂದು ಕೋರಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್, ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಡಿನೋಟಿಫಿಕೇಷನ್​​ ಪ್ರಕರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರೆಸಲು ಹೈಕೋರ್ಟ್​ ಆದೇಶ

ಪ್ರಕರಣದ ಹಿನ್ನೆಲೆ : 2000-2001ನೇ ಸಾಲಿನಲ್ಲಿ ನಗರದ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲ ಭೂಮಿಯನ್ನು ಐಟಿ ಕಾರಿಡಾರ್ ಆಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಮಾರತಹಳ್ಳಿ, ಬೆಳ್ಳಂದೂರು, ಸರ್ಜಾರಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಗ್ರಾಮಗಳಲ್ಲಿನ 434 ಎಕರೆ ಪ್ರದೇಶವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಲು ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು.

ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ. 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ.46.1ರ 1.17 ಎಕರೆ, ಸರ್ವೇ ನಂ. 18ರ 1.10 ಎಕರೆ, ಸರ್ವೇ ನಂ. 10ರ 33 ಗುಂಟೆ ಜಾಗವನ್ನು ಡಿನೋಟಿಫಿಕೇಷನ್ ಮಾಡಲು ಅಕ್ರಮವಾಗಿ ಆದೇಶಿಸಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರ ಜುಲೈ 10ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಕೋರ್ಟ್, ದೂರಿನಲ್ಲಿ ಮಾಡಲಾಗಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ 2015ರ ಫೆ.18ರಂದು ಆದೇಶಿಸಿತ್ತು. ಅದರಂತೆ ಪೊಲೀಸರು 2015ರ ಫೆ.21ರಂದು ಎಫ್‌ಐಆರ್ ದಾಖಲಿಸಿ, ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಿದ್ದರು.

ಯಡಿಯೂರಪ್ಪ ಅವರು 2019ರ ಜ.25ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿ, ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ, ವಿಶೇಷ ನ್ಯಾಯಾಯಲ ದೂರನ್ನು ವಿಚಾರಣೆ ಅಂಗೀಕರಿಸಿರುವುದು ಕಾನೂನು ಬಾಹಿರ ಕ್ರಮ. ಹೀಗಾಗಿ, ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು. ಆದರೆ, ಹೈಕೋರ್ಟ್ ಅರ್ಜಿ ವಜಾ ಮಾಡಿತ್ತಲ್ಲದೆ, ಸೂಕ್ತ ತನಿಖೆ ನಡೆಸದ ಲೊಕಾಯುಕ್ತ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.