ETV Bharat / state

SC/ST ವಿದ್ಯಾರ್ಥಿ ವಸತಿ ನಿಲಯಗಳ ಕೊರತೆ ನೀಗಿಸಲು ಮುಂದಿನ ಬಜೆಟ್​​​ನಲ್ಲಿ ವಿಶೇಷ ಅನುದಾನ : ಸಿಎಂ - ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆ

ಗ್ರಾಮೀಣ ಪ್ರದೇಶಗಳಲ್ಲಿ ವಸತಿ ನಿಲಯಗಳ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿರುವ ವಸತಿ ನಿಲಯಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ..

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Dec 15, 2021, 4:39 PM IST

ಬೆಂಗಳೂರು : ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಪೂರಕವಾಗಿ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ನಿಲಯಗಳ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿರುವ ವಸತಿ ನಿಲಯಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು.

ಈ ಕುರಿತು ಸಂಬಂಧಪಟ್ಟ ಇಲಾಖೆಗಳ ವಿಶೇಷ ಸಭೆಯನ್ನು ಕರೆದು, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಆದಾಯ ಹೆಚ್ಚಿಸಲು ಕ್ರಮ ಎಂದ ಶ್ರೀರಾಮುಲು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲು ಸರ್ಕಾರ ಈಗಾಗಲೇ ಶ್ರೀನಿವಾಸ ಮೂರ್ತಿ ಅವರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ, ಸಾರ್ವಜನಿಕರಿಗೆ ಹೊರೆಯಾಗದಂತೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.

ಸಂಚಾರ ಮಿತಿ ಹೆಚ್ಚಳದ ಕುರಿತು ಪರಿಶೀಲನೆ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಸ್‌ ಪಾಸ್ ಸಂಚಾರ ಮಿತಿಯನ್ನು 100 ಕಿ.ಮೀ.ಗೆ ಏರಿಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವ ಶ್ರೀರಾಮುಲು ಅವರು, ಜೆಡಿಎಸ್‍ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು.

ಹಾಲಿ ಇರುವ 60 ಕಿ.ಮೀ ಮಿತಿಯಿಂದ 100 ಕಿ.ಮೀಗೆ ಹೆಚ್ಚಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಶಾಲಾ- ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಶೈಕ್ಷಣಿಕ ದಾಖಲೆಗಳನ್ನು ಒದಗಿಸಿ ಸೇವಾಸಿಂಧು ಮೂಲಕ ಕೂಡ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಹಳೆ ಬಸ್‌ಗಳ ಅನುಪಯುಕ್ತಗೊಳಿಸಲು ಕ್ರಮ : ಕೇಂದ್ರ ಸರ್ಕಾರದ ನೀತಿಯ ಪ್ರಕಾರ 15 ವರ್ಷ ಪೂರೈಸಿದ ಅಥವಾ 9 ಲಕ್ಷ ಕಿ.ಮೀ ಕ್ರಮಿಸಿದ ಸಂಸ್ಥೆಯ ಎಲ್ಲಾ ಬಸ್‌ಗಳನ್ನು ಅನುಪಯುಕ್ತಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಸಚಿವರು, ಅಲ್ಲದೆ ಆರ್ಥಿಕ ಮಿತಿಯನ್ನು ಗಮನದಲ್ಲಿರಿಸಿಕೊಂಡು ಕುಶಾಲನಗರದಲ್ಲಿ ವಿಭಾಗೀಯ ಕಾರ್ಯಾಗಾರ ಆರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಸಕ ಅಪ್ಪಚ್ಚು ರಂಜನ್ ಅವರ ಪ್ರಶ್ನೆಗೆ ಉತ್ತರಿಸಿದರು.

ಇದನ್ನೂ ಓದಿ : ಹಳ್ಳಿ-ಹಳ್ಳಿಗಳಲ್ಲೂ ಮದ್ಯ ಮಾರಾಟ : ಸರ್ಕಾರ ಮೌನವಹಿಸಿದೆಯೆಂದು ಶಾಸಕರ ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.