ETV Bharat / state

ಇಂದು ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ: ಅಧಿಕಾರಿಗಳಿಗೆ ತಪ್ಪದೇ ಭಾಗವಹಿಸಲು ಸೂಚನೆ

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಹಾಡುವ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

special-koti-kanta-geetha-gayana-competition
ಇಂದು ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ: ಅಧಿಕಾರಿಗಳಿಗೆ ತಪ್ಪದೇ ಭಾಗವಹಿಸಲು ಸೂಚನೆ
author img

By

Published : Oct 28, 2022, 7:23 AM IST

ಬೆಂಗಳೂರು: ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ವಿಧಾನಸೌಧದಲ್ಲಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ರಾಜ್ಯಾದ್ಯಂತ ಈ ಕಾರ್ಯಕ್ರಮ ಇರಲಿದ್ದು, ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸುವಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗುತ್ತಿದ್ದು, ಕನ್ನಡ ನಾಡು-ನುಡಿಯ ಶ್ರೇಷ್ಠತೆಯನ್ನು ಸಾರುವ ನನ್ನ ನಾಡು - ನನ್ನ ಹಾಡು ಸಮೂಹ ಗೀತ ಗಾಯನ, ನಾಡಗೀತೆ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ: ಡಿ.ಎಸ್ ಕರ್ಕಿಯವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ: ಚೆನ್ನವೀರ ಕಣವಿಯವರ ವಿಶ್ವವಿನೂತನ ವಿದ್ಯಾಚೇತನ ಹಾಗೂ ಡಾ: ಹಂಸಲೇಖರವರ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಎಂಬ ಈ ಗೀತೆಗಳನ್ನು ಇಂದು ಬೆಳಗ್ಗೆ 12 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಹಾಡಲಾಗುತ್ತಿದೆ.

ಸಚಿವಾಲಯದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಐಎಎಸ್, ಐಪಿಎಸ್., ಐಎಫ್ಎಸ್ ಅಧಿಕಾರಿಗಳು ಹಾಗೂ ಸಚಿವಾಲಯದ ಎಲ್ಲಾ ಅಧಿಕಾರಿ/ಸಿಬ್ಬಂದಿ ಬೆಳಗ್ಗೆ 11.30ಕ್ಕೆ ವಿಧಾನಸೌಧದ ಪೂರ್ವದಿಕ್ಕಿನಲ್ಲಿರುವ ಬೃಹತ್ ಮೆಟ್ಟಿಲುಗಳ ಬಳಿ ಸೇರಿ ಮಧ್ಯಾಹ್ನ 12 ಗಂಟೆಗೆ 'ಕೋಟಿ ಕಂಠ ಗೀತ ಗಾಯನ' ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮರು ಆಯ್ಕೆ: ಇಂದು ಅಧಿಕೃತ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.