ETV Bharat / state

ಚರ್ಮ ಕುಶಲಕರ್ಮಿಗಳ ಪ್ರತಿ ಕುಟುಂಬಕ್ಕೆ 5 ಸಾವಿರ ರೂ ಪರಿಹಾರ: ಗೋವಿಂದ ಕಾರಜೋಳ - Special Package for leather workers

ಚರ್ಮ ಕುಶಲಕರ್ಮಿಗಳಿಗೆ ನೆರವಾಗುವ ಸಲುವಾಗಿ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಿದೆ. ಈ ಮೂಲಕ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರ ರೂನಂತೆ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Special Package for leather workers
ಡಿಸಿಎಂ ಗೋವಿಂದ ಕಾರಜೋಳ
author img

By

Published : May 8, 2020, 10:44 AM IST

ಬೆಂಗಳೂರು : ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಚರ್ಮ ಕುಶಲಕರ್ಮಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ತಲಾ 5 ಸಾವಿರ ರೂನಂತೆ 11,722 ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಜಮೆ ಮಾಡಲಾಗುವುದು. ಈ ವಿಶೇಷ ಪ್ಯಾಕೇಜ್​ನಿಂದ ಚರ್ಮ ಕುಶಲಕರ್ಮಿಗಳ ಜೀವನೋಪಾಯಕ್ಕೆ ನೆರವಾಗಲಿದೆ ಎಂದರು.

ಡಿಸಿಎಂ ಗೋವಿಂದ ಕಾರಜೋಳ

ಅಲ್ಲದೆ, ವಿಶೇಷ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿಯೂ ಡಿಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.