ETV Bharat / state

ರಾಜ್ಯ ವಿಧಾನಸಭೆ ಚುನಾವಣೆ : ವಿಶೇಷ ವಿನ್ಯಾಸವುಳ್ಳ ಮತಗಟ್ಟೆಗಳ ಸ್ಥಾಪನೆ

ಮೇ 10ರಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ವಿನ್ಯಾಸಗಳ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.

special-polling-booths-in-bengaluru
ರಾಜ್ಯ ವಿಧಾನಸಭೆ ಚುನಾವಣೆ : ವಿಶೇಷ ವಿನ್ಯಾಸವುಳ್ಳ ಮತಗಟ್ಟೆಗಳ ಸ್ಥಾಪನೆ
author img

By

Published : May 8, 2023, 9:31 PM IST

ಬೆಂಗಳೂರು : ಮೇ 10 ರಂದು ನಡೆಯುವ ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿರುವ ಚುನಾವಣಾ ಆಯೋಗ, ವಿಶೇಷ ವಿನ್ಯಾಸಗಳ ಮತಗಟ್ಟೆಗಳನ್ನು ಸ್ಥಾಪಿಸಲಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈ ವಿಶೇಷ ವಿನ್ಯಾಸಗಳ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.

ಈ ವಿನೂತನ ಥೀಮ್ ಬೇಸ್ಡ್ ಮತಗಟ್ಟೆಗಳಲ್ಲಿ ಮಹಿಳೆಯರಿಗಾಗಿ ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆಗಳೆಂಬ ವಿಶೇಷ ವಿನ್ಯಾಸದ ಮತಗಟ್ಟೆಗಳಿರಲಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಇಂದು ಕೊನೆಗೊಂಡಿದೆ. ಈಗಾಗಲೇ ವಿವಿಧ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿವೆ. ಕಾಂಗ್ರೆಸ್​ ಮತ್ತು ಬಿಜೆಪಿ, ಜೆಡಿಎಸ್​​ ಸೇರಿದಂತೆ ವಿವಿಧ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಚುನಾವಣೆಗೆ ಸಕಲ ಸಿದ್ಧತೆ ನಡೆಸಿರುವ ಪೊಲೀಸರು : ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 8 ವಿಭಾಗಗಳ 28 ಕ್ಷೇತ್ರಗಳಲ್ಲಿ ಸುಗಮವಾಗಿ ಮತದಾನ ನಡೆಸಲು ಪೊಲೀಸರು ಸಕಲ ಸಿದ್ಧತೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸಿ. ಹೆಚ್. ಪ್ರತಾಪ್ ರೆಡ್ಡಿ, ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ. ಸಲೀಂ ನೇತೃತ್ವದಲ್ಲಿ ಇಬ್ಬರು ಹೆಚ್ಚುವರಿ ಆಯುಕ್ತರು, ಇಬ್ಬರು ಜಂಟಿ ಆಯುಕ್ತರು, 24 ಜನ ಡಿಸಿಪಿಗಳು, 67 ಎಸಿಪಿ, 248 ಇನ್ಸ್ಪೆಕ್ಟರ್​ಗಳು, 881 ಪಿಎಸ್ಐ, 1020 ಎಎಸ್ಐ, 9971 ಕಾನ್ಸ್‌ಟೇಬಲ್ಸ್, 2565 ಜನ ಗೃಹ ರಕ್ಷಕದಳದ ಸಿಬ್ಬಂದಿ, ಕೇಂದ್ರೀಯ ಭದ್ರತಾ ಪಡೆ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಲಾಗುತ್ತದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 28 ಕ್ಷೇತ್ರಗಳಲ್ಲಿ 2509 ಮತಗಟ್ಟೆ ಕೇಂದ್ರಗಳಿದ್ದು, 6009 ಸಾಮಾನ್ಯ ಹಾಗೂ 1907 ಸೂಕ್ಷ್ಮ ಮತಗಟ್ಟೆಗಳ ಸಹಿತ 7916 ಮತಗಟ್ಟೆಗಳಿವೆ.

ಮೇ 10 ರಂದು ಮತದಾನ : ಮೇ 10 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮತದಾನ ನಡೆದ ಬಳಿಕ ಮೇ 13 ರಂದು ವಿವಿಧ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಹೊರಬೀಳಲಿದೆ. ಚುನಾವಣೆ ಹಿನ್ನಲೆ ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್​ ಮತ್ತು ಜಾತ್ಯತೀತ ಜನತಾ ದಳ (ಜೆಡಿಎಸ್​), ಆಪ್​ ಸೇರಿದಂತೆ ಇನ್ನಿತರ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಅಲ್ಲದೆ ಖ್ಯಾತ ಸಿನೆಮಾ ನಟರು ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅಂತಿಮವಾಗಿ ಮತದಾರ ಪ್ರಭುಗಳು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಮೇ 13ಕ್ಕೆ ಗೊತ್ತಾಗಲಿದೆ.

ಇದನ್ನೂ ಓದಿ : ವಿಧಾನಸಭಾ ಚುನಾವಣೆಗೆ ಬೆಂಗಳೂರು ಪೊಲೀಸರ ಸಕಲ ಸಿದ್ಧತೆ: ನಿರ್ಭೀತ ಮತದಾನಕ್ಕೆ ವೇದಿಕೆ ಸಿದ್ಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.