ETV Bharat / state

ನಾಲ್ಕು ಸಾವಿರ ಮಕ್ಕಳಿಂದ ಗಾಂಧಿ ಆಕೃತಿ ರಚಿಸಿ ಗಣರಾಜ್ಯೋತ್ಸವ ಆಚರಣೆ

author img

By

Published : Jan 24, 2020, 5:25 PM IST

ಈ ಬಾರಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ತಾಲೂಕು ಮಂಡಳಿ ತಾಯಾರಿ ನಡೆಸಿದ್ದು, ಸುಮಾರು 4 ಸಾವಿರ ಮಕ್ಕಳನ್ನು ಒಂದೆಡೆ ಸೇರಿಸಿ ಗಾಂಧೀಜಿ ಆಕೃತಿ ರಚಿಸಲು ಮೂಲಕ ಅದ್ದೂರಿ ಆಚರಣೆಗೆ ಮುಂದಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

SR Vishwanath
ಎಸ್.ಆರ್.ವಿಶ್ವನಾಥ್

ಬೆಂಗಳೂರು: ಯಲಹಂಕ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬದ ಆಚರಣೆ ಸಮಿತಿ ಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 4 ಸಾವಿರ ಮಕ್ಕಳನ್ನು ಒಂದೆಡೆ ಸೇರಿಸಿ ಗಾಂಧೀಜಿ ಆಕೃತಿ ರಚಿಸಲು ಸಕಲ ಸಿದ್ಧತೆ ನಡೆಸಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ಪತ್ರಿಕಾಗೋಷ್ಠಿ

ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಹೆಮ್ಮಯ ರಾಷ್ಟ್ರೀಯ ಹಬ್ಬವನ್ನು ವಿಶೇಷವಾಗಿ ಆಚರಿಸಬೇಕೆಂಬ ನಿಟ್ಟಿನಲ್ಲಿ ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಸುಮಾರು 4 ಸಾವಿರ ಮಕ್ಕಳಿಂದ ಗಾಂಧಿ ಆಕೃತಿ ರಚಿಸುವುದರ ಮೂಲಕ ಗಾಂಧೀಜಿಯವರಿಗೆ ನಮನ ಸಲ್ಲಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಅದಕ್ಕಾಗಿ ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದರು.

ಅಂದು ಯಲಹಂಕದ ಎನ್​ಇಎಸ್​ ವೃತ್ತದಿಂದ ಹೊಯ್ಸಳ ಕ್ರೀಡಾಂಗಣದವರೆಗೆ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಗುವುದು. ಈ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ರಘುಮೂರ್ತಿ ಉದ್ಘಾಟಿಸಲಿದ್ದು, 150 ಮಹಿಳಾ ಹಾಡುಗಾರ್ತಿಯರು ನಿರಂತರವಾಗಿ 150 ದೇಶದ ಭಕ್ತಿಗೀತೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ಸರ್ಕಾರಿ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸೇವಾರತ್ನ ಪ್ರಶಸ್ತಿ, ಕ್ರೀಡೆಯಲ್ಲಿ ವಿಜೇತರಾದ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು‌ ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಸರ್ಕಾರ ಅನುದಾನ ನೀಡಿಲ್ಲ. ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಜವಾಬ್ದಾರಿ ವಹಿಸಿಕೊಂಡಿದ್ದು, ಇವರೊಂದಿಗೆ ನಾಗರಿಕರು ಕೈ ಜೋಡಿಸಿದ್ದಾರೆ. ಯಲಹಂಕ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇನ್ನು ಸುದ್ದಿಗೋಷ್ಠಿಯಲ್ಲಿ ತಾಲೂಕು ದಂಡಾಧಿಕಾರಿ ರಘುಮೂರ್ತಿ, ಎಸಿಪಿ‌ ಶ್ರೀನಿವಾಸ್, ಬಿಇಓ ಕಮಲಾಕರ್ ಮೊದಲಾದವರು ಉಪಸ್ಥಿತರಿದ್ದರು.

Intro:ಬೆಂಗಳೂರು: ಯಲಹಂಕ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬದ ಆಚರಣೆ ಸಮಿತಿವತಿಯಿಂದ ಜ.26ರಂದು ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 4ಸಾವಿರ ಮಕ್ಕಳನ್ನು ಒಂದೆಡೆ ಸೇರಿಸಿ ಗಾಂಧೀಜೀ ಆಕೃತಿ ರಚಿಸುವುದರ ಮೂಲಕ ವಿಶಿಷ್ಟವಾಗಿ ಆಚರಿಸಲು ಸಕಲ ಸಿದ್ದತೆ ನಡೆಸಿದೆ.

ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ದೇಶದ ಹೆಮ್ಮಯ ರಾಷ್ಟ್ರೀಯ ಹಬ್ಬವನ್ನು ವಿಶೇಷವಾಗಿ ಆಚರಿಸಬೇಕೆಂಬ ನಿಟ್ಟಿನಲ್ಲಿ ಈ ಬಾರಿ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದಲ್ಲೆ ಪ್ರಪ್ರಥಮ ಬಾರಿಗೆ 4ಸಾವಿರ ಮಕ್ಕಳಿಂದ ಗಾಂಧಿ ಆಕೃತಿ ರಚಿಸುವುದರ ಮೂಲಕ ಗಾಂಧೀಜಿಯವರಿಗೆ ನಮನ ಸಲ್ಲಿಸಲಾಗುವುದು ಎಂದರು.

Body:ಅಂದು ಬೆಳಗ್ಗೆ 7.30ಕ್ಕೆ ಯಲಹಂಕದ ಎನ್.ಇ.ಎಸ್.ವೃತ್ತದಿಂದ ಹೊಯ್ಸಳ ಕ್ರೀಡಾಂಗಣದವರೆಗೆ ವಿವಿಧ ಇಲಾಖೆಗಳ ಸ್ಥಬ್ಧಚಿತ್ರಗಳ ಮೂಲಕ ಮೆರವಣಿಗೆ ನಡೆಸಲಾಗುವುದು. ನಂತರ 9ಗಂಟೆಗೆ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಗಣರಾಜ್ಯೋತ್ಸವವನ್ನು ತಾಲೂಕು ದಂಡಾಧಿಕಾರಿ ರಘುಮೂರ್ತಿ ಉದ್ಘಾಟಿಸಲಿದ್ದು, 150ಮಹಿಳಾ ಹಾಡುಗಾರ್ತಿಯರಿಂದ ವೈಷ್ಣವ ಜನತೋ ರಘುಪತಿ ರಾಘವ ಸೇರಿದಂತೆ ನಿರಂತರವಾಗಿ 150ದೇಶ ಭಕ್ತಿಗೀತೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ಸರ್ಕಾರಿ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸೇವಾರತ್ನ ಪ್ರಶಸ್ತಿ, ಕ್ರೀಡೆಯಲ್ಲಿ ವಿಜೇತರಾದ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು‌ ತಿಳಿಸಿದರು.

Conclusion:ಇದೇ ಪ್ರಥಮ ಬಾರಿಗೆ ಪೊಲೀಸ್ ಬ್ಯಾಂಡ್ ಇರಲಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಸರ್ಕಾರ ಅನುದಾನ ನೀಡಿಲ್ಲ. ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜವಾಬ್ದಾರಿವಹಿಸಿಕೊಂಡಿದ್ದು ಇವರೊಂದಿಗೆ ನಾಗರೀಕರು ಕೈ ಜೋಡಿಸಿದ್ದಾರೆ. ಯಲಹಂಕ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ತಾಲೂಕು ದಂಡಾಧಿಕಾರಿ ರಘುಮೂರ್ತಿ, ಎಸಿಪಿ‌ ಶ್ರೀನಿವಾಸ್, ಬಿಇಓ ಕಮಲಾಕರ್ ಇದ್ದರು.

-----
ಬೈಟ್: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.