ETV Bharat / state

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: 2024ರ ವೇಳಾಪಟ್ಟಿ ಪರಿಷ್ಕರಿಸಿದ ಆಯೋಗ - ಮನೋಜ್ ಕುಮಾರ್ ಮೀನಾ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳಾಪಟ್ಟಿವನ್ನು ಪರಿಷ್ಕರಿಸಿರುವ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಪ್ರಕಟಣೆ ಹೊರಡಿಸಿದ್ದಾರೆ.

ಭಾರತ ಚುನಾವಣಾ ಆಯೋಗ
ಭಾರತ ಚುನಾವಣಾ ಆಯೋಗ
author img

By ETV Bharat Karnataka Team

Published : Dec 27, 2023, 10:53 PM IST

ಬೆಂಗಳೂರು: ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಅದರಂತೆ ಅಂತಿಮ ಮತದಾರರ ಪಟ್ಟಿಯನ್ನು ಜ.22ಕ್ಕೆ ಪ್ರಕಟಿಸಲಿದೆ. ಮತದಾರರಿಗೆ ತಮ್ಮ‌ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು ಇನ್ನಷ್ಟು ಅವಕಾಶ ನೀಡಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಅರ್ಹತಾ ದಿನಾಂಕ 1-1-2024ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲಾ ಅರ್ಹ ಮತದಾರರು ನಮೂನೆ-6 ಅರ್ಜಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ದಿನಾಂಕ 27-12-2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಚುನಾವಣಾ ಆಯೋಗವು ಸೂಚಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಹ ಮತದಾರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ಮನೋಜ್ ಕುಮಾರ್ ಮೀನಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮತ ಪ್ರಚಾರದಲ್ಲಿ ದಿವ್ಯಾಂಗರಿಗೆ ಧಕ್ಕೆ ತರುವ ಭಾಷೆ ಬಳಸುವಂತಿಲ್ಲ: ಚುನಾವಣಾ ಆಯೋಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.