ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಕಿಚ್ಚು ದೇಶಾದ್ಯಂತ ದಿನೇ ದಿನೇ ಹೆಚ್ಚಾಗ್ತಿದೆ. ಮೊನ್ನೆ ತಾನೆ ಚರ್ಚ್ ಸ್ಟ್ರೀಟ್ ಬಳಿ ಇರುವ ಗೋಡೆಗಳ ಮೇಲೆ 'ಫ್ರೀ ಕಾಶ್ಮೀರ, ನೋ ಸಿಎಎ, ನೋ ಎನ್‌ಆರ್‌ಸಿ' ಎಂದು ಬರೆಯಲಾಗಿತ್ತು. ಈ ಹಿನ್ನೆಲೆ ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಆರೋಪಿಗಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕೃತ್ಯವನ್ನು ಹೊರ ರಾಜ್ಯದವರು ನಡೆಸಿರಬಹುದು ಎಂಬ ಅನುಮಾನ ಪೊಲೀಸರದ್ದು. ಹೀಗಾಗಿ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.