ETV Bharat / state

ಇನ್ನಷ್ಟು ಶಾಸಕರು ಕೈಕೊಡುವ ಆತಂಕ: ಅತೃಪ್ತರ ಮೇಲೆ ನಿಗಾ ಇಟ್ಟ ಕಾಂಗ್ರೆಸ್​ ನಾಯಕರು - kannadanews

ಇಬ್ಬರು ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್ ನಾಯಕರು ಉಳಿದ ಅತೃಪ್ತ ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇರುವುದರಿಂದ ಅವರೆಡೆ ವಿಶೇಷ ಗಮನ ಹರಿಸಿದ್ದಾರೆ.

ಶಾಸಕರ ಮೇಲೆ ವಿಶೇಷ ನಿಗಾ ಇಟ್ಟ ಕಾಂಗ್ರೆಸ್​ ನಾಯಕರು
author img

By

Published : Jul 2, 2019, 11:08 AM IST

ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್ ನಾಯಕರು ಉಳಿದ ಅತೃಪ್ತ ಶಾಸಕರ ಕಡೆ ವಿಶೇಷ ಗಮನ ಹರಿಸಿದ್ದು, ಅವರ ಚಲನವಲನಗಳ ಮೇಲೆ ನಿಗಾ ಇರಿಸಿ, ಮನವೊಲಿಕೆಗೆ ಶತ ಪ್ರಯತ್ನ ಮುಂದುವರಿಸಿದ್ದಾರೆ.

ಶಾಸಕರಾದ ಮಹೇಶ್ ಕುಮಟಳ್ಳಿ, ಬಿ.ಸಿ ಪಾಟೀಲ್, ಶ್ರೀಮಂತ ಪಾಟೀಲ್, ನಾಗೇಂದ್ರ ಸೇರಿದಂತೆ ಕೆಲ ಶಾಸಕರು ಇಂದು ಇಲ್ಲ ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಕಂಡು ಬಂದಿರುವ ಹಿನ್ನೆಲೆ ಇವರ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ರಮೇಶ್ ಹಾಗೂ ಆನಂದ್ ಸಿಂಗ್ ಇಬ್ಬರು ರಾಜೀನಾಮೆ ನೀಡಿದ್ದು ಇವರೊಂದಿಗೆ ಗುಂಪಾಗಿ ಇನ್ನಷ್ಟು ಮಂದಿ ರಾಜೀನಾಮೆ ನೀಡಬಹುದಾದ ಆತಂಕ ಎದುರಾಗಿದೆ. ಅತೃಪ್ತ ಶಾಸಕರು ಯಾರು ಇದುವರೆಗೂ ತಾವು ರಾಜೀನಾಮೆ ನೀಡುವುದಾಗಿ ತಿಳಿಸಿಲ್ಲ, ಬದಲಾಗಿ ತಾವು ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದಾಗಿ ಹೇಳಿಕೊಂಡಿದ್ದಾರೆ. ಆದರೂ ಇವರು ಕೈಕೊಡುವ ಆತಂಕ ಇರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ಇವರ ಮೇಲೆ ಹೆಚ್ಚಿನ ಗಮನ ಹರಿಸಿದೆ. ನಿರಂತರ ಸಂಪರ್ಕದಲ್ಲಿದ್ದು ಮನವೊಲಿಸುವ ಯತ್ನವನ್ನು ನಡೆಸಿದೆ.

ಒಟ್ಟು ಆರು ವರ್ಷ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಹಿರಿಯ ಸಚಿವರಿಂದ ರಾಜೀನಾಮೆ ಪಡೆದು ಅತೃಪ್ತ ಶಾಸಕರಿಗೆ ಅವಕಾಶ ನೀಡುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಿರುವ ಆತಂಕವನ್ನು ನಿವಾರಿಸಿಕೊಳ್ಳುವ ಚಿಂತನೆಯನ್ನು ಕೂಡ ನಡೆಸಲಾಗಿದೆ. ಈ ಹಿನ್ನೆಲೆ ಸಚಿವರಾದ ಕೆಜೆ ಜಾರ್ಜ್, ಆರ್ ವಿ ದೇಶಪಾಂಡೆ, ಡಿಕೆ ಶಿವಕುಮಾರ್, ಕೃಷ್ಣ ಬೈರೇಗೌಡ, ಯು ಟಿ ಖಾದರ್ ಅವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಪರ್ಯಾಯವಾಗಿ ಈ ಹಿರಿಯ ಸಚಿವರಿಗೆ ಪಕ್ಷ ಸಂಘಟನೆ ಹಾಗೂ ಸರ್ಕಾರದ ಭಾಗವಾಗಿ ಇತರೆ ಗೌರವಯುತ ಸ್ಥಾನವನ್ನು ನೀಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಇವೆಲ್ಲವುಗಳ ಮಧ್ಯೆ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಉಳಿಸಿಕೊಳ್ಳಲೇಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಈ ಸಾರಿಯೂ ಬಿಜೆಪಿಗೆ ಸರ್ಕಾರ ರಚಿಸುವ ಕನಸನ್ನು ಈಡೇರಿಸಿಕೊಳ್ಳಲು ಆಗದಂತೆ ತಡೆಯುವ ಯತ್ನ ನಡೆಸಿದ್ದಾರೆ.

Intro:newsBody:ಕೈಕೊಡುವ ಆತಂಕ; ಕೆಲ ಶಾಸಕರ ಮೇಲೆ ವಿಶೇಷ ನಿಗಾ ಇಟ್ಟು ಕೈ ನಾಯಕರು

ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್ ನಾಯಕರು ಉಳಿದ ಅತೃಪ್ತ ಶಾಸಕರ ಕಡೆ ವಿಶೇಷ ಗಮನ ಹರಿಸಿದ್ದಾರೆ.
ಅತೃಪ್ತ ಶಾಸಕರ ಚಲನವಲನಗಳ ಮೇಲೆ ವಿಶೇಷ ನಿಗಾ ಇರಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಇದರ ಜೊತೆಜೊತೆಗೆ ಅವರ ಮನವೊಲಿಕೆಗೆ ಶತ ಪ್ರಯತ್ನ ಮುಂದುವರಿಸಿದ್ದಾರೆ.
ಶಾಸಕರಾದ ಮಹೇಶ್ ಕುಮಟಳ್ಳಿ, ಬಿಸಿ ಪಾಟೀಲ್, ಶ್ರೀಮಂತ ಪಾಟೀಲ್, ನಾಗೇಂದ್ರ ಸೇರಿದಂತೆ ಕೆಲ ಶಾಸಕರು ಇಂದು ಇಲ್ಲ ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಕಂಡು ಬಂದಿರುವ ಹಿನ್ನೆಲೆ ಇವರ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಒಬ್ಬೊಬ್ಬರಾಗಿ ರಾಜೀನಾಮೆ ನೀಡಲ್ಲ ಗುಂಪಾಗಿಯೇ ಪಕ್ಷ ಬಿಟ್ಟು ತೆರಳುತ್ತೇವೆ ಎಂದು ಈ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದರು. ಇದೀಗ ರಮೇಶ್ ಹಾಗೂ ಆನಂದ್ ಸಿಂಗ್ ಇಬ್ಬರು ರಾಜೀನಾಮೆ ನೀಡಿದ್ದು ಇವರೊಂದಿಗೆ ಗುಂಪಾಗಿ ಇನ್ನಷ್ಟು ಮಂದಿ ರಾಜೀನಾಮೆ ನೀಡಬಹುದಾದ ಆತಂಕ ಎದುರಾಗಿದೆ. ಅತೃಪ್ತ ಶಾಸಕರು ಯಾರು ಇದುವರೆಗೂ ತಾವು ರಾಜೀನಾಮೆ ನೀಡುವುದಾಗಿ ತಿಳಿಸಿಲ್ಲ, ಬದಲಾಗಿ ತಾವು ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದಾಗಿ ಹೇಳಿಕೊಂಡಿದ್ದಾರೆ. ಆದರೂ ಇವರು ಕೈಕೊಡುವ ಆತಂಕ ಇರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ಇವರ ಮೇಲೆ ಹೆಚ್ಚಿನ ಗಮನ ಹರಿಸಿದೆ. ನಿರಂತರ ಸಂಪರ್ಕದಲ್ಲಿದ್ದು ಮನವೊಲಿಸುವ ಯತ್ನವನ್ನು ನಡೆಸಿದೆ. ವಿವಿಧ ಹುದ್ದೆಗಳನ್ನು ನೀಡುವ ಭರವಸೆ ಕೂಡ ನೀಡಲಾಗುತ್ತಿದೆ. ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿದೇಶದಲ್ಲಿದ್ದು ಅವರು ಹಿಂತಿರುಗುತ್ತಿದ್ದಂತೆ ವಿಶೇಷ ಹುದ್ದೆಗಳನ್ನು ಕೊಡಿಸುವುದಾಗಿ ಭರವಸೆ ನೀಡಲಾಗುತ್ತಿದೆ.
ರಾಜೀನಾಮೆ ಕೊಡುತ್ತಾರಾ ಹಿರಿಯ ಸಚಿವರು?
ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಐದು ವರ್ಷ ಸಚಿವರಾಗಿದ್ದ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ಒಂದು ವರ್ಷ ಪೂರ್ಣಗೊಳಿಸಿರುವ ಅಂದರೆ ಒಟ್ಟು ಆರು ವರ್ಷ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಹಿರಿಯ ಸಚಿವರಿಂದ ರಾಜಿನಾಮೆ ಪಡೆದು ಅತೃಪ್ತ ಶಾಸಕರಿಗೆ ಅವಕಾಶ ನೀಡುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಿರುವ ಆತಂಕವನ್ನು ನಿವಾರಿಸಿಕೊಳ್ಳುವ ಚಿಂತನೆಯನ್ನು ಕೂಡ ನಡೆಸಲಾಗಿದೆ. ಈ ಹಿನ್ನೆಲೆ ಸಚಿವರಾದ ಕೆಜೆ ಜಾರ್ಜ್, ಆರ್ ವಿ ದೇಶಪಾಂಡೆ, ಡಿಕೆ ಶಿವಕುಮಾರ್, ಕೃಷ್ಣ ಬೈರೇಗೌಡ, ಯು ಟಿ ಖಾದರ್ ಅವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಪರ್ಯಾಯವಾಗಿ ಈ ಹಿರಿಯ ಸಚಿವರಿಗೆ ಪಕ್ಷ ಸಂಘಟನೆ ಹಾಗೂ ಸರ್ಕಾರದ ಭಾಗವಾಗಿ ಇತರೆ ಗೌರವಯುತ ಸ್ಥಾನವನ್ನು ನೀಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ.
ಸದ್ಯ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದು ಪ್ರಬಲ ಆಕಾಂಕ್ಷಿಯಾಗಿ ಆ ಸ್ಥಾನಕ್ಕೆ ಒತ್ತಡ ತರುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸಿಎಂ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಿದ್ಧತೆಯಲ್ಲಿರುವ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಶತಾಯಗತಾಯ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಿದ್ದಾರೆ. ಇವರಿಗೆ ಹೆಚ್ ಕೆ ಪಾಟೀಲ್, ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಪ್ರಬಲ ಸ್ಪರ್ಧೆ ಒಡ್ಡಿದ್ದಾರೆ.
ಇವೆಲ್ಲವುಗಳ ಮಧ್ಯೆ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಉಳಿಸಿಕೊಳ್ಳಲೇಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಈ ಸಾರಿಯೂ ಬಿಜೆಪಿಗೆ ಸರ್ಕಾರ ರಚಿಸುವ ಕನಸನ್ನು ಈಡೇರಿಸಿಕೊಳ್ಳಲು ಆಗದಂತೆ ತಡೆಯುವ ಯತ್ನ ನಡೆಸಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.