ಬೆಂಗಳೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ವಿಕಲಚೇತನರು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ಜೆಪಿ ನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ವಿಕಲ ಚೇತನರು, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಎಳ್ಳು ಬೆಲ್ಲವನ್ನು ಹಂಚಿದರು.
ಓದಿ...ಬಿಎಸ್ವೈ ಮಾತು ತಪ್ಪಲ್ಲ, ಹಣೆಯಲ್ಲಿ ಬರೆದಿದ್ರೆ ಸಚಿವನಾಗುತ್ತೇನೆ; ಶಾಸಕ ಮುನಿರತ್ನ ಪ್ರತಿಕ್ರಿಯೆ..!
ಇಂಧನ ಇಲಾಖೆಯಲ್ಲಿ 600ಕ್ಕೂ ಹೆಚ್ಚು ವಿಶೇಷ ಚೇತನರಿಗೆ ಖಾಯಂ ಉದ್ಯೋಗ ಕೊಡಿಸಿ 2 ವರ್ಷವಾದ ಹಿನ್ನೆಲೆಯಲ್ಲಿ ವಿಶೇಷ ಚೇತನರು ಕೃತಜ್ಞತೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.