ETV Bharat / state

ಸಂಚಾರ ದಟ್ಟಣೆ ಹೆಚ್ಚಿರುವ ಜಂಕ್ಷನ್​ಗಳಲ್ಲಿ ತ್ವರಿತವಾಗಿ ರಿಪೇರಿ ಕಾರ್ಯ ಪೂರ್ಣಗೊಳಿಸಿ: ಮುಖ್ಯ ಕಾರ್ಯದರ್ಶಿ - ಬೆಂಗಳೂರು ಸಂಚಾರಿ ಪೊಲೀಸ್ ವಿಭಾಗ

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ 10 ಜಂಕ್ಷನ್ ಗಳಲ್ಲಿ ರೀಪೆರಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚನೆ ನೀಡಿದ್ದಾರೆ.

Speedy completion of congested junctions say cs
ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ
author img

By

Published : Nov 21, 2022, 10:10 PM IST

ಬೆಂಗಳೂರು: ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ 10 ಜಂಕ್ಷನ್ ಗಳಾದ ಸಿಲ್ಕ್ ಬೋರ್ಡ್ ಜಂಕ್ಷನ್, ಇಬ್ಬಲೂರು ಜಂಕ್ಷನ್, ಜಯದೇವ ಜಂಕ್ಷನ್, ಎಂ.ಎಂ.ಟೆಂಪಲ್ ಜಂಕ್ಷನ್(ಟಿನ್ ಪ್ಯಾಕ್ಟರಿ), ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಸಾರಕ್ಕಿ ಜಂಕ್ಷನ್, ಕೆ.ಎಸ್.ಲೇಔಟ್ ಜಂಕ್ಷನ್, ಕಾಡುಬೀಸನಹಳ್ಳಿ ಜಂಕ್ಷನ್ ಹಾಗೂ ಬನಶಂಕರಿ ಜಂಕ್ಷನ್ ಗಳಲ್ಲಿ ರೀಪೆರಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಂದಿತಾ ಶರ್ಮಾ ನಗರದ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳಲ್ಲಿ ಬಾಕಿಯಿರುವ ರಸ್ತೆ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬೇಕು. ಸಂಚಾರಿ ಪೊಲೀಸ್ ವಿಭಾಗದಿಂದ ರಸ್ತೆಗುಂಡಿಗಳನ್ನು ಗುರುತಿಸಿ ಪಾಲಿಕೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಪ್ರಮುಖ ರಸ್ತೆಗಳಲ್ಲಿ ರಸ್ತೆ ಮಟ್ಟಕ್ಕಿಂತ ಎತ್ತರ ಇರುವ ಒಳಚರಂಡಿ ಗಳಿಂದ ಅಪಘಾತವಾಗುವ ಸಂಭವವಿದ್ದು, ಈ ಪೈಕಿ ಸಂಚಾರಿ ಪೊಲೀಸ್ ವಿಭಾಗದಿಂದ 112 ಮ್ಯಾನ್‌ ಹೋಲ್‌ಗಳನ್ನು ಗುರುತಿಸಲಾಗಿದೆ. ಅದರಂತೆ, ಜಲಮಂಡಳಿಯಿಂದ 53 ಒಳಚರಂಡಿಳನ್ನು ಸರಿಪಡಿಸಿದ್ದು, ಬಾಕಿ ಉಳಿದಿರುವ 59 ಒಳಚರಂಡಿಗಳನ್ನು ಕೂಡಲೇ ಸರಿಪಡಿಸಲು ತಿಳಿಸಿದರು.

ಅಧಿಕಾರಿಗಳಿಂದ ಸ್ಥಳ ಪರಿಶೀಲನೆಗೆ ಸೂಚನೆ: ನಗರದ ಪ್ರಮುಖ ರಸ್ತೆಗಳಲ್ಲಿ ಮಳೆಯಾದ ವೇಳೆ ನೀರು ನಿಂತು ವಾಹನ ಸವಾರರಿಗೆ ಸಮಸ್ಯೆಯಾಗುವ ಸ್ಥಳಗಳನ್ನು ಬೆಂಗಳೂರು ಸಂಚಾರಿ ಪೊಲೀಸ್ ವಿಭಾಗದಿಂದ ಗುರುತಿಸಿದ್ದು, ಎಲ್ಲ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕಾಮಗಾರಿ ನಡೆಸಿ ನೀರು ನಿಲ್ಲದಂತೆ ದುರಸ್ತಿ ಪಡಿಸಲಾಗಿರುತ್ತದೆ. ಆದರೆ, ಕೆಲ ಸ್ಥಳದಲ್ಲಿ ಕೆಲಸ ಮಾಡಿದ್ದರೂ ಸಮಸ್ಯೆ ಬಗೆಹರಿದಿರುವುದಿಲ್ಲ ಎಂದು ಸಂಚಾರಿ ಪೊಲೀಸರು ತಿಳಿಸಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸ್ಥಳ ಪರಿಶೀಲಿಸಿ ಸಮಸ್ಯೆ ಬಗೆಹರಿಸಲು ಸೂಚಿಸಿದರು.

107 ರಸ್ತೆಗಳ ಡಾಂಬರೀಕರಣ: ರಾಜಧಾನಿಯ 107 ರಸ್ತೆಗಳಿಗೆ ಡಾಂಬರೀಕರಣ ಮಾಡುವುದು, 210 ಕಡೆ ಬೀದಿ ದೀಪಗಳನ್ನು ಅಳವಡಿಸುವುದು, 47 ಕಡೆ ಬಿದಿ ದೀಪಗಳನ್ನು ದುರಸ್ತಿಪಡಿಸುವುದು, 33 ಕಡೆ ಕಸ ಸುರಿಯುವ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ತೆರವುಗೊಳಿಸುವುದು, 22 ಕಡೆ ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಜಲಮಂಡಳಿ ವತಿಯಿಂದ ಪೈಪ್‌ಗಳನ್ನು ಹಾಕಿರುವುದು, 157 ಕಡೆ ಪಾದಚಾರಿ ಮಾರ್ಗಗಳಲ್ಲಿ ಪೆಟ್ಟಿಗೆ ಅಂಗಡಿಗಳ ತೆರವು, 51 ಕಡೆ ಕಟ್ಟಡ ಭಗ್ನಾವಶೇಷಗಳನ್ನು ಹಾಕಿರುವುದು, 330 ಕಡೆ ಹೈ-ಮಸ್ಟ್ ಲೈಟ್ ಅಳವಡಿಸುವುದು, 427 ಕಡೆ ಅವೈಜ್ಞಾನಿಕ ರಸ್ತೆ ಉಬ್ಬುಗಳಿರುವುದನ್ನು ಕೂಡಲೆ ಸರಿಪಡಿಸಲು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದರು.

ಇದನ್ನೂ ಓದಿ:ಬಸವನಗುಡಿ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಹರಿದು ಬರುತ್ತಿದೆ ಜನಸಾಗರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.